ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ ಎಂ.ಇ.ಎಸ್.ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧಗೊಳಿಸಿ ಹಾಗೂ ಆರೋಪಗಳನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದವರು ಟೈಯರಗೆ ಬೆಂಕಿ ಹಚ್ಚಿ ರಸ್ತೆ ತಡೆದು ಪ್ರತಿಭಟನೆ ಮಾಡಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಗೆ ಮನವಿ ಸಲ್ಲಿಸಿದರು.ನಂತರ ಮಾತನಾಡಿದ ಗದಗ ಜಿಲ್ಲಾ ಅಧ್ಯಕ್ಷ ಬಸವರಾಜ ಹಿರೇಮನಿ ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದಲ್ಲಿ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಭಗ್ನಗೊಳಿಸಿದ […]

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಂಗಳೂರು ವಿವಿಯು ಲ್ಯಾಪ್ ಟಾಪ್ ನೀಡಲು ಖರೀದಿಯನ್ನು ನಡೆಸಿದ್ದು, ಈ ಖರೀದಿಯಲ್ಲಿ ಅವ್ಯವಹಾರವು ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಈಗಾಗಲೇ ಪತ್ರಿಕೆಗಳಲ್ಲಿ ಈ ವಿಷಯವು ಪ್ರಕಟಗೊಂಡಿದೆ. ಈ ಅವ್ಯವಹಾರವನ್ನು ಎಬಿವಿಪಿ ಖಂಡಿಸಿ ಮಂಗಳೂರು ವಿವಿಯ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿತು.ರಾಷ್ಟ್ರದಾದ್ಯಂತ ಉತ್ತಮ ಹೆಸರನ್ನು ಹೊಂದಿರುವ ಮಂಗಳೂರು ವಿ.ವಿ ಈ ರೀತಿಯ ಭ್ರಷ್ಟಚಾರದ ಹಾಗೂ ಅವ್ಯವಹಾರದಿಂದ ಕೂಡಿದ ನಡೆಗಳಿಂದ ತನ್ನ ಘನತೆಯನ್ನು ಕಳೆದು […]

ಚಾಮರಾಜನಗರದ ಗೂಳಿಪುರ ಗ್ರಾಮದ ಸುಭ್ರಮಣ್ಯ ಸ್ವಾಮಿ ದೇವಸ್ಥಾನಲ್ಲಿ 5 ನೇ ವರ್ಷದ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು….ಗ್ರಾಮದಲ್ಲಿ ಸುಭ್ರಮಣ್ಯ ಸ್ವಾಮಿಯ ಉತ್ಸವವನ್ನು ನಡೆಸಿ. ನಂತರ ಅನ್ನ ಸಂತರ್ಪಣೆಯನ್ನು ಗ್ರಾಮಸ್ಥರು ಏರ್ಪಡಿಸಿದರು..ಆರಾಧನಾ ಮಹೋತ್ಸವಕ್ಕೆ ಹೊಂಡರಬಾಳು ಮಠದ ನೀಲಕಂಠಶಿವಾಚಾರ್ಯ ಸ್ವಾಮೀಜಿಗಳು ಚಾಲನೆ ನೀಡಿ ಮಾತನಾಡಿದರು..ಗ್ರಾಮಸ್ಥರು 3 ವರ್ಷಗಳಿಂದ ಈ ಅನ್ನ ಸಂತರ್ಪಣೆ ಮಾಡಿಕೊಂಡು ಬರುತ್ತಿದ್ದು, ದೇವಸ್ಥಾನದ ಭಕ್ತರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿವೃದ್ಧಿ ಆಗಲಿ ಎಂದು ಆರೈಸಿದರು…ಕೋವಿಡ್ ಕಾರಣದಿಂದ ಭಕ್ತರು ಎಲ್ಲಾ […]

ಚಿಲಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ಗೇಬ್ರಿಯಲ್ ಬೋರಿಕ್ ಚಿಲಿ ಅವರು ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಅತ್ಯಂತ ಕಿರಿಯ ಅಧ್ಯಕ್ಷ ಎಂಬ ಖ್ಯಾತಿ ಗಳಿಸಿದ್ದಾರೆ.35 ವರ್ಷದ ಗೇಬ್ರಿಯಲ್ ಬೋರಿಕ್ ಅವರು ಶೇ.56 ರಷ್ಟು ಮತಗಳನ್ನು ಪಡೆದುಕೊಳ್ಳುವ ಮೂಲಕ ಶೇ. 44 ರಷ್ಟು ಮತಗಳನ್ನು ಗಳಿಸಿದ ಸಂಪ್ರದಾಯವಾದಿ ಎದುರಾಳಿ ಜೋಸ್ ಆಂಟೋನಿಯೊ ಕಾಸ್ಟ್ ಅವರನ್ನು ಸೋಲಿಸಿದ್ದಾರೆ.ಜೋಸ್ ಆಂಟೋನಿಯೊ ಕಾಸ್ಟ್ ವಿರುದ್ಧ ಗೆಲುವು ಸಾಧಿಸಿರುವ ಗೇಬ್ರಿಯಲ್ ಬೋರಿಕ್ ಅವರು 2022ರ ಮಾರ್ಚ್ 11ರಂದು ಪ್ರಮಾಣ […]

ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಉತ್ತರಾಖಂಡ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ.ಈ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಾಹಿತಿ ನೀಡಿದ್ದು, ರಾಜ್ಯದ ರಾಯಭಾರಿಯಾಗಿ ಪಂತ್ ನೇಮಕಗೊಳ್ಳುವ ಮೂಲಕ ಯುವಕರನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ…ರಾಜ್ಯದ ಯುವಕರನ್ನು ಕ್ರೀಡೆ ಮತ್ತು ಸಾರ್ವಜನಿಕ ಆರೋಗ್ಯದ ಕಡೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತದ ಅತ್ಯುತ್ತಮ ಕ್ರಿಕೆಟ್ ಆಟಗಾರರಲ್ಲಿ ಒಬ್ಬರು, ಯುವಕರ […]

ವಿದ್ಯಾರ್ಥಿಗಳ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರಕಾರದ ಮೇಲೆ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರ ಕೂಡಲೇ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ವರು, ವೈದ್ಯಕೀಯ ಸೀಟುಗಳ ಹಂಚಿಕೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಗಳೇ ಮ್ಯಾನೇಜ್ ಮೆಂಟುಗಳಿಗೆ ಅನುಕೂಲ ಮಾಡಿಕೊಡುತ್ತಿವೆ ಎಂದಿ ದೂರಿದ್ದಾರೆ. ವೈದ್ಯ ಶಿಕ್ಷಣವನ್ನು ಹಳ್ಳಿ […]

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಬೆಳಗಾವಿ ಎಂಇಎಸ್ ಪುಂಡಾಟಿಕೆ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ ಅನ್ನೋದು ಬಹಳ ಸ್ಪಷ್ಟ ಎಂದು ಬಿಜೆಪಿ ಶಾಸಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ.ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ.ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಬೇಕಾದರೆ ಎಂಇಎಸ್ ಜೊತೆ ಇದ್ದಿದ್ದು ಕಾಂಗ್ರೆಸ್ ಕಾರ್ಯಕರ್ತರು.ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಕಾಂಗ್ರೆಸ್ ಕಾರ್ಯಕರ್ತರು.ಡಿ.ಕೆ ಶಿವಕುಮಾರ್, […]

ವಿಶ್ವದಲ್ಲಿ ಓಮಿಕ್ರಾನ್ ಪ್ರಕರಣಗಳು ಏರಿಕೆ ಕಾಣುತ್ತಿದೆ. ದೇಶದಲ್ಲಿಯೂ ದಿನೇ ದಿನ ಹೆಚ್ಚಳವಾಗುತ್ತಿದೆ. ಈ ನಡುವೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮುಂದಿನ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಓಮಿಕ್ರಾನ್‌ ಜೊತೆಗೆ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿದೆ. ಆದ್ದರಿಂದಾಗಿ ಭಾರತವು ಎಲ್ಲಾ ಸಂದರ್ಭವನ್ನೂ ಎದುರಿಸಲು ಸಿದ್ಧವಾಗಿರಬೇಕು,” ಎಂದು ಏಮ್ಸ್‌ ಅಧ್ಯಕ್ಷ ಡಾ ರಣ್‌ದೀಪ್‌ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ.ನಾವು ಯಾವುದೇ ಕ್ಷಣವನ್ನು ಎದುರಿಸಲು ಈಗಲೇ ಸಿದ್ಧವಾಗಿರಬೇಕು. ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ […]

ಬೆಳಗಾವಿಯ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸುವ ಬಗ್ಗೆ ಇಂದು ನಿರ್ಧಾರವಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ಮುಂದಿನ ಬುಧವಾರದ ನಂತರ ಮಸೂದೆ ಮಂಡನೆ ಮಾಡುವ ಸಾಧ್ಯತೆ ಹೆಚ್ಚಿದೆ. ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ಸಾಧ್ಯತೆಯಿದ್ದು, ಪ್ರತಿಭಟನೆಗಳ ನಡುವೆ ವಿಧೇಯಕ ಕುರಿತ ಚರ್ಚೆಗೂ ಅನುವು ಮಾಡಿಕೊಡಬೇಕಿದೆ.ಪ್ರಸ್ತಾವಿತ ಮಸೂದೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ […]

ಪುಂಡಾಟಿಕೆ ತಡೆಗಟ್ಟಲು ನಿರ್ಣಾಯಕ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ಪುಂಡಾಟಿಕೆ ಮುಂದುವರೆಸಲು ಅವಕಾಶ ನೀಡುವುದಿಲ್ಲ ಎಂದರು.ಮಹಾರಾಷ್ಟ್ರ ಸರ್ಕಾದೊಂದಿಗೆ ನಮ್ಮ ರಾಜ್ಯದ ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರು ಮಾತನಾಡಿ ಕನ್ನಡಿಗರು ಹಾಗೂ ಕನ್ನಡಿಗರ ಆಸ್ತಿ ಹಾಗೂ ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳಯುವಂತೆ […]

Advertisement

Wordpress Social Share Plugin powered by Ultimatelysocial