ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್, ಅರವಿಂದ್ ಬೆಲ್ಲದ್, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಆನಂದ್ ಬಢೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ರಾಜ್ಯ ಸರ್ಕಾರದೊಂದಿಗೆ ಮಾಡಿಕೊಂಡ ಒಪ್ಪಂದದಂತೆ ರಾಜ್ಯದಲ್ಲಿ 150 ಸರ್ಕಾರಿ ಐಟಿಐ ಗಳ ಉನ್ನತೀಕರಣವನ್ನು ಟಾಟಾ ಟೆಕ್ನಾಲಜೀಸ್ ಸಂಸ್ಥೆ ಇತರ ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದೊಂದಿಗೆ ಕೈಗೆತ್ತಿಕೊಂಡಿದ್ದು, ಮೂಲಸೌಕರ್ಯ ಉನ್ನತೀಕರಣ ಬಹುತೇಕ ಪೂರ್ಣಗೊಂಡಿದೆ. ಜೊತೆಗೆ ಐಟಿಐ ಬೋಧಕ ಸಿಬ್ಬಂದಿಗೂ ತರಬೇತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಮುಖ್ಯಮಂತ್ರಿಯವರು ಐಟಿಐಗಳ ಒಟ್ಟಾರೆ ಅಭಿವೃದ್ಧಿಗೆ, […]

ಬೃಹತ್ ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿವನಗರ 1ಮತ್ತು 8ನೇ ಮುಖ್ಯರಸ್ತೆ ಕೂಡುವ  ಸ್ಥಳದಲ್ಲಿ 71.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇಂಟಿಗ್ರೇಟೆಡ್ ಮೇಲ್ಸೇತುವೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಸಿಎಂ ಜನರಿಂದ ಸಲಹೆ ಸೂಚನೆಗಳನ್ನು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ.  ಬೆಂಗಳೂರಿನ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಮೊಬೈಲ್‌ನಲ್ಲಿ ಲಭ್ಯವಾಗುವಂತೆ ಮಾಲಾಗುತ್ತಿದ್ದು, ಆಧುನಿಕ […]

Advertisement

Wordpress Social Share Plugin powered by Ultimatelysocial