ಮಾರ್ಚ್‌ ಮೊದಲ ವಾರದಲ್ಲಿ 130 ಕ್ಷೇತ್ರದ ಅಭ್ಯರ್ಥಿಗಳ ಕೈ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ಸಂಕ್ರಾಂತಿ ವೇಳೆಗೆ ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಪಕ್ಷದ ವಿಧಾನಸಭೆ ಚುನಾವಣೆ ಅಭ್ಯರ್ಥಿ ಪಟ್ಟಿ ವಿಳಂಬವಾಗಿದ್ದು, ಇನ್ನು ಕೆಲ ದಿನಗಳಲ್ಲಿಯೇ ಪ್ರಕಟವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ರಾಹುಲ್ ಗಾಂಧಿ ಕೈಗೊಂಡಿದ್ದ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಅವರನ್ನು ಭೇಟಿಯಾಗಿ ಹೈಕಮಾಂಡ್ ನಾಯಕರ ಜತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

ಇದರಿಂದ ರಾಜ್ಯ ಕಾಂಗ್ರೆಸ್ ನಾಯಕರು ಮೊದಲ ಹಂತದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದ 130 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ತಮ್ಮಲ್ಲೇ ಇಟ್ಟುಕೊಂಡಿದ್ದಾರೆ.ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ವಿಳಂಬ : ಇನ್ನೊಂದೆಡೆ ಬಸ್ ಯಾತ್ರೆ, ಮುಂದಿನವಾರ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನ, ನಂತರ ಬಜೆಟ್, ಅದರ ಮೇಲಿನ ಚರ್ಚೆ ಇತ್ಯಾದಿಗಳು ಇರುವ ಹಿನ್ನೆಲೆ ಫೆಬ್ರವರಿ ತಿಂಗಳ ಮೂರನೇ ವಾರದ ಕೊನೆಯವರೆಗೂ ರಾಜ್ಯ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಲಿದ್ದಾರೆ. ಈ ಸಂದರ್ಭದಲ್ಲಿ ಪಟ್ಟಿ ಹಿಡಿದು ಹೈಕಮಾಂಡ್ ನಾಯಕರ ಭೇಟಿಗೆ ತೆರಳುವ ಸಾಧ್ಯತೆ ಬಹಳಷ್ಟು ಕಡಿಮೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಐಎಡಿಎಂಕೆ ಪೋಸ್ಟರ್​​ನಲ್ಲಿಲ್ಲ ಮೋದಿ ಸೇರಿದಂತೆ ಬಿಜೆಪಿ ನಾಯಕರ ಚಿತ್ರ.

Thu Feb 2 , 2023
ಬುಧವಾರ ಬೆಳಗ್ಗೆ ಪಕ್ಷದ ಕಚೇರಿಯಲ್ಲಿ ಹಾಕಲಾದ ಪೋಸ್ಟರ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರ ಯಾವುದೇ ಚಿತ್ರಗಳಿಲ್ಲ. ಮೈತ್ರಿಕೂಟದ ಹೆಸರನ್ನು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ (NDA) ‘ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಅಲೈಯನ್ಸ್’ ಎಂದು ಬದಲಾಯಿಸಲಾಗಿದೆ. ಚೆನ್ನೈ: ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಎಡಪ್ಪಾಡಿ ಕೆ ಪಳನಿಸಾಮಿ   ನೇತೃತ್ವದ ಎಐಎಡಿಎಂಕೆ ಮತ್ತು ಅದರ ಮಿತ್ರಪಕ್ಷ ಬಿಜೆಪಿ   ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗುತ್ತಿದೆ. ಈರೋಡ್ ಪೂರ್ವ ವಿಧಾನಸಭೆಗೆ […]

Advertisement

Wordpress Social Share Plugin powered by Ultimatelysocial