ರಾಜ್ಯ ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಸಹಯೋಗದೊಂದಿಗೆ ಅಸ್ಸಾಂ ಪೊಲೀಸರು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಶಿಬಿರವನ್ನು ಆಯೋಜಿಸಿದ್ದರು. ಕೊರೊನಾದಿಂದ ಚೇತರಿಸಿಕೊಂಡ 43 ಮಂದಿ ಪೊಲೀಸ್ ಸಿಬ್ಬಂದಿ ಶಿಬಿರದಲ್ಲಿ ಪ್ಲಾಸ್ಮಾ ದಾನ ಮಾಡಿದರು. ಅಸ್ಸಾಂನ ಒಟ್ಟು 67 ಪೊಲೀಸ್​ ಸಿಬ್ಬಂದಿ ಸ್ವಯಂಪ್ರೇರಿತರಾಗಿ ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾವನ್ನು ದಾನ ಮಾಡಲು ಮುಂದೆ ಬಂದಿದ್ದರು. ಆದರೆ ಅವರಲ್ಲಿ 43 ಸಿಬ್ಬಂದಿಯು ಪ್ಲಾಸ್ಮಾ ದಾನಕ್ಕೆ ಅರ್ಹರಾಗಿರುತ್ತಾರೆ. […]

Advertisement

Wordpress Social Share Plugin powered by Ultimatelysocial