ತಾಂತ್ರಿಕ ದೋಷ.

ತಿರುವನಂತಪುರಂ: ತಿರುವನಂತಪುರಂನಿಂದ ಒಮಾನ್‌ನ ಮಸ್ಕತ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಅದರ ಆನ್‌ಬೋರ್ಡ್ ಕಂಪ್ಯೂಟರ್ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷದಿಂದ ಹಿಂತಿರುಗಿದೆ.

ಐಎಕ್ಸ್ 549 ವಿಮಾನವು ಕೇರಳ ರಾಜ್ಯದ ರಾಜಧಾನಿ‌ ತಿರುವನಂತಪುರಂನಿಂದ ಬೆಳಿಗ್ಗೆ 8.30 ಕ್ಕೆ ಟೇಕ್ ಆಫ್ ಆಗಿದ್ದು, ಪೈಲಟ್‌ಗಳಲ್ಲಿ ಒಬ್ಬರು ತಾಂತ್ರಿಕ ದೋಷವನ್ನು ಗಮನಿಸಿದ ನಂತರ 9.17 ಕ್ಕೆ ವಾಪಸ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದೆ.

‘ಎಲ್ಲಾ 105 ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ’ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ.

ವಿಮಾನಯಾನ ಸಂಸ್ಥೆಯು ಪ್ರಯಾಣಿಕರಿಗೆ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಇಲ್ಲಿಂದ ಟೇಕ್ ಆಫ್ ಆಗುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ನೀಲಕಂಠ'ನಾಗಿ ಬರುತ್ತಿದ್ದಾರೆ ಮಾಸ್ಟರ್​ ಮಹೇಂದ್ರನ್.

Mon Jan 23 , 2023
  ‘ನೀಲಕಂಠ’ನಾಗಿ ಬರುತ್ತಿದ್ದಾರೆ ಮಾಸ್ಟರ್​ ಮಹೇಂದ್ರನ್​; ಹುಟ್ಟುಹಬ್ಬಕ್ಕೆ ಸ್ಪೆಷಲ್​ ಸಾಂಗ್​ ತಮಿಳು ಚಿತ್ರರಂಗದಲ್ಲಿ ಮಾಸ್ಟರ್​ ಮಹೇಂದ್ರನ್​ ಜನಪ್ರಿಯ ಹೆಸರು. ಕೇವಲ ಮೂರು ವರ್ಷದವರಿದ್ದಾಗ ಬಣ್ಣ ಹಚ್ಚಿದ ಮಹೇಂದ್ರನ್​, ಆ ನಂತರ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಾಲನಟರಾಗಿ ಕಾಣಿಸಿಕೊಂಡವರು. ತಮ್ಮ ಅಭಿನಯದಿಂದ ನಾಲ್ಕು ಬಾರಿ ಅತ್ಯುತ್ತಮ ಬಾಲನಟ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡವರು. ‘ವಿಳಾ’ ಎಂಬ ಚಿತ್ರದ ಮೂಲಕ ಹೀರೋ ಆದ ಮಹೇಂದ್ರನ್​, ಇದೀಗ ಮೊದಲ ಬಾರಿಗೆ […]

Advertisement

Wordpress Social Share Plugin powered by Ultimatelysocial