7ನೇ ವೇತನ ಆಯೋಗ ಜಾರಿಗಾಗಿ ಸಿಡಿದೆದ್ದ ‘ರಾಜ್ಯ ಸರ್ಕಾರಿ ನೌಕರ’ರು:

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ 7ನೇ ವೇತನ ಆಯೋಗದ ವರದಿ ಜಾರಿಗೆ ಹಾಗೂ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ, ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ನಾಳೆ ಸಾಮೂಹಿಕವಾಗಿ ಪ್ರತಿಭಟನೆ ನಡೆಸುತ್ತಿರುವ ನೌಕರರು, ಎಲ್ಲಾ ಸರ್ಕಾರಿ ಕಚೇರಿಯನ್ನು ಬಂದ್ ಮಾಡಿ ಅನಿರ್ಧಿಷ್ಟಾವಧಿಯ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ, ನಾಳೆ ಸಾಮೂಹಿಕವಾಗಿ ಸರ್ಕಾರಿ ನೌಕರರು ಪ್ರತಿಭಟನೆ ಮಾಡುತ್ತೇವೆ. ನಾಳೆಯಿಂದ ಎಲ್ಲಾ ಸರ್ಕಾರಿ ಕಚೇರಿಗಳು ಬಂದ್ ಆಗಲಿದ್ದಾವೆ ಎಂದರು.ಬಜೆಟ್ ನಲ್ಲಿ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಕಳೆದ 1 ವರ್ಷದಿಂದ ವೇತನ ಪರಿಷ್ಕರಣೆ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೇ ಈವರೆಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಈಡೇರಿಸಿಲ್ಲ ಎಂದು ಗುಡುಗಿದರು.ನಾವು ಈಗಾಗಲೇ ಹಲವು ಭಾರೀ 7ನೇ ವೇತನ ಆಯೋಗ ಜಾರಿ ಹಾಗೂ ಓಪಿಎಸ್ ಗೆ ಒತ್ತಾಯಿಸಿ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ರಾಜ್ಯ ಸರ್ಕಾರ ಯಾವುದೇ ರೀತಿಯಲ್ಲೂ ಸ್ಪಂದಿಸಿಲ್ಲ. ಹೀಗಾಗಿ ನಾಳೆಯಿಂದ ಅನಿರ್ಧಿಷ್ಟಾವಧಿಗೆ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ ಎಂದು ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಮುದಾಯ ಭವನಕ್ಕೆ ₹ 10 ಲಕ್ಷ ಅನುದಾನ,

Tue Feb 28 , 2023
ಕಲಬುರಗಿ: ‘ಬಿದ್ದಾಪುರ ಕಾಲೊನಿಯಲ್ಲಿ ವಿಪ್ರ ಅಡುಗೆದಾರರ ಸಮುದಾಯ ಭವನಕ್ಕೆ ಈಗಾಗಲೇ ಜಾಗ ಮಂಜೂರು ಆಗಿದೆ. ಈ ಭವನಕ್ಕೆ ₹ 10 ಲಕ್ಷ ಅನುದಾನ ನೀಡಲಾಗುವುದು’ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಭರವಸೆ ನೀಡಿದರು.ನಗರದ ಹಳೇ ಕೊಠಾರಿ ಭವನದಲ್ಲಿ ಸೋಮವಾರ ಅಖಿಲ ಕರ್ನಾಟಕ ವಿಪ್ರ ಅಡುಗೆದಾರರು ಹಾಗೂ ಅಡುಗೆ ಸಹಾಯಕರ ಕ್ಷೇಮಾಭಿವೃದ್ಧಿ ಸಂಘ, ಅನ್ನಪೂರ್ಣೇಶ್ವರಿ ಅಡುಗೆ ಮಾಡುವವರು ಮತ್ತು ಬಡಿಸುವವರ ಸಂಘದ ಸಹಭಾಗಿತ್ವದಲ್ಲಿ […]

Advertisement

Wordpress Social Share Plugin powered by Ultimatelysocial