ಶಿವಮೊಗ್ಗ:ಶಿವಮೊಗ್ಗದ ಸಾಗರ ತಾಲೂಕಿನ ತಮರಿಯಲ್ಲಿ ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿರುವ ನವಜಾತ ಶಿಶು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ರಾತ್ರಿ ನಡೆದಿದೆ. ನಿನ್ನೆ ತಡರಾತ್ರಿ ಚೈತ್ರಾ ಎಂಬ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಂಬ್ಯುಲೆನ್ಸ್‌ಗೆ ಮನವಿ ಮಾಡಿದರೂ ಯಾರೂ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಚೈತ್ರಾ ಅವರನ್ನು ಖಾಸಗಿ ವಾಹನದಲ್ಲಿ ತಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳೆ ಹೆಣ್ಣು ಮಗುವಿಗೆ […]

ನವದೆಹಲಿ, ಡಿಸೆಂಬರ್ 16: ನೂತನ CoSC ಆಗಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅಧಿಕಾರವಹಿಸಿಕೊಂಡಿದ್ದಾರೆ. ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್‌ ಆಫ್‌ ಸ್ಟಾಫ್‌ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜನರಲ್ ಬಿಪಿನ್‌ ರಾವತ್‌ ಸಾವಿನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನರವಣೆ ಅವರನ್ನು ನೇಮಕ ಮಾಡಲಾಗಿದೆ. ಸಶಸ್ತ್ರ ಪಡೆಗಳ ಮುಖ್ಯಸ್ಥ ಹುದ್ದೆ ಸೃಷ್ಟಿಗೂ ಮುನ್ನ ಈ ಹುದ್ದೆ ಇತ್ತು. […]

ಬೆಳಗಾವಿ: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಸರಕಾರ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿರುವುದನ್ನು ಎಚ್ಚೆತ್ತಿರುವ ರಾಜ್ಯ ಸರಕಾರ, ತನ್ನ ಜಮೀನನ್ನು ವಶಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ ಮತ್ತು ಭೂಕಬಳಿ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸಹ ಸ್ಥಾಪನೆ ಮಾಡಿದೆ. ವಿಧಾನಪರಿಷತ್‍ನಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಡಾ.ವೈ.ಎ.ನಾರಾಯಣಸ್ವಾಮಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಸವಿವರವಾಗಿ ಉತ್ತರಿಸಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ 14660 ಪ್ರಕರಣಗಳಲ್ಲಿ 38,888 ಎಕರೆ […]

ಬೆಳಗಾವಿ: ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ ವಿಡಿಯೋ ಕ್ಲಿಪ್’ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಕೂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದೆ. ವಿಡಿಯೋದಲ್ಲಿ ಇಬ್ಬರು ನಾಯಕರು ಅವಾಚ್ಯ ಶಬ್ಧಗಳಿಂದ ಒಬ್ಬರನ್ನೊಬ್ಬರು ನಿಂದಿಸಿರುವುದು ಕಂಡು […]

ಪಕ್ಷದ 13 ಶಾಸಕರು, ಮೂವರು ಸಂಸದರಿದ್ದರೂ ಭದ್ರಕೋಟೆ ಬೆಳಗಾವಿಯಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿಗೆ ಈ ಸೋಲು ಅನಿರೀಕ್ಷಿತವಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಸಹೋದರ ಲಖನ್ ಅವರಿಗೆ ಎರಡನೇ ಅಭ್ಯರ್ಥಿಯಾಗಿ ಟಿಕೆಟ್ ನೀಡುವಂತೆ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಪಕ್ಷದ ನಾಯಕರಿಗೆ ಮನವಿ ಮಾಡಿದ್ದರೂ, ವರಿಷ್ಠರು ಒಬ್ಬರಿಗೆ ಮಾತ್ರ ಟಿಕೆಟ್ ನೀಡಿದ್ದರು. ಪಕ್ಷೇತರರಾಗಿ ಕಣಕ್ಕಿಳಿದ ಲಖನ್ ಜಯಗಳಿಸಿದ್ದು, ಬಿಜೆಪಿ ನಾಯಕರಿಗೆ […]

ಮ್ಯಾಕ್ಸ್ ವೆಲ್ ದಂಡಯಾತ್ರೆ.. ಫೋರು.. ಸಿಕ್ಸರ್ ಗಳ ಸುನಾಮಿ ಬಿಗ್ ಬ್ಯಾಷ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟರ್, ಆಸ್ಟ್ರೇಲಿಯಾ ಕ್ರಿಕೆಟರ್ ಗ್ಲೇನ್ ಮ್ಯಾಕ್ಸ್ ವೆಲ್ ಧೂಳೆಬ್ಬಿಸಿದ್ದಾರೆ. ಪ್ರಸಕ್ತ ಬಿಗ್ ಬ್ಯಾಷ್ ಲೀಗ್ ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡ ಸಾರಥ್ಯ ವಹಿಸಿರುವ ಮ್ಯಾಕ್ಸಿ, ಪ್ರತಿ ಮ್ಯಾಚ್ ನಲ್ಲೂ ಹೌರಾ ಎನ್ನುವಂತಹ ಪ್ರದರ್ಶನ ನೀಡುತ್ತಿದ್ದಾರೆ. ಅದರಂತೆ ನಿನ್ನೆ ಸಿಡ್ನಿ ಸಿಕ್ಸರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮ್ಯಾಕ್ಸಿ ರನ್ ಸುನಾಮಿ […]

