ನಿರ್ಣಾಯಕ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 223 ರನ್‌ಗಳ ಸಾಧಾರಣ ಮೊತ್ತ ದಾಖಲಿಸಿದೆ. ಟೆಸ್ಟ್ ನ ಮೊದಲ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ತಾಳ್ಮೆಯ ಆಟವಾಡಿ 79 ರನ್ ಗಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಕ್ಷಿಣ ಆಫ್ರಿಕಾ ದಿನಾಂತ್ಯದ ವೇಳೆಗೆ ಒಂದು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

ನಡ್ಡಾ ಅವರು ಕೋವಿಡ್ ರೋಗದ ಕೆಲವು ಲಕ್ಷಣಗಳು ಕಾಣಿಸಿಕೊಂಡ ನಂತರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು,  ಅವರಿಗೂ ಕೂಡ ಪಾಸಿಟಿವ್ ಬಂದಿದೆ. ನನಗೆ ಕೊರೋನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜೆಪಿ ನಡ್ಡಾ ಅವರು ಮನವಿ ಮಾಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು  ದೃಢಪಟ್ಟಿದ್ದು, ಪ್ರಸ್ತುತ  ಹೋಮ್ ಕ್ವಾರಂಟೈನ್‌ನಲ್ಲಿರುವುದಾಗಿ  ತಿಳಿಸಿದ್ದಾರೆ. “ನಾನಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಈಗ ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಹೋಮ್ ಕ್ವಾರಂಟೈನ್ ಆಗುವಂತೆ ಮತ್ತು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸುತ್ತೇನೆ” ಎಂದು ರಕ್ಷಣಾ ಸಚಿವರು ಟ್ವೀಟ್  ಮಾಡುವ ಮೂಲಕ ತೀಳಿಸಿದ್ದಾರೆ.. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ರಟ್ಟೀಹಳ್ಳಿ ತಾಲೂಕಿನ ಗ್ರಾಮವು ಸುಮಾರು 150 ವರ್ಷಗಳಿಂದ ಇದನ್ನು ಮಾಡುತ್ತಿದೆ. 400 ಮುಸ್ಲಿಂ ಕುಟುಂಬಗಳಲ್ಲಿ ಹೆಚ್ಚಿನವರಿಗೆ ಉರ್ದು ಮತ್ತು ಅರೇಬಿಕ್ ತಿಳಿದಿಲ್ಲ, ಆದ್ದರಿಂದ ಮೌಲ್ವಿಗಳು ದಿನಕ್ಕೆ ಐದು ಬಾರಿ ಕನ್ನಡದಲ್ಲಿ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಗ್ರಾಮದಲ್ಲಿ ಮುಸ್ಲಿಮರು ಸ್ಥಳೀಯ ಭಾಷೆಯ ಬಗ್ಗೆ ಹೆಮ್ಮೆಪಡುತ್ತಾರೆ ಮತ್ತು ಇತರ ಸಮುದಾಯಗಳೊಂದಿಗೆ ಸಾಮರಸ್ಯದಿಂದ ಬದುಕುತ್ತಿದ್ದಾರೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭಾನುವಾರ ಬೆಳಿಗ್ಗೆ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ಮೆರವಣಿಗೆಗೆ ಮುಂಚಿತವಾಗಿ ಪ್ರೀತಿಯಿಂದ ಬೀಳ್ಕೊಟ್ಟರು. ಅಂತಿಮ ನಮನ ಸಲ್ಲಿಸುವ ವೇಳೆ ಬೊಮ್ಮಾಯಿ ಭಾವುಕರಾದರು. ಪುನೀತ್ ಅವರ ಪಾರ್ಥಿವ ಶರೀರದ ಮುಂದೆ ಕೈ ಜೋಡಿಸಿ, ಕಣ್ಣೀರು ಸುರಿಸಿ ಬೀಳ್ಕೊಟ್ಟರು ಮತ್ತು ಪ್ರೀತಿಯಿಂದ ಅವರ ಹಣೆಗೆ ಮುತ್ತಿಟ್ಟರು. (IANS)   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ ಘಟನೆ ಮಾಲೂರು ತಾಲ್ಲೂಕಿನ ಡಿ.ಎನ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ವೆಂಕಟೇಶ್ವರ ರಥೋತ್ಸವದ  ಜಾತ್ರೆಯಲ್ಲಿ ಸಾವಿರಾರು ಜನರು ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಭಾಗಿಯಾಗಿದರಿಂದ ಕೊರೋನಾ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.!

ಲಾರಿ ಮತ್ತು ಕಾರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದಿದೆ. ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಕಾರ್ ಚಾಲಕ ವಿಜಯಕುಮಾರ್ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಕುರಿತು ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ  ಕರ್ನಾಟಕ ಕಾಂಗ್ರೆಸ್‌ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ  ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!

ಕೆರೆಯ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಇಟ್ಟಿಗೇರಿಯಲ್ಲಿ ನಡೆದಿದ್ದು, ಸದ್ಯ  ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೇಶ್ವರ ಪಿಎಸ್ ಐ ಶಿವಯೋಗಿ ಲೋಹರ್ ಅವರು ಅನಾಮಧೇಯ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನು ಈ ಪ್ರಕರಣ ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿ -ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು 75ನೇ ʼಮನ್‌ ಕಿ ಬಾತ್‌ʼ ರೇಡಿಯೋ ಕಾರ್ಯಕ್ರಮ ಮೂಲಕ ದೇಶವನ್ನುದ್ದೇಶಿಸಿ  ಮಾತನಾಡಿದ್ದಾರೆ. ಕಳೆದ ವರ್ಷ ಇದೇ ತಿಂಗಳು ನಡೆದ ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ, ಸ್ವಾತಂತ್ರ್ಯ ಹೋರಾಟದಲ್ಲಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಹೋರಾಟಗಾರರು ಸದಾ ಪ್ರೇರಣೆಯಾಗಿ ಉಳಿದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಇನ್ನು ಇದೇ ತಿಂಗಳಲ್ಲಿ ಸ್ವಾತಂತ್ರ್ಯ ಬಂದ 75ನೇ ವರ್ಷದ ಅಮೃತ ಮಹೋತ್ಸವವನ್ನು ಆರಂಭಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು […]

Advertisement

Wordpress Social Share Plugin powered by Ultimatelysocial