ಕೋಲ್ಕತ್ತಾ: ಇತ್ತೀಚೆಗಷ್ಟೇ ಕೇರಳದಿಂದ ಕೋಲ್ಕತ್ತಾಗೆ ಮರಳಿದ 26 ವರ್ಷದ ಯುವಕನಿಗೆ ನಿಪಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇರಳದಲ್ಲಿ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬುರ್ದ್ವಾನ್ ಜಿಲ್ಲೆಯ ಈ ಯುವಕನಿಗೆ ತೀವ್ರ ಜ್ವರ, ವಾಕರಿಕೆ ಮತ್ತು ಗಂಟಲಿನ ಸೋಂಕಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕನ್ನು ಖಚಿತಪಡಿಸಲು ಯುವಕನ ಅಗತ್ಯ ಪರೀಕ್ಷೆಗಳನ್ನು ಇನ್ನೂ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ. ತೀವ್ರ ಜ್ವರದಿಂದ […]

ಚಾಮರಾಜನಗರ, ಸೆಪ್ಟೆಂಬರ್‌, 15: ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳ ಗಡಿ ಪ್ರದೇಶದ ಕೋಯಿಕ್ಕೊಡ್ ಜಿಲ್ಲೆಯಲ್ಲಿ ನಿಪಾ ವೈರಸ್‌ ಕಾಣಿಸಿಕೊಂಡಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಗುಂಡ್ಲುಪೇಟೆ ತಾಲೂಕಿನ ಗಡಿ ಚೆಕ್ಪೋಸ್ಟ್ ಮೂಲೆಹೊಳೆಯಲ್ಲಿ ಅರಣ್ಯ ಸಿಬ್ಬಂದಿ ಕೇರಳದಿಂದ ಬರುವ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸುತ್ತಿದ್ದಾರೆ.   ಕೇರಳದಲ್ಲಿ ನಿಪಾ ಹಾವಳಿ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ- ವಿವರ ತಿಳಿಯಿರಿ ಗುಂಡ್ಲುಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಅವರ ನೇತೃತ್ವದಲ್ಲಿ ಕೇರಳದಿಂದ ಬರುವ ವಾಹನಗಳ […]

ತಿರುವನಂತಪುರಂ: ಕೊರೊನಾ ಮಹಾಮಾರಿಯ ಬಾಧೆಯಿಂದ ಜನ ಹೊರಬಂದು, ನಿರ್ಭೀತಿಯಿಂದ ಜೀವನ ಸಾಗಿಸುತ್ತಿರುವ ಬೆನ್ನಲ್ಲೇ ಕೇರಳದಲ್ಲಿ ನಿಫಾ ಸೋಂಕಿನ ಹಾವಳಿ ಜಾಸ್ತಿಯಾಗುತ್ತಿದೆ. ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ನಿಫಾ ಸೋಂಕು (Nipah Virus) ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ನಿಫಾ ಸೋಂಕಿಗೆ ತುತ್ತಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಈಗಾಗಲೇ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಜನರಲ್ಲಿ ಆತಂಕ ಜಾಸ್ತಿಯಾಗುತ್ತಿದೆ. ಹಾಗೆಯೇ, ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗುತ್ತದೆ ಎಂಬ ಮಾತುಗಳು ಕೂಡ ಕೇಳಿಬಂದಿವೆ. ಸೋಂಕಿತರ […]

