ಕೊರೋನಾ ವೈರಸ್ ಮೂರನೇ ಅಲೆ ಅಬ್ಬರ ಹೆಚ್ಚುತ್ತಿದ್ದು, ಕೋವಿಡ್ -19 ಹರಡುವಿಕೆಯನ್ನು ನಿಯಂತ್ರಿಸಲು ಬಿಎಂಆರ್ ಸಿಎಲ್ ತಕ್ಷಣದಿಂದ ಜಾರಿಗೆ ಬರುವಂತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಕರ ಪ್ರವೇಶವನ್ನು ನಿರ್ಬಂಧಿಸಲು ನಿರ್ಧರಿಸಿದೆ. ಮೆಟ್ರೋದಲ್ಲಿ ಜನಸಂದಣಿ ಕಡಿಮೆ ಮಾಡಲು ಮಾರ್ಗಸೂಚಿ ಹೊರಡಿಸಿರುವ ಸರ್ಕಾರ ಬಿಎಂಆರ್ ಸಿಎಲ್, ಆಸನ ಸಾಮರ್ಥ್ಯ ಮೀರಿ ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿ ಇಲ್ಲ ಎಂದು ಹೇಳಿದೆ. ರೈಲುಗಳಲ್ಲಿ ಲಭ್ಯವಿರುವ ಆಸನ ಸಾಮರ್ಥ್ಯದ ಆಧಾರದ ಮೇಲೆ ಸೀಮಿತ ಆಕ್ಯುಪೆನ್ಸಿಗೆ ಅನುಮತಿಸಲು ನಿಲ್ದಾಣಗಳಲ್ಲಿ ಪ್ರಯಾಣಿಕರ […]

  ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಅಪಾರ್ಟ್‌ಮೆಂಟ್‌ಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿಯನ್ನು  ಬಿಡುಗಡೆ ಮಾಡಿದೆ , ಮಾರ್ಗಸೂಚಿ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್‌ಗಳಲ್ಲಿ ಜಿಮ್‌ಗಳು, ಈಜುಕೊಳಗಳು ಮತ್ತು ಇತರ ಕ್ರೀಡಾ ಸೌಲಭ್ಯಗಳನ್ನು  ಬಂದ್ ಮಾಡಿಸಲಾಗುತ್ತಿದೆ. ಕಳೆದ 10 ದಿನಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಸೋಂಕು ಹೆಚ್ಚಳವಾಗುತ್ತಿರುವ  ಹಿನ್ನೆಲೆ ಸಮುದಾಯ ಮಟ್ಟದಲ್ಲಿ ಸೋಂಕು ನಿಯಂತ್ರಣಕ್ಕೆ ಬಿಬಿಎಂಪಿ ಕಸರತ್ತು ನಡೆಸಿದೆ. ಇದರಂತೆ ರೆಸಿಡೆಂಟ್ ವೆಲ್​ಫೇರ್​ ಅಸೋಸಿಯೇಷನ್‌ಗಳು, ಅಪಾರ್ಟ್‌ಮೆಂಟ್, […]

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸತತ ಏರಿಕೆಯಾಗುತ್ತಿದ್ದು, ಶುಕ್ರವಾರ ಎರಡೂವರೆ ಲಕ್ಷದ ಗಡಿ ದಾಟಿದೆ. ಗುರುವಾರ 2.47 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಕಳೆದ 24 ಗಂಟೆಗಳಲ್ಲಿ 2,64,202 ಹೊಸ ಕೊವಿಡ್ ಪ್ರಕರಣ ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಗುರುವಾರಕ್ಕಿಂತ ಶೇ 6.7ರಷ್ಟು ಹೆಚ್ಚು ಕೇಸ್‌ಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 1,09,345 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರಿಂದ ಒಟ್ಟು ಗುಣಮುಖರಾದವರ ಸಂಖ್ಯೆ […]

  ಹಿಂದೂಗಳಲ್ಲಿ ಒಗ್ಗಟ್ಟಿನ ಅಗತ್ಯವನ್ನು ಒತ್ತಿ ಹೇಳಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂಗಳಲ್ಲಿ ಸಾಮಾಜಿಕ ಸಮಾನತೆಯ ಅಗತ್ಯವಿದ್ದು, ಐಕ್ಯತೆಗೆ ಜಾತೀಯತೆ ಅಡ್ಡಿಯಾಗುತ್ತಿದೆ ಎಂದು ಹೇಳಿದ್ದಾರೆ. ಬುಧವಾರ ಸಂಜೆ ವಿವಿಧ ಕ್ಷೇತ್ರಗಳ ಆಯ್ದ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಆರಂಭದಿಂದಲೂ, RSS ಹಿಂದೂ ಧರ್ಮದ ಪ್ರಾಚೀನ ಮೌಲ್ಯಗಳನ್ನು ಎತ್ತಿ ಹಿಡಿದಿದ್ದು, ಇದು ವಿವಿಧತೆಯಲ್ಲಿ ಏಕತೆ, ಮಾನವೀಯತೆ ಮತ್ತು ವ್ಯಕ್ತಿತ್ವದ ಜೀವನವನ್ನು ಹೊಂದಿದೆ. ಸಂಘವು ‘ಜನನಿ’ […]

