ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ!

 

ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇದೇ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ.

ಈ ವರದಿಯನ್ನು ಪಡೆದು ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 7ನೇ ವೇತನ ಆಯೋಗದಂತೆ ವೇತನ ಜಾರಿಗಾಗಿ ಸಮಿತಿಯನ್ನು ರಚಿಸಲಾಗಿದೆ. ಸಮತಿಯು ಸರ್ಕಾರ ವಹಿಸಿದಂತ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ. ಇದೀಗ ಮಧ್ಯಂತರ ವರದಿಯನ್ನು ತಯಾರಿಸುತ್ತಿದ್ದು, ವರದಿ ಕೈ ಸೇರಿದ ಕೂಡಲೇ 7ನೇ ವೇತನ ಆಯೋಗದಂತೆ ವೇತನವನ್ನು ಜಾರಿಗೊಳಿಸಲಾಗುವುದು ಎಂದರು.

2023-24ನೇ ಸಾಲಿನಲ್ಲೇ 7ನೇ ವೇತನ ಆಯೋಗವನ್ನು ಅನುಷ್ಠಾನಕ್ಕೆ ತರುತ್ತೇನೆ. ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಕೂಡ ಮೀಸಲಿಡಲಾಗಿದೆ. ಸರ್ಕಾರಿ ನೌಕರಿಗೆ ಶೀಘ್ರವೇ ಅದರಂತೆ ವೇತನ ಜಾರಿಗೂ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು.

ನಾಳೆಯಿಂದ ಬಿಬಿಎಂಪಿ ಕಚೇರಿಯ ಎಲ್ಲಾ ಸೇವೆಗಳು ಸ್ಥಗಿತ

ನಾಳೆಯಿಂದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೆಗಂಳೂರಿನ ಬಿಬಿಎಂಪಿ ಕಚೇರಿಯಲ್ಲಿ ನಾಳೆ ಎಲ್ಲಾ ಸೇವೆಗಳು ಸ್ಥಗಿತಗೊಳ್ಳಲಿದ್ದಾವೆ.

ಖಾಯಂ ಸರ್ಕಾರಿ ಪೌರಕಾರ್ಮಿಕರು ಗೈರಾಗಲು ತೀರ್ಮಾನಿಸಿದ್ದಾರೆ. ಹೀಗಾಗಿ ನಗರ ಸ್ವಚ್ಛತೆ ಕಾರ್ಯ ಸೇರಿದಂತೆ ಎಲ್ಲಾ ಸೇವೆಗಳು ಬಂದ್ ಆಗಲಿದ್ದಾವೆ. ಇವರಷ್ಟೇ ಅಲ್ಲದೇ ಬಿಬಿಎಂಪಿ ಸಿಬ್ಬಂದಿಗಳು, ಬೆಸ್ಕಾಂ, ಬಿಡಬ್ಲ್ಯೂ ಎಸ್ ಎಸ್ ಬಿ, ಬಿಡಿಎ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಷ್ಕರ ನಡೆಸೋದಕ್ಕಾಗಿ ವೇದಿಕೆಯನ್ನು ತಮ್ಮ ಕಚೇರಿಯಲ್ಲಿ ಸಿದ್ಧಗೊಳಿಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರ ಪರಿಗಣಿಸಬೇಕಾದ ಅಂಶಗಳು,

Tue Feb 28 , 2023
ಬೆಂಗಳೂರು, ಫೆಬ್ರವರಿ 28; ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರ ಬುಧವಾರದಿಂದ ಉದ್ಯೋಗಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರೆ ನೀಡಿದ್ದಾರೆ. ಸರ್ಕಾರಿ ನೌಕರರು ಮುಷ್ಕರ ನಡೆಸುವುದು ಬೇಡ. ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಅಗತ್ಯವಿರುವ ಹಣ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಮುಷ್ಕರ ನಡೆಸಬಾರದು ಎಂದು ಮುಖ್ಯಮಂತ್ರಿನೌಕರರಿಗೆ ಮನವಿ […]

Advertisement

Wordpress Social Share Plugin powered by Ultimatelysocial