OTTಯಲ್ಲೂ ಗೆದ್ದು ಬೀಗಿದ ‘ದಿ ಕಾಶ್ಮೀರ್‌ ಫೈಲ್ಸ್‌’:

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಹೊಸ ಸಂಚಲನವನ್ನು ಮೂಡಿಸಿತ್ತು. ಕಾಶ್ಮೀರ ಪಂಡಿತರ ಹತ್ಯೆ ಹಾಗೂ ಜೀವನಕ್ಕಾಗಿ ಹೋರಾಟ ನಡೆಸಿದ ಘಟನೆಗಳ ಆಧಾರದ ಮೇಲೆ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿತ್ತು.

ಈ ಚಿತ್ರ ಎಲ್ಲಾ ಪ್ರೇಕ್ಷಕರಿಗೂ ಹತ್ತಿರವಾಗಿತ್ತು. ಆ ಮಟ್ಟಿಗೆ ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ರಾಜಕೀಯ ವಲಯದಲ್ಲೂ ಭಾರೀ ಮೆಚ್ಚುಗೆ ವ್ಯಕ್ತವಾಯಿತು. ಹಲವು ರಾಜ್ಯಗಳಲ್ಲಿ ತೆರಿಗೆ ರಹಿತ ಸಿನಿಮಾ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಜೊತೆಗೆ ಉಚಿತ ಟಿಕೆಟ್ ವ್ಯವಸ್ಥೆಗಳನ್ನು ಕೂಡ ಮಾಡಲಾಗಿತ್ತು. ರಾಜಕೀಯ ನಾಯಕರುಗಳೇ ಈ ಸಿನಿಮಾವನ್ನು ಪ್ರತಿಯೊಬ್ಬ ಭಾರತೀಯನು ನೋಡಬೇಕು ಎಂದು ಪ್ರಚಾರ ಮಾಡಿದ್ದರು. ಆದರೆ, ಈ ಸಿನಿಮಾ ಬಗ್ಗೆ ವಿರೋಧ ಪಕ್ಷದ ನಾಯಕರು ಕಿಡಕಾರಿದ್ದರು. ಇದೊಂದು ಕಾಲ್ಪನಿಕ ಕಥೆಯೆಂದು ವಾದಿಸಿದ್ದರು. ಆದರೂ ಸಹ ಈ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮಾರ್ಚ್ 11 ರಂದು ವಿಶ್ವದಾದ್ಯಂತ ರಿಲೀಸ್ ಆಗಿತ್ತು. ಈ ಸಿನಿಮಾಗೆ ಪ್ರಧಾನಿ ಮೋದಿ ಸೇರಿದಂತೆ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಿನಿಮಾಗೆ ಸಾಥ್ ನೀಡಿದ್ದರು. ಸಿನಿಮಾ ಕೂಡ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿಕೊಂಡಿತ್ತು. 350 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ ಸಿನಿಮಾ ಭರ್ಜರಿ ಯಶಸ್ಸು ಕಂಡಿತ್ತು. ಸದ್ಯ ಈ ಸಿನಿಮಾವೀಗ ಮೇ 11 ರಂದು ಒಟಿಟಿಯಲ್ಲಿ ರಿಲೀಸ್ ಆಗಿ ಅಲ್ಲಿಯೂ ಕೂಡ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ.

ಮೇ 11 ರಂದು ಜೀ5 ನಲ್ಲಿ ರಿಲೀಸ್‌ ಆದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರೀ ವೀಕ್ಷಣೆ ಪಡೆದುಕೊಂಡಿದೆ. ಕೇವಲ ಒಂದು ವಾರದಲ್ಲಿಯೇ 20 ಲಕ್ಷಕ್ಕೂ ಅಧಿಕ ಜನ ಜೀ5ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಈ ಸಂಭ್ರಮವನ್ನು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಚರಿಸಿದ್ದಾರೆ.

ಜೀ5ನಲ್ಲಿ 20 ಲಕ್ಷಕ್ಕೂ ಅಧಿಕ ವೀಕ್ಷಣೆಯಾಗಿರುವ ಕುರಿತು ಮಾತನಾಡಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಜೀ5 ನಲ್ಲಿ ರಿಲೀಸ್ ಆದ ನಮ್ಮ ಸಿನಿಮಾಗೆ ಭರ್ಜರಿ ವೀವ್ಸ್ ಸಿಕ್ಕಿದೆ. ಜನರು ‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾಗೆ ಉತ್ತಮ ಸ್ಪಂದನೆ ನೀಡಿದ್ದಾರೆ. ಇದು ಒಂದು ದೊಡ್ಡ ಸಾಧನೆ. ನಮ್ಮ ಚಿತ್ರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಎಂದು ಸಂತೋಷವನ್ನು ಹಂಚಿಕೊಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್‌’ ಸಿನಿಮಾವನ್ನು ಕೇವಲ 15 ಕೋಟಿ ರೂಪಾಯಿ ಖರ್ಚು ಮಾಡಿ ತಯಾರು ಮಾಡಲಾಗಿತ್ತು. ಸಿನಿಮಾದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. 1991 ರ ಸಮಯದಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ನರಮೇಧ ಹಾಗೂ ವಲಸೆಯನ್ನು ಸಿನಿಮಾದಲ್ಲಿ ತೋರಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʼಕಾಫಿ ಪುಡಿʼಯಿಂದ ಹೆಚ್ಚಲಿದೆ ಮುಖದ ಕಾಂತಿ...!

Fri May 20 , 2022
ಬೆಳಗ್ಗೆ ಎದ್ದ ಕೂಡಲೇ ಒಂದ್ ಕಪ್ ಬಿಸಿ ಬಿಸಿ ಕಾಫಿ ಕುಡಿದರೆ ಸಾಕು ನಿದ್ರೆ ಹೋಗಿ, ಮೈಂಡ್ ಫ್ರೆಶ್ ಆಗುತ್ತೆ. ಆದ್ರೆ ಈ ಕಾಫಿ ಪಾನೀಯ ಮಾತ್ರವಲ್ಲ. ಸೌಂದರ್ಯಕ್ಕೂ ಉಪಯೋಗವಾಗುತ್ತೆ. ಬ್ಯೂಟಿ ಪಾರ್ಲರ್ ಗೆ ಹೋಗಿ ಸಾವಿರಾರು ರೂಪಾಯಿ ಹಣ ವ್ಯರ್ಥ ಮಾಡೋ ಬದಲು ಮನೆಯಲ್ಲಿ ಕಾಫಿ ಪುಡಿಯಿಂದ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಮೊದಲಿಗೆ ಒಂದು ಸ್ಪೂನ್ ಕಾಫಿ ಪುಡಿಗೆ ಸ್ವಲ್ಪ ರೋಸ್ ವಾಟರ್ ಹಾಕಿ ಕಲಸಿಕೊಂಡು ಮುಖಕ್ಕೆ ಹಚ್ಚಿ ಮಸಾಜ್‍ […]

Advertisement

Wordpress Social Share Plugin powered by Ultimatelysocial