ಇಗಾಗಲೇ ಪುನೀತ್‌  ನಮ್ಮನ್ನಗಲಿ ಎರೆಡು ತಿಂಗಳಾಗಿದೆ .ಅಪ್ಪು ಅವರ ಕಡೆಯ ಸಿನಿಮಾ ‘ಜೇಮ್ಸ್​’  ಚಿತ್ರಮಂದಿರದಲ್ಲೇ ಬಿಡುಗಡೆ ಮಾಡುವುದಾಗಿ ನಿರ್ದೇಶಕ ಚೇತನ್​ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ  ಕೂಡ ಚಿತ್ರಮಂದಿರದಲ್ಲೇ ತೆರೆ ಕಾಣಲಿದೆ. ಹೀಗಾಗಿ ಅಪ್ಪು ಅವರನ್ನು ಮತ್ತೆ ತೆರೆ ಮೇಲೆ ನೋಡಬಹುದಾಗಿದೆ ಎಂದು ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಈಗ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಮೇಲೆ ಎಲ್ಲರ ಗಮನ ವಿದ್ದು. […]

ನಿನ್ನೆ  ಕಾಂಗ್ರೆಸ್ ಪಾದಯಾತ್ರೆ ಯನ್ನು ನಿಲ್ಲಿಸಲು ಸರ್ಕಾರ ಆದೇಶ ನೀಡಿತ್ತು. ಕಾಂಗ್ರೆಸ್ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದೆ. ಕೊರೋನಾ ಸಂದಿಗ್ಧ ಕಾಲದಲ್ಲಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಂಡಿಲ್ಲ ಅಂತ ನಿನ್ನೆ ಹೈಕೋರ್ಟ್,​ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಇಂದು ಕೂಡಾ ಪಾದಯಾತ್ರೆ ಮುಂದುವರಿಸುತ್ತೇವೆ ಎನ್ನುವ  ಹೇಳಿಕೆಗಳನ್ನ ನೀಡಿದ್ದರು. ಅಲ್ಲದೇ ಕೆಪಿಸಿಸಿ ಅಧ್ಷಕ್ಷ ಡಿಕೆ ಶಿವಕುಮಾರ್  ಕಾನೂನು ತಜ್ಞರ ಜೊತೆ ಚರ್ಚೆ […]

ನನಗೆ ಯಾವ ನೋಟಿಸ್ ಬಂದಿಲ್ಲ. ಈವರೆಗೆ ಯಾಕೆ ನಮ್ಮ ಪಾದಯಾತ್ರೆ ತಡೆದಿಲ್ಲ. ಸಭೆ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಇಂದು ಬೆಳಗ್ಗೆ 10 ಗಂಟೆಗೆ ರಾಮನಗರದಲ್ಲಿ ಕಾಂಗ್ರೆಸ್ ಶಾಸಕರು ಮತ್ತು ನಾಯಕರ ಸಭೆ ಕರೆದಿದ್ದು ಅಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಸರ್ಕಾರ ತಡೆಯುವುದಾದರೆ ತಡೆಯಲಿ ನೋಡೋಣ ಎಂದು ಪ್ರತಿಕ್ರಿಯಿಸಿದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

  ಮುಂದಿನ ತಿಂಗಳು ನಡೆಯಲಿರುವ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಆಮ್‌ ಅದ್ಮಿ ಪಕ್ಷ  ಹತ್ತು ಭರವಸೆಗಳನ್ನು ನೀಡಿದ್ದು, ಮಾದರಿ ಪಂಜಾಬ್‌ ನಿರ್ಮಾಣ ಮಾಡುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಮೊಹಾಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ  ಅವರು 10 ಅಂಶಗಳ ಯೋಜನೆಗಳ ಮೂಲಕ ಪಂಜಾಬ್ ಅನ್ನು ಮಾದರಿ ರಾಜ್ಯವನ್ನಾಗಿ ಪರಿವರ್ತನೆ ಮಾಡುತ್ತೇವೆ. ಅಧಿಕಾರಕ್ಕೆ ಬಂದರೆ ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ಪಂಜಾಬ್ ಅನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ […]

ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ಇಂದು  4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸ್ ಹೈಕೋರ್ಟ್ ಅಂಗಳಕ್ಕೆ ತಲುಪಿತ್ತು ಇಂದು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರಾಜ್ಯ ಹೈಕೋರ್ಟ್​ ನೋಟಿಸ್​ ನೀಡಿದೆ. ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೂ ರಾಜ್ಯ ಹೈಕೋರ್ಟ್​ ನೋಟಿಸ್ ನೀಡಿದೆ.ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ […]

  ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದನ್ನ ಗಮನಿಸಿದರೆ, ಸರ್ಕಾರವು ಎಲ್ಲಾ ಆಯಾಮದಲ್ಲೂ ಕ್ರಮ ಕೈಗೊಳ್ಳುತ್ತಿದ್ದು, ಪ್ರತಿಯೊಬ್ಬರ ಜೀವನೋಪಾಯವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿದೆ, ಆದರೆ ಈಗ ಜನರೂ ಕೂಡ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗರಿಕರು ಮಾಸ್ಕ್ ಧರಿಸಬೇಕು, ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ಹೋಗುವುದನ್ನು ನಿಯಂತ್ರಿಸಬೇಕು ಮತ್ತು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ ಸೋಂಕು ಪ್ರಕರಣಗಳ ಹೆಚ್ಚಳವನ್ನು ಪರಿಗಣಿಸಿ […]

Advertisement

Wordpress Social Share Plugin powered by Ultimatelysocial