ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್.

ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರಿಂದ ಪದವಿ ಪೂರ್ವ ಕಾಲೇಜುಗಳ ಅರ್ಹ ಉಪನ್ಯಾಸಕರ ಹುದ್ದೆಗಳಿಗೆ ಮುಂಬಡ್ತಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಲ್ಲಿ ಶೇ.75ರಷ್ಟು ನೇರ ನೇಮಕಾತಿ ಮೂಲಕ ಹಾಗೂ ಶೇ.25ರಷ್ಟು ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಮೂಲಕ ನೇಮಕಾತಿ ಮಾಡಲು 2014ರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಲುವಾಗಿ ವಯೋನಿವೃತ್ತಿ, ರಾಜೀನಾಮೆ, ನಿಧನ ಹಾಗೂ ಇತರ ಕಾರಣಗಳಿಂದ ತೆರವಾದ ಬಗೆಗಿನ ಮಾಹಿತಿ  ವಿಧಾನ ಪರಿಷತ್‌ ಪ್ರಶ್ನೆ ಆಗಿದ್ದು, ಜಿಲ್ಲಾ ಉಪನಿರ್ದೇಶಕರು ತಮ್ಮ ವೈಯಕ್ತಿಕ ಗಮನ ಹರಿಸಿ ಎಲ್ಲಾ ಕಾಲೇಜುಗಳಿಂದ ಮಾಹಿತಿಯನ್ನು ಕ್ರೋಢೀಕರಿಸಿ ಸಲ್ಲಿಸಲು ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಹಕ್ಕುಪತ್ರ ಪಡೆದವರಿಗೆ ಭರ್ಜರಿ 'ಗುಡ್ ನ್ಯೂಸ್'

Thu Feb 9 , 2023
ಅಕ್ರಮ – ಸಕ್ರಮ ನಿವೇಶನ ಯೋಜನೆಯಡಿ ಹಕ್ಕು ಪತ್ರ ಪಡೆದವರಿಗೆ ಸರ್ಕಾರ ಕೊನೆಗೂ ಗುಡ್ ನ್ಯೂಸ್ ನೀಡಿದೆ. ನಿವೇಶನ ಹಕ್ಕು ಪತ್ರವನ್ನು ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಈಗ ಅವಕಾಶ ಮಾಡಿಕೊಡಲಾಗಿದೆ.ಈ ಮೊದಲು ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದವರಿಗೆ ಇದನ್ನು ಅಡಮಾನ ಮಾಡಬಾರದೆಂಬ ಷರತ್ತನ್ನು ವಿಧಿಸಲಾಗಿತ್ತು.ಅಲ್ಲದೆ ಇದನ್ನು ಹಕ್ಕುಪತ್ರದಲ್ಲಿ ಸಹ ಮುದ್ರಿಸಲಾಗಿತ್ತು. ಹೀಗಾಗಿ ಫಲಾನುಭವಿಗಳು ಬ್ಯಾಂಕ್ ಮೂಲಕ ಸಾಲ ಪಡೆಯಲು ಹೋದರೆ ತೊಂದರೆಯಾಗುತ್ತಿತ್ತು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದ […]

Advertisement

Wordpress Social Share Plugin powered by Ultimatelysocial