ಏಪ್ರಿಲ್‌ ಒಂದರಂದು ವಿಭಿನ್ನ ಕಥೆಯ “ತ್ರಿಕೋನ” ಬಿಡುಗಡೆ.

ಕೊರೋನ ಹಾವಳಿ ಕಡಿಮೆಯಾದ ಮೇಲೆ ಕನ್ನಡ ಚಿತ್ರರಂಗ ಮೊದಲಿನಂತೆ ತನ್ನ ವೈಭವಕ್ಕೆ ಮರಳುತ್ತಿದೆ. ಸಾಲುಸಾಲು ಚಿತ್ರಗಳು ತೆರೆಗೆ ಬರುತ್ತಿದೆ.
ಆ ಪೈಕಿ ವಿಭಿನ್ನ ಕಥೆಯ “ತ್ರಿಕೋನ” ಸಹ ಏಪ್ರಿಲ್ ಒಂದರಂದು ಬಿಡುಗಡೆಯಾಗಲಿದೆ.

ಈ ವಿಷಯ ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ನಿರ್ಮಾಣ ಮಾಡಿರುವ ರಾಜಶೇಖರ್ ಅವರೆ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. 143 ಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಕಾಂತ್ “ತ್ರಿಕೋನ” ವನ್ನು ನಿರ್ದೇಶಿಸಿದ್ದಾರೆ.

ಎಲ್ಲಾ ಮನುಷ್ಯನಲ್ಲೂ ಮನಸ್ಸಿದೆ. ಆ ಮನಸ್ಸನ್ನು ನಾವು ಕ್ರೀಡಾ ಮೈದಾನ ಎನ್ನಬಹುದು. ಏಕೆಂದರೆ ಮನಸ್ಸಿನಲ್ಲಿ ಮೋಸ, ದ್ವೇಷ, ಅಸೂಯೆ, ಸೇಡು, ದುರಾಸೆ ಎಂಬ ಕ್ರೀಡೆಗಳು ನಡೆಯುತ್ತಿರುತ್ತದೆ. ಇದರಲ್ಲಿ ಅಹಂ, ಶಕ್ತಿ ಹಾಗೂ ತಾಳ್ಮೆ ಎಂಬ ಸ್ಪರ್ಧಿಗಳು ಇದ್ದಾರೆ. ಈ ಮೂವರಲ್ಲಿ ಗೆಲವು ಯಾರಿಗೆ? ಎಂದು ನೋಡಲು ನೀವು ನಮ್ಮ ಸಿನಿಮಾ ನೋಡಬೇಕು ಎಂದರು ನಿರ್ದೇಶಕರು.ಚಿತ್ರದಲ್ಲಿ ನಟಿಸಿರುವ ರಾಜವೀರ್ ಹಾಗೂ ಮಾರುತೇಶ್ ಪಾತ್ರ ಪರಿಚಯ ಮಾಡಿಕೊಟ್ಟರು.ಪೊಲೀಸ್ ಪ್ರಕಿ ಪ್ರೊಡಕ್ಷನ್ ಲಾಂಛನದಲ್ಲಿ ರಾಜಶೇಖರ್ ನಿರ್ಮಿಸಿರುವ ಈ ಚಿತ್ರವನ್ನು ಚಂದ್ರಕಾಂತ್ ನಿರ್ದೇಶಿಸಿದ್ದಾರೆ. ಸುರೇಂದ್ರನಾಥ್ ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ವಿನ್ನಕೋಟ ಛಾಯಾಗ್ರಹಣ ಈ ಚಿತ್ರಕ್ಕಿದೆ.ಸುರೇಶ್ ಹೆಬ್ಳೀಕರ್, ಲಕ್ಷ್ಮೀ, ಅಚ್ಯುತಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಾರುತೇಶ್, ರಾಜವೀರ್, ಬೇಬಿ ಅದಿತಿ, ಬೇಬಿ ಹಾಸಿನಿ, ಮನದೀಪ್ ರಾಯ್, ರಾಕ್ ಲೈನ್ ಸುಧಾಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಲ್ಪೆಯಲ್ಲಿ "ಆಪರೇಶನ್ D" ಹಾಡು.

Wed Mar 9 , 2022
  ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ ‘ಆಪರೇಶನ್ D” ಚಿತ್ರಕ್ಕಾಗಿ ವೇದಿಕ ರಚಿಸಿರುವ‌ ಹಾಡೊಂದರ ಚಿತ್ರೀಕರಣ ಉಡುಪಿ ಬಳಿಯ ಮಲ್ಪೆಯ ಕಡಲ ಕಿನಾರೆ ಯಲ್ಲಿ ನಡೆದಿದೆ. ವಿನೋದ್ ದೇವ್ ಹಾಗೂ ಸ್ನೇಹ ಭಟ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಅನಿರುದ್ಧ್ ಶಾಸ್ತ್ರಿ ಹಾಗೂ ವೇದಿಕ ಈ ಹಾಡನ್ನು ಸುಶ್ರಾವ್ಯವಾಗಿ ಹಾಡಿದ್ದಾರೆ. ಬರೀ ಹಾಡಿನ ಚಿತ್ರೀಕರಣವಲ್ಲದೆ, ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಸಹ ಉಡುಪಿ […]

Advertisement

Wordpress Social Share Plugin powered by Ultimatelysocial