ಅಮುಲ್ ವಿಚಾರದಲ್ಲಿ ರಾಜಕಾರಣ ಸಲ್ಲದು ಎಂದು ಸಿಎಂ ತಿಳಿಸಿದ್ದಾರೆ.

ಮುಲ್ ವಿಚಾರದಲ್ಲಿ ರಾಜಕಾರಣ ಸಲ್ಲದು ಎಂದು ಸಿಎಂ ತಿಳಿಸಿದ್ದಾರೆ. ಇದೇ ಸಭೆ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.ನವದೆಹಲಿ:ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಹತ್ತಿರ ಬರುತ್ತಿದೆ.

ಅದರೊಂದಿಗೆ ರಾಜಕೀಯ ಬಿಸಿಯೂ ಏರುತ್ತಿದೆ. ಈ ನಡುವೆ ಈಗ ಹಾಲಿನ ಬಗ್ಗೆ ರಾಜಕಾರಣ ಶುರುವಾಗಿದೆ. ಮತ್ತೊಂದು ಕಡೆ ಇಂದು ಮತ್ತು ನಾಳೆ ನಡೆಯುವ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಅಂತಿಮಗೊಳ್ಳಲಿದೆ.

ದೇಶದ ಅತಿದೊಡ್ಡ ಡೈರಿ ಕಂಪನಿ ಅಮುಲ್ ಈಗ ಬೆಂಗಳೂರಿನಲ್ಲಿ ತನ್ನ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ತೆರೆಯುವುದಾಗಿ ಘೋಷಿಸಿದೆ. ಇದರಿಂದಾಗಿ ದಕ್ಷಿಣ ಭಾರತದ ಪ್ರಮುಖ ಹಾಲು ಉತ್ಪನ್ನ ಕಂಪನಿಯಾದ ನಂದಿನಿಯ ವ್ಯವಹಾರ ಕುಸಿಯಲಿದೆ ಎಂಬ ಆತಂಕ ಎದುರಾಗಿದೆ. ಹೀಗಾಗಿ ಈ ಬಗ್ಗೆ ಕರ್ನಾಟಕದ ರಾಜಕೀಯ ಪಕ್ಷಗಳ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆ ಸಿಎಂ ಬಸವರಾಜ್​ ಬೊಮ್ಮಾಯಿ ನವದೆಹಲಿಯಲ್ಲಿ ಈ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಸಿಎಂ ಹೇಳೊದ್ದೇನು?: ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಮೂಲ್​ ವಿಚಾರದಲ್ಲಿ ನಮಗೆ ಬಹಳ ಸ್ಪಷ್ಟತೆ ಇದೆ. ನಂದಿನಿ ಹಾಲು ನ್ಯಾಷನಲ್​ ಬ್ರ್ಯಾಂಡ್​. ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿಯೂ ಸಹ ನಾವು ನಂದಿನಿ ಬ್ರ್ಯಾಂಡ್​ನ ಉತ್ಪಾದನೆಗಳ ಮಾರಾಟ ಮಾಡಿದ್ದೇವೆ. ಇದರಿಂದಾಗಿ ಹಾಲು ಉತ್ಪಾದನೆ ಹೆಚ್ಚಾಗುತ್ತದೆ. ಮತ್ತೊಂದು ಕಡೆ ಹಾಲು ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರೋತ್ಸಾಹಧನ ಕೊಟ್ಟಿದ್ದು ನಾವು. ಮೆಗಾ ಡೈರಿಗಳು ನಮ್ಮ ಕಾಲದಲ್ಲಿ ಸ್ಥಾಪನೆಯಾಗುತ್ತಿವೆ. ಪ್ರೊಡಕ್ಷನ್​ ಕೆಪ್ಯಾಸಿಟಿ ಹೆಚ್ಚಾಗುತ್ತಿದೆ. ಸ್ವಲದಿನದರಲ್ಲೇ ನಮ್ಮ ನಂದಿನಿ ಬ್ರ್ಯಾಂಡ್​ ದೇಶಾದ್ಯಂತ ನಂಬರ್ ಒನ್​​​ ಆಗಲಿದೆ. ಈ ಅಮೂಲ್​ ಅನ್ನು ರಾಜಕೀಕರಣಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಕಾಂಗ್ರೆಸ್​ನವರು ಎಲ್ಲದರಲ್ಲೂ ರಾಜಕರಣ ಮಾಡುತ್ತಿದ್ದಾರೆ. ನಾವು ಸಹ ಬೇರೆ ರಾಜ್ಯಗಳಲ್ಲಿ ನಂದಿನಿ ಹಾಲಿನ ಉತ್ಪಾದನೆಗಳ ಮಾರಾಟ ಮಾಡುತ್ತಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಭ್ಯರ್ಥಿಗಳ ಬಗ್ಗೆ ಚರ್ಚೆ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ನಾಳೆ ಸಂಜೆ ಐದು ಗಂಟೆಗೆ ಸಂಸದಿಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.

