ಬಾಲ್ಯ ವಿವಾಹದ ವಿರುದ್ಧ ಸಮರ:

ಗುವಾಹಟಿ: ಅಸ್ಸಾಂನಲ್ಲಿ ಇದುವರೆಗೆ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ 1,800 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ತಿಳಿಸಿದ್ದಾರೆ. ಶೂನ್ಯ ಸಹಿಷ್ಣುತೆಯ ಮನೋಭಾವದಿಂದ ವರ್ತಿಸುವಂತೆ ಅಸ್ಸಾಂ ಪೊಲೀಸರನ್ನು ಕೇಳಿದ್ದೇನೆ ಎಂದು ಬಿಸ್ವಾ ಹೇಳಿದರು.

‘ಬಾಲ್ಯ ವಿವಾಹ ನಿಷೇಧ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಸ್ತುತ ರಾಜ್ಯಾದ್ಯಂತ ಬಂಧನಗಳು ನಡೆಯುತ್ತಿವೆ. ಇಲ್ಲಿಯವರೆಗೆ ಸುಮಾರು 1800 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಮಹಿಳೆಯರ ಮೇಲಿನ ಅಕ್ಷಮ್ಯ ಮತ್ತು ಘೋರ ಅಪರಾಧದ ವಿರುದ್ಧ ಶೂನ್ಯ ಸಹಿಷ್ಣುತೆಯ ಮನೋಭಾವದಿಂದ ವರ್ತಿಸುವಂತೆ ನಾನು ಅಸ್ಸಾಂ ಪೊಲೀಸರನ್ನು ಕೇಳಿದ್ದೇನೆ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಹದಿನೈದು ದಿನಗಳಿಗಿಂತ ಕಡಿಮೆ ಅವಧಿಯಲ್ಲಿ ಅಸ್ಸಾಂನಾದ್ಯಂತ ದಾಖಲಾದ 4,000 ಕ್ಕೂ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ನಿನ್ನೆ ತಿಳಿಸಿದ್ದರು, ಶುಕ್ರವಾರದಿಂದ ಆರೋಪಿಗಳ ವಿರುದ್ಧ ಶಿಸ್ತುಕ್ರಮ ಪ್ರಾರಂಭವಾಗಲಿದೆ ಎಂದು ಘೋಷಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಸುಪ್ರೀಂಕೋರ್ಟ್ ನಕಾರ.

Sat Feb 4 , 2023
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದು ರಾಜಕೀಯ ಪ್ರಜಾಪ್ರಭುತ್ವದ ವಿಷಯವಾಗಿದ್ದು, ನೀತಿ ನಿರೂಪಣೆಗೆ ಸಂಬಂಧಿಸಿದ ವಿಷಯವಾಗಿದೆ. ಇದನ್ನು ಸಂಸತ್ತಿನಲ್ಲಿ ನಿರ್ಧರಿಸಬೇಕು ಎಂದು ನ್ಯಾ.ಡಿ.ವೈ ಚಂದ್ರಚೂಡ್‌ ನೇತೃತ್ವದ ನ್ಯಾಯ ಪೀಠ ತಿಳಿಸಿದೆ. ಲೋಕಸಭಾ ಚುನಾವಣೆಯಲ್ಲಿ ಒಂದಕ್ಕಿಂತ ಹಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದನ್ನು ನಿರ್ಬಂಧಿಸಬೇಕೆಂದು ಕೋರಿ ವಕೀಲೆ ಅಶ್ವಿನಿ ಉಪಧ್ಯಾಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ‘ಬೇರೆ ಬೇರೆ […]

Advertisement

Wordpress Social Share Plugin powered by Ultimatelysocial