ಕೇರಳದಲ್ಲಿ ಪತ್ತೆಯಾಗಿರುವ ನಿಫಾ ವೈರಾಣು ಬಾಂಗ್ಲಾದೇಶದ್ದಾಗಿದ್ದು, ಕಡಿಮೆ ಸಾಂಕ್ರಾಮಿಕ ಎಂದು ತಿಳಿದುಬಂದಿದೆ. ತಿರುವನಂತಪುರ: ಕೇರಳದಲ್ಲಿ ಪತ್ತೆಯಾಗಿರುವ ನಿಫಾ ವೈರಾಣು ಬಾಂಗ್ಲಾದೇಶದ್ದಾಗಿದ್ದು, ಕಡಿಮೆ ಸಾಂಕ್ರಾಮಿಕ ಎಂದು ತಿಳಿದುಬಂದಿದೆ. ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಪುಣೆಯ ತಂಡ ಕೇರಳಕ್ಕೆ ಆಗಮಿಸಲಿದ್ದು, ಮೊಬೈಲ್ ಲ್ಯಾಬ್ ನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಸ್ಥಾಪಿಸಿ ನಿಫಾ ವೈರಾಣು ಸೋಂಕು ಮಾದರಿಗಳನ್ನು ಸಂಗ್ರಹಿಸಲಿದೆ ಎಂದು ಕೇರಳ ರಾಜ್ಯ ಸರ್ಕಾರ ಹೇಳಿದೆ. ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಾಲ್ವರಿಗೆ ನಿಫಾ ಸೋಂಕು […]

ಕಾಸರಗೋಡು,ಸೆ.13- ನಿಪಾ ವೈರಸ್‍ಗೆ ಇಬ್ಬರು ಬಲಿಯಾಗಿರುವ ಹಿನ್ನೆಲೆಯಲ್ಲಿ ಕೇರಳದ ಕೋಜಿಕೋಡ್ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳನ್ನು ಕಂಟೋನ್ಮೆಂಟ್ ವಲಯಗಳೆಂದು ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮಹಾಮಾರಿ ನಿಪಾ ವೈರಸ್‍ಗೆ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೋಜಿಕೋಡ್ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳನ್ನು ಕಂಟೋನ್ಮೆಂಟ್ ವಲಯಗಳೆಂದು ಘೋಷಿಸಲಾಗಿದೆ. ವೈರಾಣು ಇತರೆ ಭಾಗಗಳಿಗೆ ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಕೇರಳದ ಕೊಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ದೃಢಪಡಿಸಿದ್ದಾರೆ. ಕೋಯಿಕ್ಕೋಡ್: ಕೇರಳದ ಕೊಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ದೃಢಪಡಿಸಿದ್ದಾರೆ. ನಿಫಾ ವೈರಾಣು ಮತ್ತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ತಜ್ಞರ ತಂಡವನ್ನು ಕೇಂದ್ರದಿಂದ ಕಳಿಸಲಾಗಿದ್ದು ಈ ತಂಡ ಕೇರಳ ಸರ್ಕಾರಕ್ಕೆ ವೈರಾಣು ನಿಯಂತ್ರಣದಲ್ಲಿ ಸಹಾಯ ಮಾಡಲಿದೆ ಎಂದು […]

ಕೇರಳ: ರಾಜ್ಯದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವೈರಲ್ ಕಾಯಿಲೆಯಿಂದ ಇಬ್ಬರು ಸಾವನ್ನಪ್ಪಿರುವುದು ದೃಢಪಟ್ಟ ನಂತರ ಕೇರಳದಲ್ಲಿ ಮತ್ತೆ ನಿಪಾಹ್ ಸೋಂಕಿನ ಪ್ರಕರಣಗಳು ಅಬ್ಬರಿಸುತ್ತಿವೆ. 9 ಮತ್ತು 24 ವರ್ಷದ ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಆಗಸ್ಟ್ 30 ರಂದು ನಿಧನರಾದ ಮೊದಲ ಬಲಿಪಶುವಿನ ಕುಟುಂಬ ಸದಸ್ಯರು ಇವರಾಗಿದ್ದಾರೆ. ಹಾಗಾದ್ರೇ ನೀಫಾ ವೈರಸ್ ಹರಡೋದು ಹೇಗೆ.? ಏನೆಲ್ಲಾ ಎಚ್ಚರಿಕೆ ವಹಿಸಬೇಕು ಅಂತ ಮುಂದೆ ಓದಿ. ನಿಪಾಹ್ ವೈರಸ್ ಕೋವಿಡ್ -19 ವೈರಸ್ನಷ್ಟು ವೇಗವಾಗಿ […]

Advertisement

Wordpress Social Share Plugin powered by Ultimatelysocial