ಕೆಜಿಎಫ್ ಎಸ್ಪಿ ಕಚೇರಿ, ಡಿಎಅರ್  ಸ್ಥಳಾಂತರಕ್ಕೆ ಕೋಲಾರ ಜಿಲ್ಲೆಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ… ಕೆಜಿಎಫ್ ನಗರದ ಸೂರಜ್  ಮಾಲ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತದೆ..ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕು ಬಂದ್ ಮಾಡಲಾಗಿದ್ದು ಬಂದ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಕರೆ ನೀಡಲಾಗಿತ್ತು …ಇನ್ನೂ ಬಂದ್‌ ಗೆ ಕೇಂದ್ರ ಸರ್ಕಾರದ ಬೇಮೆಲ್‌ ಕಾರ್ಖಾನೆ ಬಂದ್‌ ಗೆ ಬೆಂಬಲ ನೀಡಿದ್ದು ಆಡಳಿತ ಮಂಡಳಿ […]

ಜೆಡಿಎಸ್‌  ಯುವ ಘಟಕದ ರುದ್ರೇಶ್‌ ಮೇಲೆ ಅ.24 ರ ರಾತ್ರಿ ದುಷ್ಕರ್ಮಿಗಳಿಂದ ಮಾರಾಣಾಂತಿಕ ಹಲ್ಲೆ ನಡೆದಿತ್ತು… ಇದಕ್ಕೆ ಸಂಬಂಧಿಸಿದಂತೆ ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು… ಪೊಲೀಸರು ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂದಿಸಬೇಕು ಎಂದು ಆಗ್ರಹಿಸಿ ಇಂದು ಜೆಡಿಎಸ್ ಮುಖಂಡರಾದ ಕೆ,ಆನೇಕಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ .ಪಿ.ರಾಜು ಸೇರಿದಂತೆ  ವೀರಶೈವ ಲಿಂಗಾಯಿತ ಸಮುದಾಯದ ಮುಖಂಡರು ಆನೇಕಲ್ ಪೋಲಿಸ್ ಠಾಣೆಗೆ ಭೇಟಿ ನೀಡಿ ಪೋಲಿಸರಿಗೆ ಮನವಿ ಸಲ್ಲಿಸಿದರು. ತಾಜಾ […]

ಕೋಲಾರದ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್‌ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಗಿಂಡಿಗಳಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಗಿದ್ದು, ಈ ದುರಸ್ಥಿಗೆ  ಕೋಲಾರದ ಸಂಸದ ಎಸ್‌ ಮುನಿಸ್ವಾಮಿ ಅವರು ರಸ್ತೆಗಳನ್ನು ಮುಚ್ಚಲು ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್‌ ವ್ಯವಸ್ಥೆ  ಮಾಡಿಸಿದ್ದಾರೆ… ಬಂಗಾರಪೇಟೆ ಹೊರವಲಯದಿಂದ ಕೆಜಿಎಫ್‌ ನಗರದ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ,ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗುಂಡಿಗಳಿಂದ ಅಫಘಾತಗಳು ಸಂಭವಿಸುತ್ತಿದೆ, ಹೀಗಾಗಿ ಎಲ್ಲಾ ಗುಂಡಿಗಳನ್ನ ತಾತ್ಕಾಲಿಕವಾಗಿ ಮುಚ್ಚಿಸಲು […]

