ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ಮಂಗಳವಾರ ರಾತ್ರಿ ಬೋರ್‌ವೆಲ್ ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು  ಹೊರರಾಜ್ಯಗಳ ಇಬ್ಬರು ಮಧ್ಯಪ್ರದೇಶ ಹಾಗು ಮತ್ತೊಬ್ಬ ಛತ್ತೀಸ್ ಗಢ ವ್ಯಕ್ತಿಗಳೆಂದು ತಿಳಿದುಬಂದಿದೆ.ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ಸಮೀಪದ‌ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Wordpress Social Share Plugin powered by Ultimatelysocial