ಮೈಸೂರು, ನವೆಂಬರ್ 1: 2021ರ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂಪಾಯಿಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖರ್ಚು- ವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚು- ವೆಚ್ಚಗಳ ಸಂಪೂರ್ಣ ಮಾಹಿತಿಯನ್ನು […]

ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಕನ್ನಡಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೌಶಲ್ಯಯ ಮತ್ತು ಅರೆಕೌಶಲ್ಯ ವಲಯದಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಉದ್ಯೋಗಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಖಾಸಗಿ ಕ್ಷೇತ್ರದಲ್ಲಿ ಹೂಡಿಕೆಯಾಗುವ ಬಂಡವಾಳದಿಂದ ಸೃಷ್ಟಿಯಾಗುವ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ದೊರಕುವಂತೆ ಮಾಡಲಾಗುವುದು. ಸರ್ಕಾರಿ […]

ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ  ಕನ್ನಡ  ಗೀತಗಾಯನ ಕಾರ್ಯಕ್ರಮವನ್ನು ಕೆಆರ್ ಪುರದ ಪ್ರಥಮ ದರ್ಜೆ ಕಾಲೇಜಿನ  ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ  ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ಹಮ್ಮಿಕೊಳ್ಳಲಾಗಿತ್ತು . ಕಾರ್ಯಕ್ರಮದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು …..ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ,  ಕನ್ನಡ  ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ   ರಾಜ್ಯಾದ್ಯಂತ ಕನ್ನಡ ಗೀತೆಗಾಯನ ಅಭಿಯಾನ  ಮಾಡಲು ಆದೇಶವನ್ನು   ಹೊರಡಿಸಿದ್ದಾರೆ…  […]

ಸತತ 2 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ.  ಇನ್ನು ಪೆಟ್ರೋಲ್ ಬೆಲೆಯೊಂದೇ ಅಲ್ಲ ಲೀಟರ್ ಡೀಸೆಲ್ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ Rs 111.70, ಡೀಸೆಲ್ Rs 102.60 ಆಗಿದೆ. […]

Advertisement

Wordpress Social Share Plugin powered by Ultimatelysocial