ದಿ ಕಾಶ್ಮೀರಿ ಫೈಲ್ಸ್​ ಚಿತ್ರದ ಎಫೆಕ್ಟ್​: ಕಾ!

 

ಬೆಂಗಳೂರು: ಕಾಶ್ಮೀರದಲ್ಲಿ ದಶಕಗಳ ಕಾಲ ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ನೈಜತೆಯನ್ನು ಇತ್ತೀಚೆಗೆ ಬಿಡುಗಡೆಯಾದ ಕಾಶ್ಮೀರಿ ಫೈಲ್ಸ್​ ಚಿತ್ರ ತೋರಿಸಿಕೊಟ್ಟಿತು. ಇದೀಗ ಈ ಚಿತ್ರ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ ಎಂದರೆ ತಪ್ಪಾಗಲಾರದು.

ಹೌದು ಕಾಶ್ಮೀರದಲ್ಲಿ ಬದುಕಲಾರದೇ ಆಸ್ತಿ-ಪಾಸ್ತಿಯನ್ನು ತೊರೆದು ಪ್ರಾಣ ರಕ್ಷಣೆಗಾಗಿ ಅಲ್ಲಿಂದ ವಲಸೆಯಾಗಿ ಬಂದ ಸಾವಿರಾರು ಕಾಶ್ಮೀರಿ ಪಂಡಿತರು ದೇಶದ ವಿವಿಧ ಭಾಗಗಳಲ್ಲಿ ಆಶ್ರಯ ಪಡೆದಿದ್ದಾರೆ. ಇಂತಹ ಕಾಶ್ಮೀರಿ ಪಂಡಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಅಂಬಿಕಾ ಮಹಾವಿದ್ಯಾಲಯದ ಉಚಿತ ಶಿಕ್ಷಣ ನೀಡುವುದಾಗಿ ಹೇಳಿದೆ.

ಈ ಬಗ್ಗೆ ಸಂಸ್ಥೆ ಸಂಚಾಲಕ ಸುಬ್ರಹ್ಮಣ್ಯ ನತ್ತೋಜ್​​ ಶನಿವಾರ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ 6ನೇ ತರಗತಿಯಿಂದ ಪದವಿವರೆಗೂ ಉಚಿತ ಶಿಕ್ಷಣ ನೀಡಲಾಗುವುದು. ಅಲ್ಲದೇ ಹಾಸ್ಟೆಲ್​ ವ್ಯವಸ್ಥೆ ಕೂಡ ಮಾಡಿಕೊಡಲಾಗುತ್ತದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ಈಗಾಗಲೇ ನಾಲ್ವರು ಕಾಶ್ಮೀರಿ ಪಂಡಿತರ ಮಕ್ಕಳನ್ನು ದಾಖಲು ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರಿ ಫೈಲ್ಸ್​ ಚಿತ್ರ ಕಾಶ್ಮೀರ ಪಂಡಿತರ ಸ್ಥಿತಿಗತಿ ಕುರಿತ ನೈಜತೆಯನ್ನು ತೋರಿಸಿಕೊಟ್ಟಿತ್ತು. ದೇಶಾದ್ಯಂತ ಈ ಚಿತ್ರಕ್ಕೆ ಭಾರೀ ಬೆಂಬಲ ವ್ಯಕ್ತವಾಗಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬರ್ಲಿನ್, ಕೋಪನ್ ಹೇಗನ್‌ ಮತ್ತು ಪ್ಯಾರಿಸ್ ಪ್ರವಾಸಕ್ಕೆ ಮುನ್ನ ಪ್ರಧಾನಿ

Sun May 1 , 2022
ಹೊಸದಿಲ್ಲಿ: ಬರ್ಲಿನ್, ಕೋಪನ್ ಹೇಗನ್‌ ಮತ್ತು ಪ್ಯಾರಿಸ್ ಪ್ರವಾಸಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರದೇಶವು ಅನೇಕ ಸವಾಲುಗಳು ಮತ್ತು ಆಯ್ಕೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಯುರೋಪ್ ಪ್ರವಾಸ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದ ನಿರ್ಗಮನ ಹೇಳಿಕೆಯಲ್ಲಿ, ಪ್ರಧಾನ ಮಂತ್ರಿ ಅವರು ತಮ್ಮ ಕಾರ್ಯಕ್ರಮಗಳ ಮೂಲಕ, “ಭಾರತದ ಅನ್ವೇಷಣೆಯಲ್ಲಿ ಪ್ರಮುಖ ಸಹಚರರಾಗಿರುವ ತಮ್ಮ ಯುರೋಪಿಯನ್ ಪಾಲುದಾರರೊಂದಿಗೆ ಶಾಂತಿ ಮತ್ತು ಸಮೃದ್ಧಿಗಾಗಿ ಸಹಕಾರದ ಮನೋಭಾವವನ್ನು […]

Advertisement

Wordpress Social Share Plugin powered by Ultimatelysocial