ನಮ್ಮ ದೇಶದಲ್ಲಿ ಗರ್ಭಕಂಠದ ಕ್ಯಾನ್ಸರ್’ನಿಂದ ಬಳಲುತ್ತಿರುವ ಮಹಿಳೆಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ನಮ್ಮ ದೇಶದಲ್ಲಿ ಗರ್ಭಕಂಠದ ಕ್ಯಾನ್ಸರ್’ನಿಂದ ಬಳಲುತ್ತಿರುವ ಮಹಿಳೆಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಜೊತೆಗೆ, ಗರ್ಭಕಂಠದ ಕ್ಯಾನ್ಸರ್ ವಿಶ್ವಾದ್ಯಂತ ಮಹಿಳೆಯರಲ್ಲಿ ನಾಲ್ಕನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಮತ್ತು ಭಾರತದಲ್ಲಿ ಎರಡನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ.

ಈ ಗರ್ಭಕಂಠದ ಕ್ಯಾನ್ಸರ್ ತಪಾಸಣೆಗೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ 9 ರಿಂದ 14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ಹಾಕಲು ಕೇಂದ್ರ ನಿರ್ಧರಿಸಿದೆ . ಗರ್ಭಕಂಠದ ಕ್ಯಾನ್ಸರ್ ಮಹಿಳೆಯರ ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದ್ದು, ಇದನ್ನ ತಡೆಯಲು ಕೇಂದ್ರ ಸರ್ಕಾರ ಲಸಿಕೆಗಳನ್ನ ನೀಡಲಿದೆ.

ಈ ವರ್ಷದ ಜೂನ್ನಲ್ಲಿ ರಾಷ್ಟ್ರೀಯ ಪ್ರತಿರಕ್ಷಣಾ ಕಾರ್ಯಕ್ರಮದಲ್ಲಿ ಒಂಬತ್ತರಿಂದ 14 ವರ್ಷ ವಯಸ್ಸಿನ ಹೆಣ್ಣು ಮಕ್ಕಳಿಗೆ ಕೇಂದ್ರವು HPV ಲಸಿಕೆಯನ್ನ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಲಸಿಕೆಯನ್ನ 9-14 ವರ್ಷ ವಯಸ್ಸಿನ ಹುಡುಗಿಯರಿಗೆ ಉಚಿತವಾಗಿ ನೀಡಲಾಗುವುದು. ಗರ್ಭಕಂಠದ ಕ್ಯಾನ್ಸರ್ ಹರಡುವುದನ್ನ ತಡೆಯಲು HPV ಲಸಿಕೆ ಪ್ರಮುಖವಾಗಿದೆ. ಏಪ್ರಿಲ್ನಲ್ಲಿ 16 ಕೋಟಿ ಡೋಸ್’ಗಳಿಗೆ ಟೆಂಡರ್ ಕರೆಯಲಿದ್ದು, ದೇಶದಲ್ಲಿ ಪ್ರತಿ ವರ್ಷ 35 ಸಾವಿರ ಮಹಿಳೆಯರು ಗರ್ಭಕಂಠದ ಕ್ಯಾನ್ಸರ್ನಿಂದ ಸಾವನ್ನಪ್ಪುತ್ತಿದ್ದಾರೆ ಎಂದು ತಿಳಿದಿದೆ. ಈ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ ಪಿವಿ ಲಸಿಕೆ ನೀಡುತ್ತಿರುವುದು ರೋಚಕವಾಗಿದೆ ಎನ್ನಲಾಗಿದೆ.

ಆದ್ರೆ, ದೇಶದ ಪ್ರತಿ ಜಿಲ್ಲೆಗಳಲ್ಲಿ 5 ರಿಂದ 10ನೇ ತರಗತಿ ವರೆಗಿನ ಬಾಲಕಿಯರ ಸಂಖ್ಯೆಯನ್ನ ಕ್ರೋಡೀಕರಿಸಿ ಆ ಪಟ್ಟಿಯನ್ನ ನೀಡುವಂತೆ ಕೇಂದ್ರವು ಈಗಾಗಲೇ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳನ್ನ ಕೇಳಿದೆ ಎಂದು ತಿಳಿದಿದೆ. ಆದ್ರೆ, ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್’ನ್ನ ಆರಂಭದಲ್ಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿದ್ರೆ ದೂರವಿಡಬಹುದು ಎನ್ನುತ್ತಾರೆ ವೈದ್ಯರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸ್ವತಂತ್ರ ಕೇಂದ್ರಾಡಳಿತ ಪ್ರದೇಶಕ್ಕಿಂತ ಜಮ್ಮು-ಕಾಶ್ಮೀರದ ಭಾಗವಾಗಿದ್ದಾಗಲೇ ಚೆನ್ನಾಗಿತ್ತು:

Tue Jan 31 , 2023
ಲಡಾಖ್: ಲಡಾಖ್‌ನ ಮಂಜುಗಡ್ಡೆಗಳು, ಪರ್ವತಗಳು, ನೆಲ ಹಾಗೂ ಜನರನ್ನು ರಕ್ಷಿಸಲು ಲಡಾಖ್ ಅನ್ನು ಸಂವಿಧಾನದ ಆರನೇ ಪರಿಚ್ಛೇದದಡಿ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಮ್ಯಾಗ್ಸಸ್ಸೆ ಪ್ರಶಸ್ತಿ ವಿಜೇತ ಸೋನಂ ವಾಂಗ್‌ಚುಕ್ ನಡೆಸುತ್ತಿದ್ದ ಐದು ದಿನಗಳ ಹವಾಮಾನ ಉಪವಾಸ ಸತ್ಯಾಗ್ರಹ ಸೋಮವಾರ ಅಂತ್ಯಗೊಂಡಿದ್ದು, ಅವರು ಕೊಂಚ ವಿಚಲಿತರಾಗಿದ್ದಂತೆ ಕಂಡು ಬಂದರು. ಒಂದು ಕಾಲದ ಪ್ರಧಾನಿ ನರೇಂದ್ರ ಮೋದಿ ಅವರ ಕಟ್ಟಾ ಬೆಂಬಲಿಗ, 2019ರ ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ, […]

Advertisement

Wordpress Social Share Plugin powered by Ultimatelysocial