ಕೋಝಿಕ್ಕೋಡ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಬುಧಾಬಿಗೆ ವಾಪಸ್

ಕ್ಯಾಲಿಕಟ್: ಅಬುಧಾಬಿಯಿಂದ ಕೋಝಿಕ್ಕೋಡ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಟೇಕ್ ಆಫ್ ಆದ ಕೂಡಲೇ ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಮತ್ತೆ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.

184 ಪ್ರಯಾಣಿಕರಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಬಿ737-800 ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ತಿಳಿಸಿದೆ.

ಟೇಕ್ ಆಫ್ ಆಗಿ 1,000 ಅಡಿ ಎತ್ತರಕ್ಕೆ ಏರಿದ ವೇಳೆ ವಿಮಾನದ ಎಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ವಿಮಾನ ನಿಲ್ದಾಣಕ್ಕೆ ಹಿಂತಿರುಗಲು ನಿರ್ಧರಿಸಲಾಯಿತು ಎಂದು ಏರ್ ಇಂಡಿಯಾ ತಿಳಿಸಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಬಿಸಿ ಸಿದ್ಧಪಡಿಸಿದ ಸಾಕ್ಷ್ಯಚಿತ್ರದ ಹಿಂದೆ ಚೀನಾ ಕೈವಾಡವಿದೆ

Fri Feb 3 , 2023
ನವದೆಹಲಿ: 2002ರ ಗುಜರಾತ್‌ ಗಲಭೆಯಲ್ಲಿ ಅಂದಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವಿತ್ತು ಎಂದು ಆರೋಪಿಸಿ ಬಿಬಿಸಿ ಸಿದ್ಧಪಡಿಸಿದ ಸಾಕ್ಷ್ಯಚಿತ್ರದ ಹಿಂದೆ ಚೀನಾ ಕೈವಾಡವಿದೆ ಎಂದು ಬಿಜೆಪಿ ಹಿರಿಯ ಸಂಸದ ಹಾಗೂ ವಕೀಲ ಮಹೇಶ್‌ ಜೇಠ್ಮಲಾನಿ ಗಂಭೀರ ಆರೋಪ ಮಾಡಿದ್ದಾರೆ. ಬಿಬಿಸಿ ಹತಾಶವಾಗಿದ್ದು, ಅದಕ್ಕೆ ಹಣದ ಅಗತ್ಯವಿದೆ ಮತ್ತು ಅದನ್ನು ಚೀನಾ-ಸಂಬಂಧಿತ ಹುಆವೈ (Huawei) ಕಂಪನಿಯಿಂದ ತೆಗೆದುಕೊಳ್ಳುತ್ತಿದೆ ಎಂದು ಟ್ವೀಟ್‌ ಮಾಡಿರುವ ಅವರು, ಬಿಬಿಸಿ ಏಕೆ ಭಾರತ ವಿರೋಧಿಯಾಗಿದೆ? […]

Advertisement

Wordpress Social Share Plugin powered by Ultimatelysocial