TEAM INDIA:ಕೆಎಲ್ ರಾಹುಲ್ ಟೀಂ ಇಂಡಿಯಾ ಮುಂದಿನ ನಾಯಕನಾಗುವುದು ಕಷ್ಟ;

ನವದೆಹಲಿ : ಮೊದಲ ಏಕದಿನ ಪಂದ್ಯದಲ್ಲಿ ಭಾರತವನ್ನು 31 ರನ್‌ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ ನಂತರ ಮುಂದಿನ ನಾಯಕನಾಗಲು ಕೆ ಎಲ್ ರಾಹುಲ್ ಅವರನ್ನು ಉತ್ತಮ ಸ್ಪರ್ಧಿ ಎಂದೇ ಪರಿಗಣಿಸಲಾಗಿದೆ. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವವು ಸಂಪೂರ್ಣ ರೀತಿಯಲ್ಲಿ ಫ್ಲಾಪ್ ಆಗಿ ಸಾಬೀತಾಯಿತು.

ಕಳಪೆ ನಾಯಕತ್ವ ನೀಡಿದ ಕೆ ಎಲ್ ರಾಹುಲ್ :
ಖಾಯಂ ನಾಯಕನಾಗಲು ಕೆ ಎಲ್ ರಾಹುಲ್ ಗೆ ಈ ವಿಚಾರ ಅಡ್ಡಿಯಾಗಬಹುದು. ಒಂದು ಸಮಯದಲ್ಲಿ ಭಾರತ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮೇಲೆ ತನ್ನ ಹಿಡಿತ ಸಾಧಿಸಿತ್ತು. ಆದರೆ ಕೆಎಲ್ ರಾಹುಲ್ ಕಳಪೆ ನಾಯಕತ್ವದ ಕಾರಣದಿಂದಾಗಿ ಸೋಲನುಭಾವಿಸುವಂತಾಯಿತು. 68 ರನ್‌ಗಳಿಗೆ 3 ವಿಕೆಟ್‌ಗಳ ಪತನದ ಹೊರತಾಗಿಯೂ, ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ 296 ರನ್‌ಗಳ ದೊಡ್ಡ ಸ್ಕೋರ್ ಮಾಡುವಲ್ಲಿ ಯಶಸ್ವಿಯಾಯಿತು.

ಕೆಎಲ್ ರಾಹುಲ್ ನಾಯಕತ್ವದಲ್ಲಿ ಎದ್ದು ಕಾಣಿಸಿದ ಕೊರತೆ :
68 ರನ್ ಗಳಿಗೆ 3 ವಿಕೆಟ್ ಪತನಗೊಂಡರೂ, ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಲಿಲ್ಲ. ದಕ್ಷಿಣ ಆಫ್ರಿಕಾದ ನಾಯಕ ಟೆಂಬಾ ಬವುಮಾ (110 ರನ್) ಮತ್ತು ರಾಸಿ ವ್ಯಾನ್ ಡೆರ್ ಡುಸ್ಸೆನ್ ( 129) ನಡುವೆ ನಾಲ್ಕನೇ ವಿಕೆಟ್‌ಗೆ 204 ರನ್‌ಗಳ ಜೊತೆಯಾಟ ನೀಡಿದರು. ಬೌಲರ್‌ಗಳನ್ನು ಸರಿಯಾಗಿ ಬಳಸಿಕೊಳ್ಳದ ಕಾರಣ, ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಪಡೆಯುವುದು ಕೂಡಾ ಸಾಧ್ಯವಾಗಲಿಲ್ಲ. ದಕ್ಷಿಣ ಆಫ್ರಿಕಾದ ಈ ನಾಲ್ಕನೇ ವಿಕೆಟ್ ಜೊತೆಯಾಟವೇ ಟೀಂ ಇಂಡಿಯಾ ಸೋಲಿಗೆ ಕಾರಣವಾಗಿತ್ತು.

ವೆಂಕಟೇಶ್ ಅಯ್ಯರ್ ಗೆ ಬೌಲಿಂಗ್ ಅವಕಾಶ ನೀಡಲಿಲ್ಲ :
ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ವೆಂಕಟೇಶ್ ಅಯ್ಯರ್ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಏಕದಿನ ಪಂದ್ಯದ ವೇಳೆ ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಾಲ್ ಅವರಂತಹ ಬೌಲರ್‌ಗಳು ವಿಕೆಟ್ ಕಬಳಿಸಲು ಸಾಧ್ಯವಾಗಲಿಲ್ಲ. ಚೊಚ್ಚಲ ಆಟಗಾರ ವೆಂಕಟೇಶ್ ಅಯ್ಯರ್ ಗೆ ಬೌಲಿಂಗ್ ಅವಕಾಶ ಸಿಗಲಿದೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ವೆಂಕಟೇಶ್ ಅಯ್ಯರ್ ಗೆ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ನೀಡಿದ ನಾಯಕ ಕೆಎಲ್ ರಾಹುಲ್, ಅವರಿಗೆ ಬೌಲಿಂಗ್ ಅವಕಾಶ ನೀಡಲಿಲ್ಲ. ಕೆಎಲ್ ರಾಹುಲ್ ಈ ನಿರ್ಧಾರದಿಂದ ಎಲ್ಲಾ ಕ್ರಿಕೆಟ್ ಪಂಡಿತರು ಹಾಗೂ ದಿಗ್ಗಜರು ಅಚ್ಚರಿಗೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

HEALTH TIPS:ನೀವು ಈ ಸಮಸ್ಯೆಗಳಿಂದ ಬಳಲುತ್ತಿದ್ದರೆ ತಿನ್ನಬೇಡಿ 'ಬಾದಾಮಿ'

Thu Jan 20 , 2022
ಬಾದಾಮಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ, ಆದರೆ ಬಾದಾಮಿ ಸೇವನೆಯು ಕೆಲವು ಸಮಸ್ಯೆಗಳಲ್ಲಿ ನಿಮಗೆ ಭಾರೀ ಹಾನಿ ಉಂಟು ಮಾಡುತ್ತದೆ. ಈ ಸಮಸ್ಯೆಗಳಿಂದ ಬಳಲುವವರು ಬಾದಾಮಿ ತಿಂದರೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದು ನಿಮ್ಮ ಸಮಸ್ಯೆಯನ್ನು ಹೆಚ್ಚಿಸಬಹುದು. ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುವವರು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇದ್ದರೆ, ಬಾದಾಮಿ ತಿನ್ನಬೇಡಿ. ಇದರಲ್ಲಿ ಸಾಕಷ್ಟು ಫೈಬರ್ ಇದ್ದು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಇದು ಅಸಿಡಿಟಿ ಮತ್ತು […]

Advertisement

Wordpress Social Share Plugin powered by Ultimatelysocial