ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ಯುಜಿ-ಪಿಜಿ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಲು ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಕೆ. ಪಳನಿಸ್ವಾಮಿ, ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಮಾರ್ಗದರ್ಶನದ ಮೇಲೆ ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಪದವಿ ಕಲೆ, ವಿಜ್ಞಾನ, ಎಂಜಿನಿಯರಿಂಗ್, ಕಂಪ್ಯೂಡರ್ ಸೈನ್ಸ್ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.