ಈ ಮೂರು ಪ್ರಮುಖ ಪಂದ್ಯಾವಳಿಗಳಲ್ಲಿ ಗೆಲ್ಲಲೇಬೇಕಿದೆ ಟೀಂ ಇಂಡಿಯಾ

2022ರಲ್ಲಿ ಟೀಂ ಇಂಡಿಯಾ ಪ್ರಮುಖವಾಗಿ ದ್ವಿಪಕ್ಷೀಯ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಪ್ರಮುಖ ಆಟಗಾರರು ಗಾಯಗೊಂಡಿದ್ದು ತಂಡಕ್ಕೆ ಪ್ರಮುಖ ಹಿನ್ನಡೆಯಾಯಿತು.2022ರಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಕೊನೆಯ ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಆಡಿತು.ಏಕದಿನ ಸರಣಿಯನ್ನು ಸೋಲುವ ಮೂಲಕ ಮುಖಭಂಗ ಅನುಭವಿಸಿದ ಟೀಂ ಇಂಡಿಯಾ, ಟೆಸ್ಟ್ ಸರಣಿಯನ್ನು ವೈಟ್ ವಾಶ್ ಮಾಡುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ತಲುಪುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಆಡುವ ಮೂಲಕ ಭಾರತ 2023ರ ವರ್ಷವನ್ನು ಆರಂಭಿಸಲಿದೆ. 2023ರಲ್ಲಿ ಭಾರತ 35ಕ್ಕೂ ಹೆಚ್ಚಿನ ಏಕದಿನ ಪಂದ್ಯಗಳನ್ನಾಡಲಿದೆ. ಹಲವು ಹಿರಿಯ ಆಟಗಾರರು ಮತ್ತೆ ತಂಡಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ 2023ರಲ್ಲಿ ತಂಡಕ್ಕೆ ಮರಳಲಿದ್ದಾರೆ. ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಭಾರತ ಹಲವು ಸರಣಿಗಳನ್ನು ಆಡಲಿದೆ. ಇವೆಲ್ಲವನ್ನು ಹೊರತುಪಡಿಸಿದರೆ ಭಾರತ ತಂಡ 2023ರಲ್ಲಿ ಪ್ರಮುಖವಾಗಿ ಈ ಮೂರು ಪಂದ್ಯಾವಳಿಗಳನ್ನು ಗೆಲ್ಲಬೇಕಿದೆ.ಮೊದಲ ಪರೀಕ್ಷೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2021ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಸೋತ ಭಾರತ ರನ್ನರ್ ಅಪ್ ಆಗಿದೆ. 2023ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ ಪ್ರವೇಶಿಸುವ ಎಲ್ಲಾ ಅವಕಾಶಗಳನ್ನು ಹೊಂದಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತಕ್ಕೆ, ಫೆಬ್ರವರಿ 9 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಮುಖ್ಯವಾಗಿದೆ.ಆಸ್ಟ್ರೇಲಿಯಾ ಕೊನೆಯ ಬಾರಿಗೆ 2016ರಲ್ಲಿ ಭಾರತಕ್ಕೆ ಭೇಟಿ ನೀಡಿತ್ತು. ಆಗ ಭಾರತ 2-1 ಅಂತರದಲ್ಲಿ ಸರಣಿಯನ್ನು ಗೆದ್ದಿತ್ತು. ನಂತರ ಭಾರತ ಎರಡು ಬಾರಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದು, ಎರಡೂ ಬಾರಿ ಭಾರತ ಸರಣಿಯನ್ನು ಗೆದ್ದುಕೊಂಡಿದೆ. 2016ರಿಂದ ಭಾರತ ಸತತವಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಈ ಬಾರಿ ಕೂಡ ಭಾರತ ಸರಣಿಯನ್ನು ಗೆದ್ದರೆ ಸುಲಭವಾಗಿ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪ್ರವೇಶಿಸಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕಿಸ್ತಾನ ತಂಡವನ್ನು ಬಲಪಡಿಸಲು ಬಿಸಿಸಿಐ

Sun Jan 1 , 2023
  ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಧ್ಯಂತರ ಆಯ್ಕೆ ಸಮಿತಿಯ ಅಧ್ಯಕ್ಷ ಶಾಹಿದ್ ಅಫ್ರಿದಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮತ್ತಷ್ಟು ಬಲಪಡಿಸಲು, ಪಾಕಿಸ್ತಾನಕ್ಕಾಗಿ ಎರಡು ತಂಡಗಳನ್ನು ರಚಿಸುವುದಾಗಿ ತಿಳಿಸಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.”ಪಾಕಿಸ್ತಾನ ತಂಡದ ಬೆಂಚ್‌ ಶಕ್ತಿಯನ್ನು ಹೆಚ್ಚಿಸಲು ನನ್ನ ಅಧಿಕಾರಾವಧಿ ಮುಗಿಯುವ ಮೊದಲು ಪಾಕಿಸ್ತಾನಕ್ಕಾಗಿ ಎರಡು ತಂಡಗಳನ್ನು ರಚಿಸುವ ಉದ್ದೇಶ ಹೊಂದಿದ್ದೇನೆ” ಎಂದು ಶಾಹಿದ್ ಅಫ್ರಿದಿ ತಿಳಿಸಿದ್ದಾರೆ.ತಂಡದ ಪ್ರಮುಖ ವೇಗಿಗಳಾದ ಶಾಹೀನ್ ಅಫ್ರಿದಿ ಮತ್ತು ಹ್ಯಾರಿಸ್ […]

Advertisement

Wordpress Social Share Plugin powered by Ultimatelysocial