ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯೂನಿವರ್ಸಿಟಿ IGNOU) ಓಪನ್ ಮತ್ತು ಡಿಸ್ಟನ್ಸ್ ಮೋಡ್ (ODL) ಮತ್ತು ಆನ್‌ಲೈನ್ ಮೋಡ್ ಮೂಲಕ ನೀಡುವ ಕಾರ್ಯಕ್ರಮಗಳಿಗೆ ಜನವರಿ 2022 ರಂದು ಪ್ರವೇಶ ಚಕ್ರವನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ODL ಕಾರ್ಯಕ್ರಮಗಳಿಗೆ ಆನ್‌ಲೈನ್ ಪ್ರವೇಶ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಲ್ಲಾ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31. ಹೊಸ ಅರ್ಜಿದಾರರು ಹೊಸ ನೋಂದಣಿಯನ್ನು ರಚಿಸುವ ಅಗತ್ಯವಿದೆ ಮತ್ತು ಎಲ್ಲಾ […]

ಬೆಂಗಳೂರು ವಿಶ್ವ ಮಟ್ಟದಲ್ಲಿ ಅಭಿವೃದ್ಧಿಗೊಂಡಿದೆ. ಸಾರ್ವಜನಿಕರಿಗೆ ಭದ್ರತೆ ಕಲ್ಪಿಸುವುದು ಪ್ರಮುಖವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ವೈಟ್‍ಫೀಲ್ಡ್ ಭಾಗ ಪ್ರಬುದ್ದ ಕ್ಷೇತ್ರವಾಗಿದೆ. ಅಲ್ಲದೆ ಅನೇಕ ಕಂಪನಿಗಳ ಇಲ್ಲಿದ್ದು ಅನೇಕ ಸಮಸ್ಯೆಗಳು ಎದುರಾಗುವುದು ಸಹಜ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆ ಸಾರ್ವಜನಿಕರಿಗೆ ಸೂಕ್ತ ಭದ್ರತೆ ಕಲ್ಪಿಸಲು ಬದ್ದವಾಗಿದೆ ಎಂದರು.ಸಾರ್ವಜನಿಕ ಸ್ಥಳಗಳಲ್ಲಿ ಹೊಸ […]

ಬಾವುಟ ಸುಟ್ಟಿಹಾಕಿದವರ ವಿರುದ್ಧ ಇದುವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಕ್ರಮ ಆಗದೆ ಇರೋದು ಪೊಲೀಸರ ವೈಪಲ್ಯನಾ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ…ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಆಗ್ತಿದೆ.ಹೀಗಾಗಿ ಇಂತವರ ವಿರುದ್ದ ಸರ್ಕಾರದದಿಂದ ಕಠಿಣ ಕ್ರಮ ಆಗಬೇಕು.ಈಶ್ವರಪ್ಪ ಮುಖ್ಯಮಂತ್ರಿ ಗಳಿಗೆ ಒತ್ತಾಯ ಮಾಡ್ತೀನಿ ಅಂತಾರೆ.ಆದರೆ ನೀವು ಸರ್ಕಾರದ ಒಂದು ಭಾಗ.ನೀವೇ ಕ್ರಮ ಮಾಡಬಹುದಲ್ಲವಾ ಎಂದ ಡಿಕೆಶಿ. ಈ ರೀತಿ ಹೇಳ್ತಿರೋದ್ರಿಂದ ನಿಮ್ಮ ಶಕ್ತಿ ಏನಾದರೂ ಕಡಿಮೆ ಆಗಿದ್ಯಾ […]

ಬೆಳಗಾವಿಯ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸುವ ಬಗ್ಗೆ ಇಂದು ನಿರ್ಧಾರವಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ಮುಂದಿನ ಬುಧವಾರದ ನಂತರ ಮಸೂದೆ ಮಂಡನೆ ಮಾಡುವ ಸಾಧ್ಯತೆ ಹೆಚ್ಚಿದೆ. ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ಸಾಧ್ಯತೆಯಿದ್ದು, ಪ್ರತಿಭಟನೆಗಳ ನಡುವೆ ವಿಧೇಯಕ ಕುರಿತ ಚರ್ಚೆಗೂ ಅನುವು ಮಾಡಿಕೊಡಬೇಕಿದೆ.ಪ್ರಸ್ತಾವಿತ ಮಸೂದೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ […]

ಮಹಿಳೆಯರ ಮದುವೆಯ  ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರವು ಹಲವಾರು ವಲಯಗಳಿಂದ ತೀವ್ರ ಟೀಕೆಗೆ ಒಳಗಾಗಿದೆ ಮತ್ತು ಸಿಪಿಐ-ಎಂ ವಿವಿಧ ಅಂಶಗಳಲ್ಲಿ ಈ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದೆ.ಸಿಪಿಐ-ಎಂ ಪಾಲಿಟ್‌ಬ್ಯೂರೊ ಸದಸ್ಯೆ ಬೃಂದಾ ಕಾರಟ್ ಮಾತನಾಡಿ, ಸರ್ಕಾರದ ಪ್ರಸ್ತಾವನೆಯು ಮಹಿಳಾ ಸಬಲೀಕರಣದ ಹೋರಾಟಕ್ಕೆ ಸಹಾಯ ಮಾಡುವುದಿಲ್ಲ. ‘ವಯಸ್ಕರ ವೈಯಕ್ತಿಕ ಆಯ್ಕೆಯನ್ನು ಅಪರಾಧೀಕರಿಸುವುದು ಸಂಪೂರ್ಣವಾಗಿ ತಪ್ಪು. ಸರ್ಕಾರವು ಲಿಂಗ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಬಯಸಿದರೆ, ಅದು ಗಂಡುಮಕ್ಕಳ […]

