ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ

 

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬಂಗಾರದ ಕಡಗವನ್ನೂ ಮುಖ್ಯಮಂತ್ರಿಗಳು ನೀಡಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದಲ್ಲಿ ಸರ್ಕಾರದಿಂದಲೇ ಮನೆ ನಿರ್ಮಾಣ ಮಾಡಿ ಸಾಲು ಮರದ ತಿಮ್ಮಕ್ಕ ಅವರಿಗೆ ಕೊಡುಗೆ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮಾತ್ರವಲ್ಲದೇ, ರಾಜ್ಯದ ಎಲ್ಲೇ ಆಗಲಿ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರದಿಂದಲೇ ಖರ್ಚು ಭರಿಸಲಾಗುವುದು. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲ್ಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು ಎಂದು ಸಿಎಂ ಹೇಳಿದರು.

ಬೇಲೂರು ಶಾಸಕ ಲಿಂಗೇಶ್ ಮಾತನಾಡಿ, ಸಾಲುಮರದ ತಿಮ್ಮಕ್ಕ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ‌ನಿರ್ಮಿಸಲು ಅನುದಾನ ಹಾಗೂ ಅವರ ‌ಗ್ರಾಮ ಬಳ್ಳೂರು ಅಭಿವೃದ್ಧಿಗೆ 2 ಕೋಟಿ‌ ಅನುದಾನ ನೀಡುವಂತೆ ಮನವಿ ಮಾಡಿದರು.

ಇವತ್ತು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಜನ್ಮದಿನಾಚರಣೆಗೆ ನಿಜಕ್ಕೂ ಅರ್ಥಪೂರ್ಣವಿದೆ. ನಾವೆಲ್ಲ ಹುಟ್ಟಿದಾಗ ಬಹಳ ಮುಗ್ಧತೆಯಿಂದ ಇರುತ್ತಿದ್ದೆವು. ದೊಡ್ಡವರಾದ ಮೇಲೂ ಮುಗ್ಧತೆ ಉಳಿಸಿಕೊಳ್ಳುವುದು ಕಷ್ಟ. ಆದರೆ ಸಾಲುಮರದ ತಿಮ್ಮಕ್ಕ ಅಜ್ಜಿಯ ಮೊಗದಲ್ಲಿ ಮಗುವಿನ ಮುಗ್ಧತೆ ಇದೆ ಎಂದು ಸಿಎಂ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

Thu Jun 30 , 2022
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ತಗ್ಗುಪ್ರದೇಶಗಳು ಮಿನಿ ಕೆರೆಯಂತಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ತರಗತಿಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾದಲ್ಲಿ ಅಂತಹ ಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಹಾಗೂ ತಾಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ […]

Advertisement

Wordpress Social Share Plugin powered by Ultimatelysocial