ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ ಬಿಜೆಪಿ ಸೇರ್ಪಡೆ

BIGG BREAKING NEWS : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ ಬಿಜೆಪಿ ಸೇರ್ಪಡೆ

ನವದೆಹಲಿ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ ಅವರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ ಅವರು ಭಾರತೀಯ ಜನತಾ ಪಕ್ಷಕ್ಕೆ ಇಂದು ಸೇರ್ಪಡೆಯಾಗಿದ್ದಾರೆ.

ಮೊಂಗಿಯಾ ಅವರು ಇಂದು ದೆಹಲಿಯ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತೆಗೆದುಕೊಂಡಿದ್ದಾರೆ. ದಿನೇಶ್ ಮೊಂಗಿಯಾ ಜೊತೆಗೆ ಇಬ್ಬರು ಕಾಂಗ್ರೆಸ್ ಶಾಸಕರೂ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಚಂಡೀಗಢದಲ್ಲಿ ಜನಿಸಿದ 44 ವರ್ಷದ ಎಡಗೈ ಆಟಗಾರ 2001 ರಲ್ಲಿ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು ಮತ್ತು ಮೇ 12,2007 ರಂದು ಬಾಂಗ್ಲಾದೇಶದ ವಿರುದ್ಧ ಭಾರತದ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದರು.

57 ಏಕದಿನ ಮತ್ತು ಒಂದು ಟಿ20 ಪಂದ್ಯವಾಡಿದ್ದು, ಪಂಜಾಬ್ ಪರ 121ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ, 27 ಶತಕಗಳು ಮತ್ತು 28 ಅರ್ಧಶತಕಗಳೊಂದಿಗೆ 48.95 ಸರಾಸರಿಯಲ್ಲಿ 8028 ರನ್ ಗಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

Digital India:ಬೆಂಗಳೂರು ಸೇರಿ 12 ನಗರಗಳಲ್ಲಿ ಮೊದಲಿಗೆ 5ಜಿ ಸೇವೆ;

Tue Dec 28 , 2021
ಬೆಂಗಳೂರು, ಡಿಸೆಂಬರ್ 28: ಭಾರತದಲ್ಲಿ 5G ತಂತ್ರಜ್ಞಾನ ತ್ವರಿತ ಗತಿಯಲ್ಲಿ ಅಳವಡಿಕೆ ಮತ್ತು ಸುರಕ್ಷಿತ ನೆಟ್ವರ್ಕ್ ಗಳನ್ನು ಒದಗಿಸಬಲ್ಲ ವಿಶ್ವಾಸಾರ್ಹ ಪಾಲುದಾರರನ್ನು ಸರ್ಕಾರ ಎದುರು ನೋಡುತ್ತಿದೆ. ಈ ಉನ್ನತ ತಂತ್ರಜ್ಞಾನದ ಕ್ಷೇತ್ರದಲ್ಲಿ ಹೂಡಿಕೆ ಅಗತ್ಯ ಹೆಚ್ಚಿದೆ. ಯುಎಸ್ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಅಲ್ಲಿನ ಪ್ರಮುಖ ಸಂಸ್ಥೆಗಳ ಸಿಇಒಗಳ ಜೊತೆ ನಡೆಸಿದ ಮಾತುಕತೆಯಲ್ಲಿ ಹೆಚ್ಚಿನ ಚರ್ಚೆ ಟೆಲಿಕಾಂ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ್ದು ಎಂಬುದು ಗಮನಾರ್ಹ. ಭಾರತದಲ್ಲಿ 5 ಜಿ […]

Advertisement

Wordpress Social Share Plugin powered by Ultimatelysocial