ಭಾರತದಲ್ಲಿ ಬಿಬಿಸಿ ನಿಷೇಧ ಕೋರಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್(BBC) ಮಾಧ್ಯಮ ಸಂಸ್ಥೆಯನ್ನು ಭಾರತದಲ್ಲಿ ನಿಷೇಧಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

ಈ ಅರ್ಜಿಯು ತಪ್ಪು ಗ್ರಹಿಕೆಯಿಂದ ಕೂಡಿದೆ ಎಂಬ ಕಾರಣ ನೀಡಿ, ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಾಲಯವು ಹೇಳಿದೆ. 2002 ಗುಜರಾತ್ ದಂಗೆಯ ಕುರಿತು ಬಿಬಿಸಿ ಎರಡು ಭಾಗಗಳಲ್ಲಿ ಸಾಕ್ಷ್ಯ ಚಿತ್ರವನ್ನು ರೂಪಿಸಿತ್ತು. ಈ ಡ್ಯಾಕುಮೆಂಟರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಋಣಾತ್ಮಕವಾಗಿ ತೋರಿಸಲಾಗಿದೆ ಎಂದು ಆರೋಪಿಸಿ, ಭಾರತದಲ್ಲಿ ಬಿಬಿಸಿ ಕಾರ್ಯಾಚರಣೆಯ ಮೇಲೆ ನಿಷೇಧ ಹೇರಬೇಕೆಂದು ಅರ್ಜಿ ದಾಖಲಾಗಿತ್ತು(Ban BBC In India).

ಸಾಕ್ಷ್ಯಚಿತ್ರದ ಹಿನ್ನೆಲೆಯಲ್ಲಿ ಭಾರತದಲ್ಲಿ ಬಿಬಿಸಿ ನಿಷೇಧ ಕೋರಿ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಸಾಕ್ಷ್ಯ ಚಿತ್ರವೊಂದು ದೇಶದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಪ್ರಶ್ನಿಸಿತು. ಅಲ್ಲದೇ, ಇದೊಂದು ತಪ್ಪು ಗ್ರಹಿಕೆಯಿಂದ ಕೂಡಿದ ಅರ್ಜಿ ಎಂದು ವಜಾ ಮಾಡಿತು.

ಅರ್ಜಿದಾರ ಪರ ವಾದಿಸಿದ ಹಿರಿಯ ನ್ಯಾಯವಾದಿ ಪಿಂಕಿ ಆನಂದ್, ದೇಶದ ಇಮೇಜ್ ಅನ್ನು ಬಿಬಿಸಿ ಉದ್ದೇಶ ಪೂರ್ವಕವಾಗಿಯೇ ಹಾಳು ಮಾಡುತ್ತಿದೆ. ಈ ಸಂಚಿನ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕೆಂದು ವಾದಿಸಿದರು. ಆಗ ಕೋರ್ಟ್, ಈ ರೀತಿಯ ಆದೇಶಗಳನ್ನು ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿತು ಮತ್ತು ಅರ್ಜಿಯನ್ನು ವಜಾ ಮಾಡಿತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೆ.13 ರಿಂದ ಭಾರತಕ್ಕೆ 5 ದೇಶಗಳಿಂದ ಆಗಮಿಸುವ ʼವಿದೇಶಿ ಪ್ರಯಾಣಿಕರಿಗೆ RT-PCR ಟೆಸ್ಟ್‌ ಕಡ್ಡಾಯವಲ್ಲʼ

Fri Feb 10 , 2023
ನವದೆಹಲಿ: ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್‌ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.  ಅಧಿಸೂಚನೆಯ ಪ್ರಕಾರ, ಫೆಬ್ರವರಿ 13 ರಿಂದ ಚೀನಾ, ಸಿಂಗಾಪುರ್, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್’ ದೇಶಗಳಿಂದ ಭಾರತಕ್ಕೆ ಆಗಮಿಸುವವರು ಕಡ್ಡಾಯ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ‘ಸಚಿವಾಲಯವು ತನ್ನ ‘ಅಂತರರಾಷ್ಟ್ರೀಯ […]

Advertisement

Wordpress Social Share Plugin powered by Ultimatelysocial