ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾ ಪೂಂಜ;

ಉಡುಪಿ: ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಈ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡ ಶುಭಾ ಪೂಂಜ, ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು ಎಂದು ತಿಳಿಸಿದ್ದಾರೆ.

ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ ಎಂದು ಹೇಳುವ ಮೂಲಕ ಶುಭಾ ಪುಂಜ ತಮ್ಮ ವಿವಾಹ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಇವರ ವಿವಾಹಕ್ಕೆ ಬಿಗ್‍ಬಾಸ್ ಎಂಟರ ವಿಜೇತ ಮಂಜು ಪಾವಗಡ ಸಾಕ್ಷಿಯಾಗಿದ್ದು, ನಿಮ್ಮಿಬ್ಬರ ದಾಂಪತ್ಯ ಜೀವನಕ್ಕೆ ಶುಭ ಹಾರೈಸುತ್ತೇನೆ ಎಂದಿದ್ದಾರೆ. ಶುಭಾಪೂಂಜ ಬಿಗ್‍ಬಾಸ್ ನಂತರ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದು, ಸಿನಿಮಾ ನಿರ್ಮಾಣದತ್ತ ಒಲವು ತೋರಿದ್ದಾರೆ.\

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ರಾಜಕೀಯ ಲಾಭಕ್ಕೆ ಜನರ ಜೀವನದೊಟ್ಟಿಗೆ ಆಟವಾಡಬೇಡಿ: ದುನಿಯಾ ವಿಜಯ್;

Wed Jan 5 , 2022
ನಿನ್ನೆಯಷ್ಟೆ ರಾಜ್ಯಸರ್ಕಾರವು ರಾಜ್ಯದಾದ್ಯಂತ ವೀಕೆಂಡ್ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಹೇರಿದೆ. ಈ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರರಂಗದ ಹಲವರು ವೀಕೆಂಡ್ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ಗಮನ ಹರಿಸಿದ ದುನಿಯಾ ವಿಜಯ್. ಈ ಬಗ್ಗೆ ಮಾತನಾಡಿರುವ ನಟ ದುನಿಯಾ ವಿಜಯ್, ಲಾಕ್‌ಡೌನ್ ಉದ್ದೇಶ ಪ್ರಾಮಾಣಿಕವಾಗಿದ್ದರೆ ಆಗಲಿ, ರಾಜಕೀಯ ದುರುದ್ದೇಶದಿಂದ ಲಾಕ್‌ಡೌನ್ ಮಾಡುವುದಾದರೆ ಖಂಡಿತ ಬೇಡ” ಎಂದು ತಮ್ಮ […]

Advertisement

Wordpress Social Share Plugin powered by Ultimatelysocial