ಹಲವು ವಿಶೇಷತೆಗಳ ಮೊಹಾಲಿ ಟೆಸ್ಟ್: ಹೀಗಿರಬಹುದು ಟೀಂ ಇಂಡಿಯಾ ಆಡುವ ಬಳಗ

ಮೊಹಾಲಿ: ಹಲವು ವಿಶೇಷತೆಗಳ ಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಶುಕ್ರವಾರ ಆರಂಭವಾಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ಟೆಸ್ಟ್ ಪಂದ್ಯ ನಡೆಯಲಿದೆ.ಮಾಜಿ ನಾಯಕ ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯ ಇದಾಗಿರಲಿದೆ.ಮೊಹಾಲಿ ಟೆಸ್ಟ್ ಮೂಲಕ ನೂರು ಟೆಸ್ಟ್ ಪಂದ್ಯವಾಡಿದ ಭಾರತದ 12ನೇ ಆಟಗಾರ ಎಂಬ ಖ್ಯಾತಿಗೆ ವಿರಾಟ್ ಪಾತ್ರರಾಗಲಿದ್ದಾರೆ. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಅನಿಲ್ ಕುಂಬ್ಳೆ, ಕಪಿಲ್ ದೇವ್, ಸೌರವ್ ಗಂಗೂಲಿ, ದಿಲೀಪ್ ವೆಂಗ್‌ಸರ್ಕರ್, ಹರ್ಭಜನ್ ಸಿಂಗ್ ಮತ್ತು ಇಶಾಂತ್ ಶರ್ಮಾ ಇದುವರೆಗೆ ಭಾರತದ ಪರ ನೂರು ಟೆಸ್ಟ್ ಪಂದ್ಯವಾಡಿದ್ದಾರೆ.ಅಲ್ಲದೆ ರೋಹಿತ್ ಶರ್ಮಾ ಅವರು ಮೊದಲ ಬಾರಿಗೆ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಬಳಿಕ ವಿರಾಟ್ ಕೊಹ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.ಸಂಭಾವ್ಯ ತಂಡಮೊಹಾಲಿ ಪಂದ್ಯದಲ್ಲಿ ಆರಂಭಿಕರಾಗಿ ನಾಯಕ ರೋಹಿತ್ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಅಥವಾ ಹನುಮ ವಿಹಾರಿ ಆಡುವ ಸಾಧ್ಯತೆಯಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದರೆ, ಐದನೇ ಕ್ರಮಾಂಕಕ್ಕೆ ಶ್ರೇಯಸ್ ಅಯ್ಯರ್ ಆಯ್ಕೆ ಬಹುತೇಕ ಖಚಿತ.ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್, ಆಲ್ ರೌಂಡರ್ ಕೋಟಾದಲ್ಲಿ ಆರ್.ಅಶ್ವಿನ್ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಆಡುವುದು ಬಹುತೇಕ ಖಚಿತವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆನಂದ್ ಮಹೀಂದ್ರಾ ಭಾರತೀಯ ವಿದ್ಯಾರ್ಥಿಗಳಿಗಾಗಿ ವೈದ್ಯಕೀಯ ಅಧ್ಯಯನ ಸಂಸ್ಥೆಯನ್ನು ಪ್ರಾರಂಭ!

Thu Mar 3 , 2022
ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಮತ್ತೆ ಅದರತ್ತ ಮರಳಿದ್ದಾರೆ. ಈ ಬಾರಿ, ಅವರು ತಮ್ಮ ಪರೋಪಕಾರಿ ಸರಣಿಯನ್ನು ಒಂದು ಹಂತಕ್ಕೆ ತೆಗೆದುಕೊಂಡಿದ್ದಾರೆ ಮತ್ತು ಪ್ರಸ್ತುತ ಮಹೀಂದ್ರಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವೈದ್ಯಕೀಯ ಅಧ್ಯಯನ ಸಂಸ್ಥೆಯನ್ನು ತೆರೆಯುವ ಬಗ್ಗೆ ಯೋಚಿಸುತ್ತಿದ್ದಾರೆ. ವಿದೇಶಗಳಲ್ಲಿ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳ ಸಂಖ್ಯೆಯನ್ನು ಒಳಗೊಂಡ ಟೈಮ್ಸ್ ಆಫ್ ಇಂಡಿಯಾ ಟ್ವೀಟ್ ಮಾಡಿದ ಗ್ರಾಫಿಕ್‌ಗೆ ಪ್ರತಿಕ್ರಿಯೆಯಾಗಿ ಅವರ ಟ್ವೀಟ್ ಬಂದಿದೆ. ಗ್ರಾಫಿಕ್ ಚೀನಾವು 23,000 ಭಾರತೀಯ ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನದಲ್ಲಿದೆ […]

Advertisement

Wordpress Social Share Plugin powered by Ultimatelysocial