ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಕೆಎಸ್ ಭರತ್.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು (ಗುರುವಾರ, ಫೆಬ್ರವರಿ 9) ನಾಗ್ಪುರದಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಭಾರತದ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ಆರಂಭಿಕ ವಿಕೆಟ್‌ಗಳನ್ನು ಕಿತ್ತು ಆಘಾತ ನೀಡಿದ್ದಾರೆ. ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಉಸ್ಮಾನ್ ಖವಾಜಾ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರೆ, ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಡೇವಿಡ್ ವಾರ್ನರ್ ಕ್ಲೀನ್ ಬೌಲ್ಡ್ ಆದರು.ಇದೇ ವೇಳೆ, ಭಾರತ ತಂಡದ ಪರ ಸೂರ್ಯಕುಮಾರ್ ಯಾದವ್ ಮತ್ತು ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಕೆಎಸ್ ಭರತ್ ಅವರು ಚೊಚ್ಚಲ ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿದರು. 32 ವರ್ಷದ ಸೂರ್ಯಕುಮಾರ್ ಯಾದವ್ ತನ್ನ ಅಂತಾರಾಷ್ಟ್ರೀಯ ರೆಡ್‌ಬಾಲ್ ಕ್ರಿಕೆಟ್ ಆಡುವ ಕನಸು ಇದೀಗ ನನಸಾಗಿದ್ದು, ಗುರುವಾರ ತಮ್ಮ ಚೊಚ್ಚಲ ಪಂದ್ಯಕ್ಕಾಗಿ ಟೆಸ್ಟ್ ಕ್ಯಾಪ್ ಧರಿಸಿದರು. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಕೆಎಸ್ ಭರತ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು.ಇನ್ನು 2022ರ ಅವಧಿಯಲ್ಲಿ ಟಿ20 ಪಂದ್ಯಗಳಲ್ಲಿ ಭಾರತ ತಂಡಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ ಯಾದವ್, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಟೆಸ್ಟ್ ಕ್ಯಾಪ್ ಧರಿಸುತ್ತಿರುವ 304ನೇ ಅಟಗಾರನಾದರೆ, ಕೆಎಸ್ ಭರತ್ 305ನೇ ಭಾರತೀಯ ಆಟಗಾರನಾದರು. ಬೆನ್ನುನೋವಿನಿಂದಾಗಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿರುವ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಬದಲಾಗಿ ಸೂರ್ಯಕುಮಾರ್ ಯಾದವ್ ಅವರಿಗೆ ಚೊಚ್ಚಲ ಅವಕಾಶ ನೀಡಲಾಯಿತು. ಮಧ್ಯಮ ಕ್ರಮಾಂಕದ ಸ್ಥಾನಕ್ಕಾಗಿ ಶುಭ್ಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ನಡುವಿನ ಸ್ಪರ್ಧೆಯಲ್ಲಿ ಸೂರ್ಯಕುಮಾರ್ ಮುನ್ನಡೆ ಪಡೆದರು.ಇನ್ನು ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಶುಭ್ಮನ್ ಗಿಲ್ ಜೊತೆಗೆ ಕುಲದೀಪ್ ಯಾದವ್ ಕೂಡ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯಲಾಗಲಿಲ್ಲ. ಅಕ್ಷರ್ ಪಟೇಲ್‌ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ. ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಸುದೀರ್ಘ ವಿಶ್ರಾಂತಿಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದರು. ಮೊಣಕಾಲು ಶಸ್ತ್ರಚಿಕಿತ್ಸೆಯಿಂದ ಚೇತರಿಸಕೊಂಡು ಆರು ತಿಂಗಳ ಬಳಿಕ ಭಾರತ ತಂಡಕ್ಕೆ ಮರಳಿದ್ದಾರೆ. ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯಲಿದ್ದಾರೆ. 3ನೇ ಕ್ರಮಾಂಕದಲ್ಲಿ ಅನುಭವಿ ಚೇತೇಶ್ವರ ಪೂಜಾರ ಮತ್ತು 4ನೇ ಸ್ಥಾನದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೂವರು ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್‌ರನ್ನು ಆಡಿಸುತ್ತಿದ್ದರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ದಾಳಿ ನಡೆಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ರಾಜ್ಯ ಚುನಾವಣೆ ಉಸ್ತುವಾರಿ .

Thu Feb 9 , 2023
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ರಾಜ್ಯ ಚುನಾವಣೆ ಉಸ್ತುವಾರಿ ಜವಾಬ್ದಾರಿ ನೀಡಿರುವ ಹಿಂದೆ ಅಡಗಿದೆ ಮಾಸ್ಟರ್  ಗರಿಗೆದರಿದ ಚುನಾವಣೆ ಚಟುವಟಿಕೆ ಹನೂರು ಕ್ಷೇತ್ರ ವಶಪಡಿಸಿಕೊಳ್ಳಲು ಅಣ್ಣಾಮಲೈ ಬಳಸಿಕೊಳ್ಳಲು ಬಿಜೆಪಿ ಪ್ಲಾನ್ ಹನೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪ್ರಯತ್ನಿಸುತ್ತಿರುವ ವೆಂಕಟೇಶ್   ಮತ್ತು ಅಣ್ಣಾಮಲೈ ಆತ್ಮೀಯ ಸ್ನೇಹಿತರು ಕಳೆದ ಬಾರಿ ತಮಿಳುನಾಡಿನ ಅರವಾಕುರಿಚಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ ಪರ ಕ್ಯಾಂಪೆನ್ ಮಾಡಿದ್ದ ವೆಂಕಟೇಶ್  ಬಹುತೇಕ ತಮಿಳು ಭಾಷಿಕರೇ ವಾಸಿಸುತ್ತಿರುವ ಹನೂರಿನಲ್ಲಿ ಅಣ್ಣಾಮಲೈ […]

Advertisement

Wordpress Social Share Plugin powered by Ultimatelysocial