ರಾಜ್ಯದ ಈ ಸರ್ಕಾರಿ ನೌಕರರಿಗಿಲ್ಲ `ಆರೋಗ್ಯ ಸಂಜೀವಿನಿ ಯೋಜನೆ’ ಭಾಗ್ಯ!

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ, ಪರಿಷ್ಕೃತ ಆದೇಶವನ್ನು ಹೊರಡಿಸಿದೆ. ಆದರೆ ಹೈಕೋರ್ಟ್, ವಿಧಾನ ಮಂಡಲದ ನೌಕರರು ಸೇರಿದಂತೆ ಹಲವು ಇಲಾಖೆಯ ನೌಕರರಿಗೆ ಈ ಯೋಜನೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು  ಅನುಷ್ಠಾನಗೊಳಿಸುವ ಸಂಬಂಧ ಪರಿಷ್ಕೃತ ಆದೇಶವನ್ನು ಹೊರಡಿಸಿದ್ದಾರೆ.

ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963 ರಡಿ ವೈದ್ಯಕೀಯ ಹಾಜರಾತಿಗೆ ಅರ್ಹರಿರುವ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು,

ಈ ಯೋಜನೆಗೆ ಒಳಪಡದ ನೌಕರ ವರ್ಗ:

ರಾಜ್ಯ ಉಚ್ಚ ನ್ಯಾಯಾಲಯದ ನೌಕರರು

ರಾಜ್ಯ ವಿಧಾನ ಮಂಡಲದ ನೌಕರರು

‘ಆರೋಗ್ಯ ಭಾಗ್ಯ’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಪೊಲೀಸ್‌ ಇಲಾಖೆಯ ಸಿಬ್ಬಂದಿ.

ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ವೈದ್ಯಕೀಯ ಹಾಜರಾತಿ ನಿಯಮಗಳು, 2009 ರಡಿ ವೈದ್ಯಕೀಯ ಸೌಲಭ್ಯ ಪಡೆಯುತ್ತಿರುವ ನ್ಯಾಯಾಂಗ ಅಧಿಕಾರಿಗಳು, ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು.

ಸಾರ್ವಜನಿಕ ಸ್ಥಾಪನೆಗಳು ಅಂದರೆ ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ನಿಗಮ/ ಮಂಡಳಿಗಳು, ಸಹಕಾರ ಸಂಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಇತರೆ ಸಂಸ್ಥೆಗಳು,

ಸರ್ಕಾರ ಹೊರಡಿಸಿರುವಂತ ಆದೇಶದಲ್ಲಿ ಸಂಜೀವಿನಿ ಯೋಜನೆಯಡಿ ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲತಾಯಿನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ ಕನಿಷ್ಠ ಕುಟುಂಬ ಪಿಂಚಣಿ( ರೂ.8,500) ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ ಯೋಜನೆಗೆ ಅರ್ಹರು ಎಂದಿದೆ.

ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು. ಇವರಲ್ಲಿ ದತ್ತು ಪಡೆ ಮಕ್ಕಳು ಮತ್ತು ಮಲ ಮಕ್ಕಳನ್ನೊಳಗೊಂಡಂತೆ ಕುಟುಂಬದ ಸದಸ್ಯರನ್ನು ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

Sun Mar 12 , 2023
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ ಮೊದಲ ಎಕ್ಸ್ ಪ್ರೆಸ್ ವೇ ಉದ್ಘಾಟಿಸಲಿದ್ದಾರೆ. ಧಾರವಾಡದಲ್ಲಿ ದೇಶದ ಪ್ರಥಮ ಪರಿಸರ ಸ್ನೇಹಿ ಐಐಟಿ ಕ್ಯಾಂಪಸ್ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರಂ ಕೂಡ ಅನಾವರಣಗೊಳಿಸಲಿದ್ದಾರೆ. ಬೆಳಗ್ಗೆ 11:25ಕ್ಕೆ ಮಂಡ್ಯಕ್ಕೆ ಆಗಮಿಸಲಿರುವ ಅವರು […]

Advertisement

Wordpress Social Share Plugin powered by Ultimatelysocial