ಟೆಂಟ್‌ ಹಾಕಲು ಸಜ್ಜಾದ ‘ಟೆನೆಂಟ್’ ಚಿತ್ರತಂಡ.

ಸ್ಯಾಂಡಲ್‌ ವುಡ್‌ ನಲ್ಲಿ ಇದೀಗ  ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಈ ನಡುವೆ ಹೊಚ್ಚ ಹೊಸ ಸಿನಿಮಾಗಳು ಸೆಟ್ಟೇರುತ್ತಿವೆ. ಅದ್ರರಲ್ಲೂ ಹೊಸಬರ ತಂಡವೊಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದೆ.ಯುವ ಪ್ರತಿಭೆ ಶ್ರೀಧರ್ ಶಾಸ್ತ್ರಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಹೊಚ್ಚ ಹೊಸ ಸಿನಿಮಾ ‘ಟೆನೆಂಟ್’. ಟೈಟಲ್ ಹಾಗೂ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಿ ಗಮನ ಸೆಳೆಯುತ್ತಿರುವ ಚಿತ್ರತಂಡ ಮುಂದಿನ ವಾರದಿಂದ ಚಿತ್ರೀಕರಣ ಆರಂಭಿಸಲಿದೆ.

ಅನ್ ಲಾಕ್ ಕಿರುಚಿತ್ರದ ಮೂಲಕ ಗುರುತಿಸಿಕೊಂಡಿದ್ದ ಶ್ರೀಧರ್ ಶಾಸ್ತ್ರಿ ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಜವಾಬ್ದಾರಿಯನ್ನು ಶ್ರೀಧರ್ ಶಾಸ್ತ್ರಿಯವರೇ ಹೊತ್ತುಕೊಂಡಿದ್ದಾರೆ. ಧರ್ಮ ಕೀರ್ತಿರಾಜ್, ತಿಲಕ್ ಶೇಖರ್, ಸೋನು ಗೌಡ, ರಾಕೇಶ್ ಮಯ್ಯ, ಉಗ್ರಂ ಮಂಜು. ಚಿತ್ರದ ತಾರಾಬಳಗಲ್ಲಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ನಡೆಯುವ ಕ್ರೈಂ ಥ್ರಿಲ್ಲರ್ ಸಿನಿಮಾ ಟೆನೆಂಟ್. ಬಾಡಿಗೆದಾರ ಹಾಗೂ ಮಾಲೀಕನ ನಡೆಯುವ ಕಥೆ ಚಿತ್ರದಲ್ಲಿದೆ.

ಮನೋಹರ್ ಜೋಶಿ ಛಾಯಾಗ್ರಹಣ, ಗಿರೀಶ್ ಒತ್ತೂರು ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ಬ್ಯಾನರ್ ನಡಿ ಟಿ.ನಾಗಾರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ಉದ್ಯಮಿಯಾಗು ಉದ್ಯೋಗ ನೀಡು-ಸಿಎಂ ಬಸವರಾಜ ಬೊಮ್ಮಾಯಿ

Mon Oct 11 , 2021
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ ನಾರಾಯಣ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ […]

Advertisement

Wordpress Social Share Plugin powered by Ultimatelysocial