ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ ಎಂದು ಹೇಳಲಾಗಿದೆ.

ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಲಿದೆ ಎಂದು ಹೇಳಲಾಗಿದೆ. ವಿದ್ಯುಚ್ಛಕ್ತಿ ನಿಗಮದ ಸಿಬ್ಬಂದಿ ವರ್ಗಕ್ಕೆ ಕೊಡಬೇಕಾಗಿರುವ ನಿವೃತ್ತಿ ವೇತನದ ಮೊತ್ತವನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಸರ್ಕಾರ ಮುಂದಾಗಿದ್ದು, ಹೀಗಾಗಿ ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ.

ಇದರ ಜೊತೆಗೆ ತಣ್ಣೀರು ಬಾವಿ ಮೊತ್ತಕ್ಕೆ ಸಂಬಂಧಿಸಿದಂತೆ 1,657 ಕೋಟಿ ರೂಪಾಯಿಗಳನ್ನು ತೆರಿಗೆ ಮೂಲಕ ಸಂಗ್ರಹಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಇದು ಕೂಡಾ ವಿದ್ಯುತ್ ದರ ಏರಿಕೆಗೆ ಕಾರಣವಾಗುತ್ತದೆ ಎಂದು ಹೇಳಲಾಗಿದೆ. ಒಂದೊಮ್ಮೆ ಸರ್ಕಾರದ ಈ ನಿರ್ಧಾರ ಅನುಷ್ಠಾನಕ್ಕೆ ಬಂದರೆ ಕೈಗಾರಿಕೆಗಳು ಮತ್ತು ಗೃಹೋಪಯೋಗಿ ವಿದ್ಯುತ್ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳಲಿದೆ.

ಮೂಲಗಳ ಪ್ರಕಾರ ಎಸ್ಕಾಂ ಗಳು ಸಲ್ಲಿಸಿರುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದರೆ ಪ್ರತಿ ತಿಂಗಳು 30 ಸಾವಿರ ರೂಪಾಯಿ ವಿದ್ಯುತ್ ಬಿಲ್ ಪಾವತಿಸುತ್ತಿರುವ ಕೈಗಾರಿಕೆಗಳು 60 ರಿಂದ 65 ಸಾವಿರ ರೂಪಾಯಿ ಪಾವತಿಸಬೇಕಾಗುತ್ತದೆ ಎಂದು ಹೇಳಲಾಗಿದೆ. ಹಾಗೆಯೇ 1500 ರೂಪಾಯಿ ವಿದ್ಯುತ್ ಬಿಲ್ ಪಾವತಿಸುತ್ತಿರುವ ಗೃಹ ಬಳಕೆ ಗ್ರಾಹಕರು 600 ರೂಪಾಯಿ ಸ್ಥಿರ ಶುಲ್ಕ ಸೇರಿ 2,100 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಶಕಗಳ ಜಲ ಸಂಕಟಕ್ಕೆ ಮುಕ್ತಿ.

Sun Jan 15 , 2023
    ಹುಬ್ಬಳ್ಳಿ: ‘ನಮ್ಮೂರಿನ ನೀರಿನ ಬವಣೆ ಕೊನೆಗೂ ನೀಗಿತು. ಯಾವಾಗ ಕೆರೆ ನಿರ್ಮಾಣವಾಗುತ್ತೊ, ನಿತ್ಯ ನೀರು ಬರುತ್ತೊ, ಬಿಂದಿಗೆಗಳಲ್ಲಿ ದೂರದಿಂದ ನೀರು ತರುವುದು ತಪ್ಪುತ್ತದೊ ಎಂಬ ಪ್ರಾರ್ಥನೆ ಆ ದೇವರಿಗೆ ಮುಟ್ಟಿದೆ…’ – ಅಣ್ಣಿಗೇರಿ ಪಟ್ಟಣಕ್ಕೆ ದಿನದ 24X7 ನೀರು ಪೂರೈಸುವುದಕ್ಕಾಗಿ ತಾಲ್ಲೂಕಿನ ಬಸಾಪುರದ ಬಳಿ ನಿರ್ಮಿಸಿರುವ ನೂತನ ಕೆರೆಯ ಲೋಕಾರ್ಪಣೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಥಳೀಯರ ಮಾತುಗಳಿವು. ‘ಮೂರು ದಶಕಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದ […]

Advertisement

Wordpress Social Share Plugin powered by Ultimatelysocial