ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ. ಎಂ.ಎ. ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದರು.ಈ ಎಲ್ಲಾ ಬೆಳವಣಿಗೆಗಳ […]

ಬಿ.ಎಸ್. ಯಡಿಯೂರಪ್ಪ ಅವರನ್ನು ನಾನು ತಡರಾತ್ರಿ ಭೇಟಿ ಮಾಡಿರುವುದನ್ನು ಹೆಚ್‌ .ಡಿ. ಕುಮಾರಸ್ವಾಮಿ ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರು ತಡರಾತ್ರಿ ಭೇಟಿ ಮಾಡಿದ್ದೇ ಆದಾಯ ತೆರಿಗೆ ದಾಳಿಗೆ ಮೂಲಕ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ […]

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ನಡೆದ ಐಟಿ, ಇಡಿ ದಾಳಿ ರಾಜಕೀಯ ಪ್ರೇರಿತ ಎನ್ನುವ ಕಾಂಗ್ರೆಸಿಗರೇ, ನಿಮ್ಮ ಭ್ರಷ್ಟಾಧ್ಯಕ್ಷನ ಧನ ಸಂಪಾದನೆಯ ಮಾರ್ಗ ಯಾವುದೆಂದು ನಿಮ್ಮದೇ ಪಕ್ಷದ ನಾಯಕರಾದ […]

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಜರಾಯಿ ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ಅವರು, ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು. ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ […]

ಆಮ್​ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದೂರು ಹೇಳುವ ಒಂದೂ ಅವಕಾಶವನ್ನು ಬಿಡುವುದಿಲ್ಲ. ಇದೀಗ ದೇಶದ ಕೆಲವು ರಾಜ್ಯಗಳಿಗೆ ಕಲ್ಲಿದ್ದಲಿನ ಪೂರೈಕೆ ಕಡಿಮೆಯಾಗಿ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಕೇಜ್ರಿವಾಲ್​ ಕೂಡ ವಿದ್ಯುತ್​ ಉತ್ಪಾದಕ ಘಟಕಗಳಿಗೆ ಕೇಂದ್ರದಿಂದ ಕಲ್ಲಿದ್ದಲು ಪೂರೈಕೆ ಕಡಿಮೆ ಆಗಿ ದೆಹಲಿಗೆ ವಿದ್ಯುತ್​ ಅಭಾವ ಎದುರಾಗುವ ಚಿಂತಾಜನಕ ಸ್ಥಿತಿ ಇದೆ […]

ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ ಅನುಮಾನಕ್ಕೆ ಕಾರಣವಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕೋವಿಡ್ ಗಾಗಿ ಪ್ರತ್ಯೇಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡದ ಸುಳಿವು ಇಲ್ಲದಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ಮೆಟ್ರೋ ಉದ್ಘಾಟನೆ ಸಂದರ್ಭದಲ್ಲಿಯೂ ಕೂಡ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಜನರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತದೆ ಕಥೆ […]

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಕ್ಟೋಬರ್ 16 ರಂದು ನಡೆಯಲಿದೆ. ಲಖಿಂಪುರ್ ಖೇರಿ ಹಿಂಸಾಚಾರ ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆ ಮಹತ್ವ ಪಡೆದಿದೆ. ಈ ಹಿಂದೆ ಜಿ 23 ನಾಯಕರ ಬೇಡಿಕೆಯಂತೆ ಪಕ್ಷದ ಅತ್ಯುನ್ನತ ಕಾರ್ಯಕಾರಿ ಮಂಡಳಿಯು ತನ್ನ ಪಂಜಾಬ್ ಘಟಕದಲ್ಲಿನ ರಾಜಕೀಯ ಪ್ರಕ್ಷುಬ್ಧತೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಪರಿಹರಿಸುವ ಸಾಧ್ಯತೆಯಿದೆ.ಪಕ್ಷದ ಕಾರ್ಯಕರ್ತರ ಪ್ರಕಾರ ಸಭೆ ಭೌತಿಕವಾಗಿ ನಡೆಯಲಿದೆ.covid ಕಾರಣದಿಂದಾಗಿ ಕಳೆದ 18 ತಿಂಗಳುಗಳಿಂದ, CWC […]

ಬೆಂಗಳೂರು ನಗರ ಉಸ್ತುವಾರಿ ವಿಚಾರವಾಗಿ ಸಚಿವ ವಿ.ಸೋಮಣ್ಣ ಹಾಗೂ ಆರ್.ಅಶೋಕ್ ನಡುವೆ ಪೈಪೋಟಿ ತೀವ್ರಗೊಂಡಿದ್ದು, ಸಚಿವ ಆರ್.ಅಶೋಕ್ ವಿರುದ್ಧ ವಿ.ಸೋಮಣ್ಣ  ಗರಂ ಆಗಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ಬೆಂಗಳೂರು ಉಸ್ತುವಾರಿಯನ್ನು ನೀಡುವಾಗ ಮುಖ್ಯಮಂತ್ರಿಗಳು ಜೇಷ್ಠತೆಯನ್ನು ಪರಿಗಣಿಸಬೇಕು. ಉಸ್ತುವಾರಿ ಸಿಎಂ ಬಳಿಯೇ ಇದ್ದರೆ ನಮ್ಮ ಅಭ್ಯಂತರವಿಲ್ಲ, ಆದರೆ ಬೇರೆಯವರಿಗೆ ಕೊಟ್ಟರೆ ನನ್ನನ್ನು ಪರಿಗಣಿಸಬೇಕು ನಾನು ಬೆಂಗಳೂರಿಗೆ ಹಿರಿಯ ಸಚಿವ ಎಂಬುದನ್ನು ಹೇಳಿದ್ದೇನೆ .. ಬೆಂಗಳೂರಿನ ಉಸ್ತುವಾರಿ ಮಾಡಲು ಯಾರ ಅನುಭವ ಏನು […]

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ? ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ […]

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

Advertisement

Wordpress Social Share Plugin powered by Ultimatelysocial