ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವ 3.42 ಲಕ್ಷ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸ್ತಿ ಹಕ್ಕು ನೀಡಿದೆ ಎಂದು ವಸತಿ ಸಚಿವ ವಿ ಸೋಮಣ್ಣ ಶುಕ್ರವಾರ ತಿಳಿಸಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೋಮಣ್ಣ, ಎಲ್ಲರಿಗೂ ಸೂರು ಕಲ್ಪಿಸುವುದು ಸರಕಾರದ ಪ್ರಯತ್ನದ ಭಾಗವಾಗಿದೆ.
ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆ ಕುರಿತು ಪ್ರತಿಕ್ರಿಯಿಸಿದ ಸೋಮಣ್ಣ, 50,000 ಮನೆಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಮನೆಗಳ ಲಭ್ಯತೆಯ ಕೊರತೆಯೇ ಪ್ರಮುಖ ಸಮಸ್ಯೆಯಾಗಿದ್ದು, ಮನೆ ನಿರ್ಮಾಣಕ್ಕೆ 500 ಎಕರೆಗೂ ಹೆಚ್ಚು ಜಾಗ ಗುರುತಿಸಿದ್ದೇನೆ ಎಂದ ಅವರು, ಇತ್ತೀಚೆಗೆ 7 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada