ಜೆಎನ್‍ಯು ಹಲ್ಲೆ ಖಂಡಿಸಿ ಪ್ರತಿಭಟಿಸಿದವರ ಮೇಲಿನ ಪ್ರಕರಣ ರದ್ದು.

ಮುಂಬೈ,ಜ.30- ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಗೇಟ್ವೆ ಆಫ್ ಇಂಡಿಯಾದಲ್ಲಿ ಪ್ರತಿಭಟನೆ ನಡೆಸಿದ್ದ 36 ಜನರ ವಿರುದ್ಧದ ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ಸ್ಥಳೀಯ ನ್ಯಾಯಾಲಯ ಅನುಮತಿಸಿದೆ.

ಆರೋಪಿಗಳು ಯಾವುದೇ ವೈಯಕ್ತಿಕ ಹಿತಾಸಕ್ತಿ ಅಥವಾ ಪ್ರಯೋಜನಗಳಿಲ್ಲದೆ ಆಪಾದಿತ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಎಸ್‍ಪ್ಲಾನೆಡ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ವಿ.ದಿನೋಕರ್ ಪ್ರಕರಣಗಳನ್ನು ಹಿಂಪಡೆಯಲು ಅನುಮತಿಸಿದ್ದಾರೆ. ಜನವರಿಯಲ್ಲಿ ಹೊರಡಿಸಲಾದ ಆದೇಶ ತಡವಾಗಿ ಬೆಳಕಿಗೆ ಬಂದಿದೆ.

ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಗೌತಮ್ ಗಾಯಕ್ವಾಡ್, ಆರೋಪಿಗಳು ಯಾವುದೇ ವೈಯಕ್ತಿಕ ಹಿತಾಸಕ್ತಿ ಅಥವಾ ಪ್ರಯೋಜನಗಳಿಲ್ಲದೆ ಪ್ರತಿಭಟನೆ ನಡೆಸಿದ್ದಾರೆ ಎಂದು ವಾದಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಜಿಯನ್ನು ಪರಿಶೀಲಿಸಿದ ನಂತರ, ಆರೋಪ ಸಾಮಾಜಿಕ ಮತ್ತು ರಾಜಕೀಯ ಸ್ವರೂಪದಲ್ಲಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪ್ರಾಸಿಕ್ಯೂಷನ್ ಈ ವಿಷಯವನ್ನು ಮುಂದುವರಿಸಲು ಬಯಸುವುದಿಲ್ಲ ಮತ್ತು ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ ಎಂಬ ವಾದವನ್ನು ಮನ್ನಿಸಿ, ಅರ್ಜಿಯನ್ನು ಹಿಂತೆಗೆದುಕೊಳ್ಳಲಾಗಿದೆ ಮತ್ತು ಪ್ರಕರಣವನ್ನು ವಿಲೇವಾರಿ ಮಾಡಲಾಗಿದೆ ಎಂದು ನ್ಯಾಯಾಲಯ ಘೋಷಿಸಿದೆ.

2020ರ ಜನವರಿಯಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‍ಯು)ದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಲು ಮುಂಬೈನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮುಂಬೈನ ಗೇಟ್ವೆ ಆಫ್ ಇಂಡಿಯಾದಲ್ಲಿ ಪ್ರತಿಭಟನೆ ನಡೆಸಿದ್ದರು.

ಇಲ್ಲಿನ ಕೊಲಾಬಾ ಪೊಲೀಸರು ಪ್ರಕರಣದ ತನಿಖೆ ನಡೆಸಿ, 2020ರ ಡಿಸೆಂಬರ್‍ನಲ್ಲಿ 36 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ ಮತ್ತು ಅವಧಿ ಮೀರಿ ಸೂಕ್ಷ್ಮ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಳೆದ 8 ವರ್ಷಗಳಲ್ಲಿ ವಿಮಾನ ಯಾನ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದ್ದು,

Tue Jan 31 , 2023
ನವದೆಹಲಿ,ಜ.31- ಕಳೆದ 8 ವರ್ಷಗಳಲ್ಲಿ ವಿಮಾನ ಯಾನ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದ್ದು, ಮುಂದಿನ ತಿಂಗಳ ವೇಳೆಗೆ ದೇಶದಲ್ಲಿ 148 ನೇ ವಿಮಾನ ನಿಲ್ದಾಣಗಳು ಕಾರ್ಯಾಚರಿಸಲಿವೆ ಎಂದು ಜೋತಿರಾತ್ಯ ಸಿಂಯಾ ಹೇಳಿದ್ದಾರೆ. ಜಮೆಶ್ಡಪುರದಿಂದ ಕೋಲ್ಕತ್ತಾಗೆ ಪ್ರಾದೇಶಿಕ ಇಂಡಿಯಾ ಒನ್ ಏರ್ರ್‍ಲೈನ್ ಸೇವೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಮುಂದಿನ ತಿಂಗಳು ಕರ್ನಾಟಕದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗುವುದನ್ನು ಪ್ರಸ್ತಾಪಿಸಿದರು. ಕಳೆದ 20 ವರ್ಷಗಳಲ್ಲಿ ವಿಮಾನಯಾನ ಸಂಸ್ಥೆಗಳು ಮುಚ್ಚುವುದನ್ನೇ ನೋಡಲಾಗುತ್ತಿತ್ತು. ನಮ್ಮ ಸರ್ಕಾರ ಹೊಸ […]

Advertisement

Wordpress Social Share Plugin powered by Ultimatelysocial