ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ, ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ದೊಡ್ಡ ಅಂಗಡಿಯಲ್ಲಿ ಪಟಾಕಿ ಸ್ಫೋಟಗೊಂಡು, ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಪಟಾಕಿ ಅಂಗಡಿ ಬಳಿಯಿದ್ದ ಬೇಕರಿಯೊಂದಕ್ಕೂ ಬೆಂಕಿ ವ್ಯಾಪಿಸಿ ಭಯಂಕರ ಶಬ್ಧದೊಂದಿಗೆ ಸಿಲಿಂಡರ್ ಸಹ ಸ್ಫೋಟಗೊಂಡಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : […]
#Pataki
ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ – ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ನಿಂದ ಮನವಿ ಪಟಾಕಿ ನಿಷೇಧ ಕೋರಿರುವ ಮೇಲ್ಮನವಿಯ ತ್ವರಿತ ವಿಚಾರಣೆಗೆ ಒತ್ತು ನೀಡಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ), ಕರ್ನಾಟಕವೂ ಸೇರಿದಂತೆ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್ […]