ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿ ಜೈಲಿಗೆ ಹೋದ ಪ್ರಯಾಣಿಕ!

ದುಬೈಯಿಂದ ಭಾರತಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿ ಜೈಲಿಗೆ ಹೋಗಿದ್ದಾನೆ!

ವಿಮಾನ ವಿಳಂಬದಿಂದ ಅಸಮಧಾನಗೊಂಡಿದ್ದ ಮೋತಿ ಸಿಂಗ್ ರಾಥೋಡ್ ಈ ರೀತಿ ಟ್ವೀಟ್ ಮಾಡಿದ್ದಾರೆ.

ದುಬೈನಿಂದ ಜೈಪುರಕ್ಕೆ ಮೋತಿ ಸಿಂಗ್ ಪ್ರಯಾಣಿಸುತ್ತಿದ್ದರು. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ದೆಹಲಿಯತ್ತ ಹೊರಟಿತ್ತು.

ಎಸ್ ಜಿ 58 ವಿಮಾನದ ಮೂಲಕ ದೆಹಲಿ ವಿಮಾನಕ್ಕೆ ಬಂದಿಳಿದಿದ್ದು, ಎಲ್ಲ ಕ್ಲಿಯರೆನ್ಸ್ ನಂತರ ಮತ್ತೆ ಜೈಪುರ್‌ಗೆ ತೆರಳಬೇಕಿತ್ತು. ಈ ಮಧ್ಯೆ ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿ, ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇದರ ಜೊತೆಗೆ ಸಿಬ್ಬಂದಿ ಜತೆ ಪ್ರಯಾಣಿಕರು ಜಗಳ ಆಡುತ್ತಿರುವ ವಿಡಿಯೋ ಕೂಡ ಪೋಸ್ಟ್ ಮಾಡಿದ್ದಾರೆ. ಸ್ವಲ್ಪ ಸಮಯದಲ್ಲಿ ತಪ್ಪಿನ ಅರಿವಾಗಿದ್ದು, ಟ್ವಿಟರ್‌ನಲ್ಲಿ ಕ್ಷಮೆ ಕೋರಿದ್ದಾರೆ. ಇಂಗ್ಲಿಷ್ ಕೊರತೆಯಿಂದ ತಪ್ಪು ಬರೆದಿದ್ದೇನೆ ಎಂದು ಹೇಳಿದ್ದಾರೆ. ಮುಂದಿನ ಕ್ರಮಕ್ಕಾಗಿ ಮೋತಿ ಸಿಂಗ್‌ನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ಆದಿತ್ಯ ಅಭಿನಯದ "ಟೆರರ್".

Fri Jan 27 , 2023
ಸಿಲ್ಕ್ ಮಂಜು ನಿರ್ಮಿಸುತ್ತಿರುವ, ರಂಜನ್ ಶಿವರಾಮ ಗೌಡ ನಿರ್ದೇಶನದ ಹಾಗೂ ಆದಿತ್ಯ ನಾಯಕರಾಗಿ ನಟಿಸುತ್ತಿರುವ “ಟೆರರ್” ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐ ಪಿ ಎಸ್ ಅಧಿಕಾರಿ ರವಿಕಾಂತೇಗೌಡ ಅವರು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಲಹರಿ ವೇಲು […]

Advertisement

Wordpress Social Share Plugin powered by Ultimatelysocial