ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ ಸಿಎಂ ಬೊಮ್ಮಾಯಿ ಅವರು  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಅಂತಾರಾಷ್ಟ್ರೀಯ […]

ಪೆಟ್ರೋಲ್‌ ಬೆನ್ನಲ್ಲೇ ಇದೀಗ ಡೀಸೆಲ್‌ ದರ ಕೂಡ ರಾಜ್ಯದಲ್ಲಿ ಶತಕದ ಬಾರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಏರಿಕೆ ಮುಂದುವರಿದರೆ ವಾರದೊಳಗೆ ಡೀಸೆಲ್‌ದರ 100ರ ಗಡಿ ದಾಟಲಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶುಕ್ರವಾರ ಒಂದು ಲೀಟರ್‌ ಡೀಸೆಲ್‌ ದರ 99.65 ರು. ತಲುಪಿದ್ದು, ಇದೇ ರಾಜ್ಯದ ಅತಿಹೆಚ್ಚಿನ ದರವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದ 10 ಕಡೆ ಡೀಸೆಲ್‌ ದರ 99 ರೂ. ದಾಟಿದೆ, ಶತಕದತ್ತ ದಾಪುಗಾಲಿಡುತ್ತಿದೆ. ಬಳ್ಳಾರಿ​- […]

ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್ ಆಯ್ತು ಈಗ ಟೊಮೆಟೊ ಸರದಿ. ಮಹಾಮಾರಿ ಕೊರೊನಾ ಮಧ್ಯೆ ಟೊಮೆಟೊ ಬೆಲೆ ಕೂಡ ಗಗನಕ್ಕೇರಿದೆ. ರಾಜ್ಯದ ಭಾರೀ ಮಳೆಗೆ ಟೊಮೆಟೊ ದುಬಾರಿಯಾಗಿದೆ. ಒಂದು ಕೆ.ಜಿಗೆ 10 ರೂಪಾಯಿ ಇದ್ದ ಟೊಮೆಟೊ ದಿಢೀರನೆ ಏರಿಕೆ […]

ಬೆಂಗಳೂರು: ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್‌ ಹಾಕಿಲ್ಲ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್‌ ತಮಗೆ ಬಿಟ್ಟು ಕೊಡುವಂತೆ ಕೇಳಿದರು. ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆ‘ ಎಂದು ಆರ್‌. ಅಶೋಕ ಹೇಳಿದರು. ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ […]

ಕಡುಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಕೆಲಸ ಕರ್ನಾಟಕ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದರು. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿಂದು ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನಗಳ ಸಂಸ್ಥೆ ಮತ್ತು ಅಂಗಾಂಗ ಕಸಿ ಮಾಡುವ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಉಚಿತವಾಗಿ ಅಂಗಾಂಗ ಕಸಿ ಚಿಕಿತ್ಸೆ ನೀಡುವ ಮೂಲಕ ಇತರೆ ರಾಜ್ಯಗಳಿಗಿಂತ ಕರ್ನಾಟಕ ಮುಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಡವರಿಗೆ ಅಂಗಾಂಗ ಕಸಿ ಮಾಡಿಸಿಕೊಳ್ಳುವುದು ಕಷ್ಟ. […]

ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ ಅನುಮಾನಕ್ಕೆ ಕಾರಣವಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕೋವಿಡ್ ಗಾಗಿ ಪ್ರತ್ಯೇಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡದ ಸುಳಿವು ಇಲ್ಲದಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ಮೆಟ್ರೋ ಉದ್ಘಾಟನೆ ಸಂದರ್ಭದಲ್ಲಿಯೂ ಕೂಡ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಜನರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತದೆ ಕಥೆ […]

ದೊಮ್ಮಲೂರು ಮೇಲುಸೇತುವೆ(ಈಜೀಪುರದ ಕಡೆ ಹೋಗುವ ರಸ್ತೆ) ಹತ್ತಿರ ಮಳೆ ನೀರು ಹರಿದು ಹೋಗುವ 3 ಕ್ರಾಸ್ ಕಲ್ವರ್ಟ್ ಗಳು ರಸ್ತೆ ಕೆಳಗೆ ಹಾದು ಹೋಗಿದ್ದು, ಅವುಗಳಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸಿ ರೀಮಾಡೆಲಿಂಗ್ ಮಾಡಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ದೊಮ್ಮಲೂರು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ದೊಮ್ಮಲೂರು ಮೇಲುಸೇತುವೆ […]

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸತೀಶ್ ಹಾಗೂ ವಸಂತ ಎಂದು ಗುರುತಿಸಲಾಗಿದ್ದು, ಬಂಧಿತರಿಂದ ಬರೋಬ್ಬರಿ 45 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಶಾಖಪಟ್ಟಣಂನಿಂದ  ರೈಲಿನ ಮೂಲಕ ಬೆಂಗಳೂರಿಗೆ ಗಾಂಜಾ ತಂದು ಸಣ್ಣ ಸಣ್ಣ ಪ್ಯಾಕೇಟ್ ಗಳಾಗಿ ಮಾಡಿ ಮಾರಾಟ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಇದನ್ನೂ ಓದಿ: ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್.!

ಸಿಡಿ ಕೇಸ್‌ನಲ್ಲಿ ಸಿಲುಕಿರುವ ಯುವತಿಗೆ ರಕ್ಷಣೆ ಕೊಡುವುದಾಗಿ ಇದಾಗಲೇ ಕಾಂಗ್ರೆಸ್‌ನ ಹಲವಾರು ಶಾಸಕಿಯರು ಮುಂದೆ ಬಂದಿರುವ ಬೆನ್ನಲ್ಲೇ ಇದೀಗ ಸಚಿವೆ ಶಶಿಕಲಾ ಜೊಲ್ಲೆ ಕೂಡ ರಕ್ಷಣೆ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೊಲ್ಲೆ 2ನೇ ವಿಡಿಯೋದಲ್ಲಿ ಆ ಯುವತಿ ಏನು ಹೇಳಿದ್ದಾರೆ ನೋಡಿಲ್ಲ. ಗೃಹ ಸಚಿವ ಬೊಮ್ಮಾಯಿ ಅವರು ಮತ್ತು ಸ್ವತಃ ಮುಖ್ಯಮಂತ್ರಿಗಳು ಆ ಮಹಿಳೆಗೆ ರಕ್ಷಣೆ ಕೊಡುವುದಾಗಿ ಸದನದಲ್ಲಿ ಹೇಳಿದ್ದಾರೆ. ಈಗ ನಮ್ಮಿಂದ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. […]

Advertisement

Wordpress Social Share Plugin powered by Ultimatelysocial