ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕಚೇರಿಯಲ್ಲಿ  ಸಚಿವ ಬಿ.ಸಿ.ನಾಗೇಶ್ ಅವರು  ಬೆಳಗ್ಗೆ 11 ಗಂಟೆಗೆ  ಒಂದು ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಡಿಡಿಪಿಐ, ಬಿಇಒ ಸೇರಿದಂತೆ ಇಲಾಖೆಯ ಎಲ್ಲಾ   ಅಧಿಕಾರಿಗಳು ಭಾಗಿಯಾಗಲಿದ್ದು, ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ.  ರಾಜ್ಯದ ಶಾಲೆಗಳಲ್ಲಿ […]

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು. ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸಲು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ಇವುಗಳ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು […]

ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ  ಪರಿಚಯಿಸಲು ಯೋಜನೆ ಮಾಡಿದ್ದೇವೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ. 26 […]

ಶತಮಾನದ ಅಭಿಮಾನ ಬೆಳವಾಡಿ ಶಾಲೆಗೆ ಕಾಂಗ್ರೆಸ್ ಮುಖಂಡರು ಮತ್ತು ಖ್ಯಾತ ಮಕ್ಕಳ ತಜ್ಞರಾದ ಡಾಕ್ಟರ್ ದಿನೇಶ್ ಭೈರೇಗೌಡ ಭೇಟಿನೀಡಿ , ಮಕ್ಕಳ ಮನೆಯ ಪುಟಾಣಿಗಳಿಗೆ ಕಪ್ಪು-ಬಿಳುಪು VKC ಶೂಗಳು ಹಾಗೂ‌ ಓಆರ್ ಸ್‌ ಉಡುಗೊರೆಯಾಗಿ ನೀಡಿದರು.ಶಾಲೆಯ ಕಾರ್ಯಚಟುವಟಿಕೆಗಳ ಮತ್ತು ಪ್ರಗತಿ ಸಂಬಂಧಿಸಿದಂತೆ ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ಸುದೀರ್ಘ ಸಂವಾದ ನಡೆಸಿದ ಅವರು, ಕೊರೋನಾದ ಈ ಕಾಲದಲ್ಲಿ ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಮನದಟ್ಟಾಗುವಂತೆ ಸರಳವಾಗಿ […]

ರಾಜ್ಯಾದಂತ್ಯ  ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಸರಿಯಾಗಿ ಬಸ್‍ಗಳ ವ್ಯವಸ್ಥೆ ಇಲ್ಲದೆ… ಮಕ್ಕಳು ಜೋತು ಬಿದ್ದು ಬಸ್‍ನಲ್ಲಿ ಪ್ರಯಾಣ ಮಾಡಿರುವ ಘಟನೆ ಬೆಳಗಾವಿಯಲ್ಲಿ ಕಂಡು ಬಂದಿದೆ.ಜಿಲ್ಲೆಯ ಬೆಳಗುಂದಿ ಗ್ರಾಮಕ್ಕೆ ಹೋಗುವ ಬಸ್‍ನಲ್ಲಿ ವಿದ್ಯಾರ್ಥಿಗಳು ಬಸ್‍ನಲ್ಲಿ ಜೋತು ಬಿದ್ದಿದ್ದ ದೃಶ್ಯ ಕಂಡು ಬಂದಿದ್ದು, ಈ ರೀತಿ ಬಸ್‍ನಲ್ಲಿ ಜೋತು ಬಿದ್ದು ಹೋಗುವಾಗ ವಿದ್ಯಾರ್ಥಿಗಳ ಜೀವಕ್ಕೆ ಏನಾದ್ರು ಕುತ್ತು ಬಂದರೆ ಯಾರು ಹೊಣೆ, ಆದ್ದರಿಂದ ಕೂಡಲೇ  ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಇತ್ತ ಲಕ್ಷ್ಯ […]

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು  2021-22ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಬಿಎಂಟಿಸಿ ಬಸ್ಸಿನಲ್ಲಿ ( BMTC Bus ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ನಿರ್ದೇಶನದಂತೆ 2021-22ನೇ ಶೈಕ್ಷಣಿಕ ಸಾಲಿನ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಿದ್ದು, ಸಂಸ್ಥೆಯು ಸದರಿ ವಿದ್ಯಾರ್ಥಿಗಳ ( Student Bus Pass ) ಹಿತವನ್ನು ಗಮನದಲ್ಲಿಟ್ಟುಕೊಂಡು, ಸಂಸ್ಥೆಯ […]

ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ :ಕೆರೆಯ ಬಳಿ […]

ಗೋಕಾಕ ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯದ ನೀರಾವರಿ ಕ್ಷೇತ್ರದಲ್ಲಿ ಉತ್ತಮ ಕೆಲಸವನ್ನು ಮಾಡುವ ಮೂಲಕ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಡಿ ಹೊಗಳಿದ್ದಾರೆ.ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ನೂತನ ಸಂಕೀರ್ಣವನ್ನು ಉದ್ಘಾಟನೆ ಹಾಗೂ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗೋಕಾಕ ಪದವಿ ಕಾಲೇಜಿಗೆ ಇವರೆಗೂ […]

ಶಿಕ್ಷಣ ಇಲಾಖೆ ಆದೇಶ – ಕಳೆದ 5 ತಿಂಗಳ ಆಹಾರ ಧಾನ್ಯ ವಿತರಣೆ ಕೋವಿಡ್ 19 ಹರಡದಂತೆ ತಡೆಗಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಶಾಲೆಗಳನ್ನು ಆರಂಭಿಸಲಿಲ್ಲ. ಜೂನ್ನಿಂದ ಅಕ್ಟೋಬರ್ ತಿಂಗಳಲ್ಲಿ ಶಾಲೆಗಳನ್ನು ಮುಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸಲು ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಆಹಾರ ಧಾನ್ಯಗಳನ್ನು ನೀಡಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಸಾರ್ವತ್ರಿಕ ರಜೆ ಹೊರತುಪಡಿಸಿ ಐದು ತಿಂಗಳಲ್ಲಿ 108 ದಿನಗಳ ಆಹಾರ ಸಾಮಗ್ರಿಗಳನ್ನು 1ರಿಂದ 10ನೇ […]

ಜುಲೈ 1ರಿಂದ ಶಾಲೆಗಳನ್ನು ಪುನಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೊರೋನಾ ಕೇಸ್ ಶೂನ್ಯವಾಗುವವರೆಗೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ನಿರ್ಧರಿಸಿದ ಪೋಷಕರು. ಸರ್ಕಾರದ ನಿರ್ಧಾರ ಸರಿಯಿಲ್ಲ, ಜುಲೈ ನಲ್ಲಿ ಶಾಲೆ ಆರಂಭಿಸುವದು ಕೆಟ್ಟ ಯೋಚನೆಯಾಗಿದೆ, ಹಾಗೆಯೇ ಇದು ಬೆಂಕಿಯ ಜೊತೆ ಸರಸವಾಡಿದಂತೆ,  ಒಂದೇ ಒಂದು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ ನಗರದ ಪೋಷಕರ ಸಂಘ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ವಿರೋಧ ವ್ಯಕ್ತ […]

Advertisement

Wordpress Social Share Plugin powered by Ultimatelysocial