ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಬಜೆಟ್​ನಲ್ಲಿ ಹಲವು ಯೋಜನೆ

ಬೆಂಗಳೂರು: ಶರ ವೇಗದಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಗಾಗಿ ಹಲವು ಯೋಜನೆಗಳನ್ನು ರಾಜ್ಯ ಬಜೆಟ್​ನಲ್ಲಿ  ಘೋಷಿಸಲಾಗಿದೆ.

ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ರೂ. ವೆಚ್ಚದ ಕಾಮಗಾರಿ ಪ್ರಕಟಿಸಲಾಗಿದೆ. ಹೈಡೆನ್ಸಿಟಿ ಕಾರಿಡಾರ್‌ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂಪಾಯಿ ಯೋಜನಾ ವೆಚ್ಚದಡಿ ತೆಗೆದುಕೊಳ್ಳಲಾಗಿದೆ. ಪ್ರವಾಹ ತಡೆಗೆ 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಬಜೆಟ್​ನಲ್ಲಿ ಒದಗಿಸಲಾಗಿದೆ.

ಟ್ರಾಫಿಕ್ ನಿರ್ವಹಣೆ

ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು, ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.  ನ ಬಳಕೆಯೊಂದಿಗೆ ಟ್ರಾಫಿಕ್‌ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಯೋಜನೆ ಪ್ರಕಟಿಸಲಾಗಿದೆ.

ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಕಾಮಗಾರಿ, ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ ರಸ್ತೆಯ ವರೆಗೆ ಇಂಟಿಗ್ರೆಟೆಡ್​ ಮೇಲುರಸ್ತೆ ನಿರ್ಮಿಸಿ ನೇರ ಸಂಪರ್ಕ ಒದಗಿಸುವ ಯೋಜನೆ ಪ್ರಕಟಿಸಲಾಗಿದೆ.

1,00೦ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿವೆ. ಇದೇ ವೇಳೆ ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳ ರಸ್ತೆಗಳ ದುರಸ್ತಿಗೂ 300 ಕೋಟಿ ರೂ. ಮೀಸಲಿಡಲಾಗಿದೆ.

ಮೆಟ್ರೋ ಯೋಜನೆ ಬಳಕೆ

ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್‌ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು 300 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತದೆ. ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ, 58.19 ಕಿ.ಮೀ.ಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ವೇಗದಲ್ಲಿ ಪ್ರಗತಿಯಲ್ಲಿವೆ.

ನಗರದ ಸಂಚಾರ ದಟ್ಟಣೆ ಕಡಿಮೆಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿ.ಮೀ. ಉದ್ದದ  ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ದೊರಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ದೆಹಲಿ-ಲೇಹ್ ವಿಮಾನಗಳ ಟಿಕೆಟ್​ ದರಗಳು ಈ ಫೆಬ್ರವರಿಯಲ್ಲಿ ಸಿಕ್ಕಾಪಟ್ಟೆ ಹೆಚ್ಚಾಗಿದೆ.

Fri Feb 17 , 2023
  ನವದೆಹಲಿ: ದೆಹಲಿ-ಲೇಹ್ ವಿಮಾನಗಳ ಟಿಕೆಟ್​ ದರಗಳು ಈ ಫೆಬ್ರವರಿಯಲ್ಲಿ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಸಾಮಾನ್ಯವಾಗಿ 3 ಸಾವಿರ ರೂಪಾಯಿ ಇದ್ದ ಟಿಕೆಟ್​ ದರವು ಈಗ 10 ಪಟ್ಟು ಹೆಚ್ಚಾಗಿದೆ. ಕಳೆದೆರಡು ದಿನಗಳಲ್ಲಿ ದೆಹಲಿಯಿಂದ ಲೇಹ್‌ಗೆ ವಿಮಾನ ದರವು ಗಗನಕ್ಕೇರಿದೆ ಮತ್ತು ಟಿಕೆಟ್ ದರ 30 ಸಾವಿರ ರೂಪಾಯಿ ಆಗಿದೆ. ಫೆಬ್ರವರಿ 18 ರಂದು ದೆಹಲಿಯಿಂದ ಲೇಹ್‌ಗೆ ಫ್ಲೈಟ್ ಟಿಕೆಟ್ 33 ಸಾವಿರ ರೂಪಾಯಿ ಆಗಿತ್ತು. ಇದಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ […]

Advertisement

Wordpress Social Share Plugin powered by Ultimatelysocial