ಇತರರ ನಂಬಿಕೆ ಅಥವಾ ಭಾವನೆಗಳಿಗೆ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸುವ ಅಗತ್ಯವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು   ಒತ್ತಿ ಹೇಳಿದರು.ನವದೆಹಲಿಯ ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಇತರರ ನಂಬಿಕೆ ಅಥವಾ ಭಾವನೆಗಳಿಗೆ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು  ಜವಾಬ್ದಾರಿಯುತವಾಗಿ ಬಳಸಬೇಕು. ಲೇಖಕರು ಮತ್ತು ಚಿಂತಕರು ಬೌದ್ಧಿಕತೆಯನ್ನು ಸೃಷ್ಟಿಸುವ ನಿರೀಕ್ಷೆಯಿದೆ.ಸಮಾಜದಲ್ಲಿ ಚರ್ಚೆ, ವಿವಾದಗಳನ್ನು ಪ್ರಚೋದಿಸುವುದಿಲ್ಲ ಎಂದರು.ಖ್ಯಾತ ಹಿಂದಿ ಲೇಖಕ ವಿಶ್ವನಾಥ್ ಪ್ರಸಾದ್ ತಿವಾರಿ ಅವರಿಗೆ ಈ ವರ್ಷದ ಮೂರ್ತಿದೇವಿ […]

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ, ಈ ಪಕ್ಷ ಆಧುನಿಕ ಈಸ್ಟ್ ಇಂಡಿಯಾ ಕಂಪನಿ ಎಂದು ಆರೋಪಿಸಿದ್ದಾರೆ.ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ.ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹಸುವಿನ ಹಾಲು ಕರೆಯುವುದು ಹೇಗೆಂಬುದು ಕೂಡಾ ತಿಳಿದಿಲ್ಲ ಎಂದು ಚನ್ನಿ ಟೀಕಿಸಿದ್ದಾರೆ.ಪಂಜಾಬ್ ನಲ್ಲಿ […]

ಗಂಗಾ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದ್ದು, ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದು ಮಧ್ಯಾಹ್ನ 1 ಗಂಟೆಗೆ, ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಲು ಶಹಜಹಾನ್‌ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇನೆ.ಈ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದಾದ್ಯಂತ ಸಂಪರ್ಕವನ್ನು ಸುಧಾರಿಸುವ ಪ್ರಮುಖ ಮೂಲ ಯೋಜನೆಯಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.ಉತ್ತರ […]

ದೇವನಹಳ್ಳಿ ತಾಲೂಕಿನ ಚಿಕ್ಕೋಬದೇನಹಳ್ಳಿ ಗ್ರಾಮದ ಗ್ರಾಮ ಠಾಣಾ ೮ ಎಕರೆ ೪ ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಅಕ್ರಮ ಖಾತೆಗಳನ್ನು ಸೃಷ್ಠಿ ಮಾಡಿರುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಆವರಣದ ಮುಂಭಾಗದಲ್ಲಿ ರೈತ ಸಂಘ, ಹಸಿರು ಸೇನೆ, ಪ್ರಜಾವಿಮೋಚಾನಾ ಚಳುವಳಿ ಸಂಘಟನೆ ವತಿಯಿಂದ ಗ್ರಾಮಸ್ಥರೊಡನೆ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಭೂಗಳ್ಳರ ಆವಳಿ ಹೆಚ್ಚಾಗುತ್ತಿದ್ದು, ನಕಲಿ ದಾಖಲೆಗಳ ಸೃಷ್ಠಿಕೋರರು ಸಹ ಹೆಚ್ಚಾಗುತ್ತಿದ್ದಾರೆ. ಸರಕಾರದಡಿಯಲ್ಲಿ ಸೇವೆ ಸಲ್ಲಿಸುವ […]

ಗುಡಿಬಂಡೆ: ಅಕಾಲಿಕ ಮಳೆಗೆ ತಾಲೂಕಿನಾದ್ಯಂತ ಹೆಕ್ಟೇರ್‍ಗಟ್ಟಲೇ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತ ಕಂಗಾಲಾಗಿದ್ದು, ಎಲ್ಲಾ ರೈತರಿಗೂ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಲಕ್ಷ್ಮೀನಾರಾಯಣ ತಿಳಿಸಿದರು.ಪಟ್ಟಣದ ತಾಲೂಕು ಕಛೇರಿ ಮುಂಭಾಗ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು 10 ಸಾವಿರ ಹೆಕ್ಟೇರ್ […]

Advertisement

Wordpress Social Share Plugin powered by Ultimatelysocial