ಸೋಶಿಯಲ್ ಮೀಡಿಯಾದಲ್ಲಿ ಸುದೀಪ್ ರಾಜ್ಯ ರಾಜಕೀಯ ಎಂಟ್ರಿ ಕುರಿತು ಹಲವು ಅಭಿಪ್ರಾಯಗಳು ಕೇಳಿಬರುತ್ತಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರಾಜಕೀಯ ಪ್ರವೇಶದ ಕುರಿತು ಭಾರೀ ಚರ್ಚೆಯಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಸುದೀಪ್ ರಾಜ್ಯ ರಾಜಕೀಯ ಎಂಟ್ರಿ ಕುರಿತು ಹಲವು ಅಭಿಪ್ರಾಯಗಳು ಕೇಳಿಬರುತ್ತಿದೆ.

ಕಿಚ್ಚ ಸುದೀಪ್ ಕಾಂಗ್ರೆಸ್ ಪಕ್ಷಕಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಬೆನ್ನಲ್ಲೇ ಅಭಿಮಾನಿಗಳು ಸುದೀಪ್ ಗೆ ಮನವಿಯೊಂದನ್ನು ಮಾಡಿದ್ದಾರೆ.ಸುದೀಪ್ ಅವರೇ.ದಯವಿಟ್ಟು ನೀವು ರಾಜಕೀಯಕ್ಕೆ ಹೋಗಬೇಡಿ. ಅಸಂಖ್ಯಾತ ಜನರ ಪ್ರೀತಿ, ಅಭಿಮಾನ ಸಂಪಾದಿಸಿರುವ ನೀವು ನೀವಾಗಿಯೇ ಇರಿ. ರಾಜಕೀಯಕ್ಕೆ ಹೋಗಿ ಅಭಿಮಾನ ಕಳೆದುಕೊಳ್ಳಬೇಡಿ ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ.

ಇತ್ತೀಚೆಗೆ ಸುದೀಪ್ ರನ್ನು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಫೋಟೋಗಳು ವೈರಲ್ ಆಗಿತ್ತು. ಹೀಗಾಗಿ ನೀವು ಕಾಂಗ್ರೆಸ್ ಸೇರ್ಪಡೆಯಾಗುತ್ತೀರಾ ಎಂದು ಕಿಚ್ಚನಿಗೆ ಕೇಳಲಾಗಿತ್ತು. ಆಗ ರಾಜಕೀಯ ಪಕ್ಷಗಳಿಂದ ಆಹ್ವಾನ ಬಂದಿರುವುದು ನಿಜ. ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಲ್ಲಿ ನನ್ನ ಸ್ನೇಹಿತರಿದ್ದಾರೆ. ಆದರೆ ಅದರ ಬಗ್ಗೆ ನಾನಿನ್ನೂ ತೀರ್ಮಾನ ಕೈಗೊಂಡಿಲ್ಲ ಎಂದಿದ್ದರು.ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಸುದೀಪ್ ಕಾಂಗ್ರೆಸ್ ಸೇರ್ಪಡೆ ಸುದ್ದಿ ವಿಚಾರಕ್ಕೆ ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಟ ಸುದೀಪ್ ಜೊತೆ ರಾಜಕೀಯ ವಿಚಾರದ ಬಗ್ಗೆ ಚರ್ಚಿಸಿದ್ದೇನೆ. ನಟ ಸುದೀಪ್ ಹಲವು ಸಾಮಾಜಿಕ ಸೇವೆಯ ಕೆಲಸ ಮಾಡಿದ್ದಾರೆ. ಈ ಹಿನ್ನೆಲೆ ಚರ್ಚೆ ಮಾಡಿದ್ದೇವೆ, ನಾವು ರಾಜಕೀಯಕ್ಕೆ ಬರುವಂತೆ ನಾವು ಬಲವಂತ ಮಾಡಿಲ್ಲ. ಬಲವಂತ ಮಾಡುವ ಪ್ರಶ್ನೆಯೇ ಇಲ್ಲ. ನನ್ನ ಕೆಲವು ಅನುಭವಗಳನ್ನು ಹೇಳಿದ್ದೇನೆ ಅಷ್ಟೇ, ನಾನೇನು ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸುದೀಪ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಈ ವಿಚಾರವನ್ನು ಸ್ವತಃ ಸುದೀಪ್ ಅವರೇ ಒಪ್ಪಿಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕಡೆಗಳಲ್ಲಿ ಆಪ್ತರಿದ್ದಾರೆ. ಹೀಗಾಗಿ, ಅವರು ಯಾವ ಪಕ್ಷ ಸೇರುತ್ತಾರೆ ಅನ್ನೋದು ಸದ್ಯದ ಕುತೂಹಲವಾಗಿದೆ. ಸುದೀಪ್ ರಾಜಕೀಯಕ್ಕೆ ಬರಬಾರದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಸುದೀಪ್ ರಾಜಕೀಯಕ್ಕೆ ಬರಬೇಕು ಎಂದು ಆಸೆ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕಡೆಗಳಲ್ಲಿ ಆಪ್ತರಿದ್ದಾರೆ. ಆ ಎರಡು ಪಕ್ಷಕ್ಕಿಂತ ನನಗೆ ಮೂರನೇ ಪಕ್ಷ (ಜನರ ಪಕ್ಷ) ಮುಖ್ಯ’ ಎಂದಿದ್ದಾರೆ ನಟ ಸುದೀಪ್. ಅಂದರೆ ನನಗೆ ರಾಜಕೀಯಕ್ಕಿಂತ ಜನರೇ ಮುಖ್ಯ ಎಂದು ನಟ ಸುದೀಪ್ ಹೇಳಿದ್ದಾರೆ. ಈ ಮೂಲಕ ನಟ ಸುದೀಪ್ ಸದ್ಯಕ್ಕೆ ರಾಜಕೀಯಕ್ಕೆ ಎಂಟ್ರಿ ಕೊಡಲ್ಲ ಎಂಬುದಾಗಿ ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಲಿಕಾನ್ ಸಿಟಿಯ ಜನದಟ್ಟಣೆ ಬಗ್ಗೆ ನಮಗೆ ಚೆನ್ನಾಗಿ ಗೊತ್ತಿದೆ.