ಬೆಂಗಳೂರು, ಡಿಸೆಂಬರ್ 16; ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 24 ಜನವರಿ ಕೊನೆಯ ದಿನವಾಗಿದೆ. ಡೆಪ್ಯೂಟಿ ಡೈರೆಕ್ಟರ್ 5, ಅಸಿಸ್ಟೆಂಟ್ ಡೈರೆಕ್ಟರ್ 2, ಟೆಕ್ನಿಕಲ್ ಆಫೀಸರ್ 3, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಡೆಪ್ಯೂಟಿ ಡೈರೆಕ್ಟರ್, ಅಸಿಸ್ಟೆಂಟ್ […]

ಪ್ರಸ್ತುತ ವರ್ಷದಲ್ಲಿ ಟೀಂ ಇಂಡಿಯಾ ಎರಡು ಐಸಿಸಿ ಟ್ರೋಫಿಗಳನ್ನ ಕೈ ಚೆಲ್ಲಿದರೂ ಸಹ ಟೆಸ್ಟ್ ಕ್ರಿಕೆಟ್ ಹಾಗೂ ಲಿಮೆಟೆಡ್ ಓವರ್ ಫಾರ್ಮೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. 2020ರಲ್ಲಿ ಕೊರೊನಾವೈರಸ್ ಪರಿಣಾಮದಿಂದಾಗಿ ಹೆಚ್ಚಿನ ಕ್ರಿಕೆಟ್ ಸರಣಿ ಮುಂದೂಡಿಲ್ಪಟ್ಟಿದ್ದರೂ ಸಹ, 2021ರಲ್ಲಿ ಕ್ರಿಕೆಟ್ ಅಷ್ಟೇ ಅಲ್ಲದೇ ಕ್ರೀಡಾ ಚಟುವಟಿಕೆಗಳು ಗರಿಗೆದರಿವೆ. 2021 ರಲ್ಲಿ, ದ್ವಿಪಕ್ಷೀಯ ಸರಣಿಯಾಗಿರಲಿ ಅಥವಾ ಐಸಿಸಿ ಪಂದ್ಯಾವಳಿಯಾಗಿರಲಿ ಕೆಲವು ಕ್ರಿಕೆಟ್ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಯುವುದರಲ್ಲಿ ಯಶಸ್ವಿಯಾಗಿದೆ. ಈ ಅವಧಿಯಲ್ಲಿ ಭಾರತ […]

ಹಲವಾರು ತಜ್ಞರೊಟ್ಟಿಗೆ ವ್ಯಾಪಕವಾದ ಚರ್ಚೆ ನಡೆಸಿದ ಬಳಿಕ, ಅದರಲ್ಲೂ ಯುವ ವಯಸ್ಸಿನ ಮಹಿಳೆಯರೊಟ್ಟಿಗೆ ಆಳವಾಗಿ ಚರ್ಚಿಸಿದ ನಂತರ ಮದುವೆ ವಯಸ್ಸಿನ ಮಿತಿ ಏರಿಕೆಗೆ ಶಿಫಾರಸ್ಸು ಮಾಡಲಾಗಿದೆ. ಭಾರತದಲ್ಲಿ ಯುವತಿಯರಿಗೆ ಕನಿಷ್ಠ 18ವರ್ಷ ಆದ ವಿನಃ ಮದುವೆ ಮಾಡುವಂತೆ ಇಲ್ಲ ಎಂಬ ಕಾನೂನು ಇತ್ತು. ಅದನ್ನೀಗ ಬದಲಿಸಿ, ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 21ಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ ಅಂಗೀಕರಿಸಿದೆ. ಯುವತಿಯರ ಮದುವೆ ವಯಸ್ಸನ್ನು 18ವರ್ಷಕ್ಕೆ ನಿಗದಿಪಡಿಸಲಾಗಿದೆ. ಅದನ್ನು […]

ಬೆಂಗಳೂರು: ಕೊಲ್ಲಾಪುರದಲ್ಲಿ ನಮ್ಮ ಧ್ವಜ ದಹನ ಮಾಡಿರುವುದು ಅತ್ಯಂತ ನೀಚತನದ ಪರಮಾವಧಿ.ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್‌ ಪುಂಡರ ವಿರುದ್ಧ ಕಠಿಣವಾಗಿ ವರ್ತಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು; ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ ಎಂದಿರುವ ಅವರು. ಕನ್ನಡ ದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸಬೇಕು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಎಂಇಎಸ್‌ ಪುಂಡರು […]

Advertisement

Wordpress Social Share Plugin powered by Ultimatelysocial