ಸಭೆಯಲ್ಲಿ ನಿರ್ಧಾರ: ಕೆಲ ಎಂಎಲ್​ಸಿ ಮತ್ತು ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ಬಳಿಕ ಎಷ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ನಿರ್ಧಾರವಾಗಲಿದೆ ಅಂತಾ ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ನಮ್ಮ ಶಕ್ತಿ ಮೇಲೆ ನಂಬಿಕೆ ಇದೆ: ಕಾಂಗ್ರೆಸ್​ನಲ್ಲಿ ಟಿಕೆಟ್ ಹಂಚಿಕೆಯ ಗೊಂದಲದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಶಕ್ತಿ ಮೇಲೆ ನಮಗೆ ನಂಬಿಕೆ ಇದೆ. ಸಹಜವಾಗಿಯೇ ಅದರ ಲಾಭ ಆಗಲಿದೆ ಎಂದರು.

ಕಾಂಗ್ರೆಸ್ ಗೆ ನಡುಕ ಹುಟ್ಟಿದೆ: ನಟ ಸುದೀಪ್ ಬಿಜೆಪಿ ಬೆಂಬಲ‌ ನೀಡುವ ಬಗ್ಗೆ ಮಾತನಾಡಿದ ಸಿಎಂ, ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆ ತಂದು ಚುನಾವಣಾ ಪ್ರಚಾರ ಮಾಡಿದ್ದಾರೆ. ಅಂಬರೀಶ್ ಪ್ರಚಾರ ಮಾಡಲಿಲ್ಲವೇ?.. ಶಾಸಕರಾಗಿರಲಿಲ್ಲವೇ?.. ಎಂದು ಪ್ರಶ್ನಿಸಿದರು. ಬಿಜೆಪಿಗೆ ಬೆಂಬಲ‌ ನೀಡುವ ಮುಂಚೆ ಅದರಿಂದಾಗುವ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್​ಗೆ ನಡುಕ ಹುಟ್ಟಿದೆ ಎಂದರು.

ಚರ್ಚೆಯಲ್ಲಿ ತಿಳಿಯಲಿದೆ: ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಆ ತರಹದ ಲೆಕ್ಕಾಚಾರ ಚರ್ಚೆಯಲ್ಲಿ ಮಾಡಿದಾಗಲೇ ತಿಳಿಯುವುದು ಎಂದರು. ನಾಳೆ ಸಂಜೆ ನಡೆಯುವ ಸಂಸದಿಯ ಮಂಡಳಿ ಸಭೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗುವುದು. ರಾಜಕೀಯ ಚಾಣಕ್ಯ ಅಮಿತ್​ ಶಾ ಲೆಕ್ಕಾಚಾರ ತಿಳಿಯಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚುನಾವಣೆ ವೇಳೆ ಅಮುಲ್​​ ವಿವಾದ.. ಕಾಂಗ್ರೆಸ್- ಜೆಡಿಎಸ್​​​ ಆಕ್ಷೇಪ ಏಕೆ?

Sat Apr 8 , 2023
ಆಡಳಿತ ಪಕ್ಷ ಬಿಜೆಪಿ ಅಮುಲ್ ಆಗಮನವನ್ನು ಸ್ವಾಗತಿಸದಿದ್ದರೂ, ವಿರೋಧಿಸುವ ಕಾರ್ಯ ಮಾಡುತ್ತಿಲ್ಲ. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಅಮುಲ್ ಆಗಮನ ರಾಜ್ಯದ ಜನಪ್ರಿಯ ಉತ್ಪನ್ನವಾದ ನಂದಿನಿಗೆ ಅಡ್ಡಿ ಎಂದೇ ಬಣ್ಣಿಸಲಾಗುತ್ತಿದೆ ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಗುಜರಾತ್ ಮೂಲದ ಹೈನು ಉತ್ಪನ್ನ ಸಂಸ್ಥೆ ‘ಅಮುಲ್’ ಕರ್ನಾಟಕ ಪ್ರವೇಶ ಮಾಡುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಆಡಳಿತ ಪಕ್ಷ ಬಿಜೆಪಿ ಅಮುಲ್ ಆಗಮನವನ್ನು ಸ್ವಾಗತಿಸದಿದ್ದರೂ, ವಿರೋಧಿಸುವ ಕಾರ್ಯ ಮಾಡುತ್ತಿಲ್ಲ. […]

Advertisement

Wordpress Social Share Plugin powered by Ultimatelysocial