ತಮಿಳುನಾಡು ಚುನಾವಣೆ: ಬಿಜೆಪಿ ಮುಖಂಡೆ ಖುಷ್ಬೂ ಸುಂದರ್ ನಾಮಪತ್ರ ಸಲ್ಲಿಕೆ

ತಮಿಳುನಾಡು ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನಟಿ ಹಾಗೂ ಬಿಜೆಪಿ ಮುಖಂಡೆ ಖುಷ್ಬೂ ಸುಂದರ್ ಇಂದು ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮುನ್ನ ವಲ್ಲುವರ್ ಕೊಟ್ಟಮ್ ಬಳಿ ಜಾನಪದ ಕಲಾತಂಡಗಳೊಂದಿಗೆ ಖುಷ್ಬೂ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು ರೋಡ್ ಶೋ ನಲ್ಲಿ ಪಾಲ್ಗೊಂಡಿದ್ದರು.

ಕಳೆದ ವರ್ಷ ಕಾಂಗ್ರೆಸ್ ತ್ಯಜಿಸಿದ್ದ ಖುಷ್ಬೂ ಬಿಜೆಪಿ ಸೇರಿಕೊಂಡಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿರುವ ಖುಷ್ಬೂ ಡಿಎಂಕೆ ಅಭ್ಯರ್ಥಿ ಡಾ. ಎಳಿಲನ್ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

ಡಿಎಂಕೆ ಪಕ್ಷದಿಂದ ರಾಜಕೀಯ ಪಯಣ ಆರಂಭಿಸಿದ ಖುಷ್ಬೂ 2014ರಲ್ಲಿ ಕಾಂಗ್ರೆಸ್ ಸೇರಿಕೊಂಡಿದ್ದರು. ತದ ನಂತರ 2020 ಅಕ್ಟೋಬರ್ ತಿಂಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ, ಇದೀಗ ಆ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಹೈಕಮಾಂಡ್ ಹೇಳಿದರೆ ಸ್ಪರ್ಧೆಗೆ ಸಿದ್ದ : ಸತೀಶ್ ಜಾರಕಿಹೊಳಿ

Thu Mar 18 , 2021
                ರಾಜ್ಯದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಿಗದಿಯಾಗಿದೆ. ಸುರೇಶ್ ಅಂಗಡಿಯವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದೆ. ಈ ಸಂಬಂಧ ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಬಗ್ಗೆ ಲೆಕ್ಕಾಚಾರ ಹಾಕುತ್ತಿದೆ.   ಬೆಳಗಾವಿ ಉಪಚುನಾವಣೆ ಸ್ಪರ್ಧೆಯ ಬಗ್ಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, […]

Advertisement

Wordpress Social Share Plugin powered by Ultimatelysocial