Thu Feb 16 , 2023
ಬೆಂಗಳೂರು, ಫೆಬ್ರವರಿ. 16: ಸಿಲಿಕಾನ್ ಸಿಟಿಯ ಜನದಟ್ಟಣೆ ಬಗ್ಗೆ ನಮಗೆ ಚೆನ್ನಾಗಿ ಗೊತ್ತಿದೆ. ರಾಜ್ಯ ಬಿಟ್ಟು ಹೊರ ರಾಜ್ಯದ ಸಾವಿರಾರು ಮಂದಿ ಬೆಂಗಳೂರಿನಲ್ಲಿ ಆಶ್ರಯ ಪಡೆದಿದ್ದಾರೆ. ಅದರಿಂದ ಜನದಟ್ಟಣೆ, ಸಂಚಾರ ದಟ್ಟಣೆಯಲ್ಲಿ ಭಾರೀ ಏರಿಕೆಯಾಗಿದೆ. ಈ ಬಗ್ಗೆ ವರದಿ ಬಹಿರಂಗವಾಗಿದ್ದು, ನಮ್ಮ ಹುಬ್ಬೇರಿಸುವಂತಿದೆ. ಡಚ್ ಲೊಕೇಶನ್ ಟೆಕ್ನಾಲಜಿ ಸ್ಪೆಷಲಿಸ್ಟ್ ಟಾಮ್‌ಟಾಮ್ ಪ್ರಕಟಿಸಿದ ಟ್ರಾಫಿಕ್ ಸೂಚ್ಯಂಕದ ಪ್ರಕಾರ, ನಗರ ಕೇಂದ್ರ (ಬಿಬಿಎಂಪಿ ಪ್ರದೇಶ) ವಿಭಾಗದಲ್ಲಿ 2022 ರಲ್ಲಿ ಬೆಂಗಳೂರು ವಿಶ್ವದ ಎರಡನೇ […]

Advertisement

Wordpress Social Share Plugin powered by Ultimatelysocial