ಸಚಿವರಿಲ್ಲದೆ ರಾಜ್ಯದ ಶಕ್ತಿಸೌಧ ಖಾಲಿ ಖಾಲಿಯಾಗಿದೆ ಉಪಚುನಾವಣೆ ಪ್ರಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಟೀಮ್ ಬ್ಯೂಸಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ….ಕಳೆದ ಹಲವಾರು ದಿನಗಳಿಂದ ವಿಧಾನಸೌಧದ ಕಡೆ ಸಿಎಂ ಬೊಮ್ಮಾಯಿ ಮುಖ ಮಾಡಿಲ್ಲ  ಉಪಚುನಾವಣೆ ಪ್ರಚಾರದಲ್ಲಿಯೇ  ಸಿಎಂ ಅವರು  ಫುಲ್ ಬ್ಯೂಸಿಯಾಗಿದ್ದಾರೆ…ರಾಜ್ಯದ ಎಲ್ಲಾ ಕೆಲಸಗಳನ್ನು ಸೈಡಿಗಿಟ್ಟು ಬೈ ಎಲೆಕ್ಷನ ಪ್ರಚಾರದಲ್ಲಿ  ಸಿಎಂ ನಿರತರಾಗಿದ್ದಾರೆ….ಉಪಚುನಾವಣೆ ನಡೆಯುವ ಕ್ಷೇತ್ರದಲ್ಲೆ ಠಿಕಾಣಿ ಹುಡಿದ್ದಾರೆ..ಇನ್ನು ಸಿಎಂ ಜೊತೆಗೆ ಮಂತ್ರಿಗಳು ಸಹ ಪ್ರಚಾರ ನಡೆಸುತ್ತಿದ್ದಾರೆ.ರಾಜ್ಯದ […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಂತರ ಇದು ಕಾಂಗ್ರೆಸ್‌ನ ಎರಡನೇ ಪ್ರಮುಖ ಸಭೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಕೇಳಿಬರುವ ಸಾಧ್ಯತೆ ಇದೆ. ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಪೆಟ್ರೋಲ್  ಮತ್ತು ಡೀಸೆಲ್  ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ, ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ […]

ಅಮೆರಿಕ, ಬ್ರೆಜಿಲ್‌, ಜಪಾನ್‌ಗಳಿಗಿಂತಲೂ ಹೆಚ್ಚಿನ ಜನರಿಗೆ ಕೋವಿಡ್‌ ಲಸಿಕೆ ನೀಡಿರುವುದು ಭಾರತದ ಐತಿಹಾಸಿಕ ಸಾಧನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಕಾರಣ ಎಂದ ಆರೋಗ್ಯ ಸಚಿವ ಕೆ.ಸುಧಾಕರ್‌ ಕೊರೋನಾ ಸಂಪೂರ್ಣ ಕಡಿಮೆಯಾಗಿದೆ ಎಂಬ ಉದಾಸೀನತೆ ಬೇಡ. ಮೊದಲ ಡೋಸ್‌ ಹಾಕಿಸಿಕೊಂಡು 2ನೆಯ ಡೋಸ್‌ ಹಾಕಿಸಿಕೊಳ್ಳದವರು ಕೂಡಲೇ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು. ನಗರದಲ್ಲಿ ಶುಕ್ರವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 100 ಕೋಟಿ ಲಸಿಕೆ ಸಾಧನೆ ವಿಚಾರ ಹಂಚಿಕೊಂಡ […]

ಬಿ.ಎಸ್. ಯಡಿಯೂರಪ್ಪ ಅವರನ್ನು ನಾನು ತಡರಾತ್ರಿ ಭೇಟಿ ಮಾಡಿರುವುದನ್ನು ಹೆಚ್‌ .ಡಿ. ಕುಮಾರಸ್ವಾಮಿ ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರು ತಡರಾತ್ರಿ ಭೇಟಿ ಮಾಡಿದ್ದೇ ಆದಾಯ ತೆರಿಗೆ ದಾಳಿಗೆ ಮೂಲಕ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ […]

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಜರಾಯಿ ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ಅವರು, ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು. ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ […]

ಆಮ್​ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದೂರು ಹೇಳುವ ಒಂದೂ ಅವಕಾಶವನ್ನು ಬಿಡುವುದಿಲ್ಲ. ಇದೀಗ ದೇಶದ ಕೆಲವು ರಾಜ್ಯಗಳಿಗೆ ಕಲ್ಲಿದ್ದಲಿನ ಪೂರೈಕೆ ಕಡಿಮೆಯಾಗಿ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಕೇಜ್ರಿವಾಲ್​ ಕೂಡ ವಿದ್ಯುತ್​ ಉತ್ಪಾದಕ ಘಟಕಗಳಿಗೆ ಕೇಂದ್ರದಿಂದ ಕಲ್ಲಿದ್ದಲು ಪೂರೈಕೆ ಕಡಿಮೆ ಆಗಿ ದೆಹಲಿಗೆ ವಿದ್ಯುತ್​ ಅಭಾವ ಎದುರಾಗುವ ಚಿಂತಾಜನಕ ಸ್ಥಿತಿ ಇದೆ […]

ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ ಸಿಎಂ ಬೊಮ್ಮಾಯಿ ಅವರು  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಅಂತಾರಾಷ್ಟ್ರೀಯ […]

Advertisement

Wordpress Social Share Plugin powered by Ultimatelysocial