ತಿರುಪತಿ ವೆಂಕಟೇಶ್ವರ ದೇಗುಲದ ಗರ್ಭಗುಡಿ 6-8 ತಿಂಗಳು ಕ್ಲೋಸ್‌

 

 

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು 2023 ರಲ್ಲಿ ಆರರಿಂದ ಎಂಟು ತಿಂಗಳವರೆಗೆ ಮುಚ್ಚುವ ಸಾಧ್ಯತೆಯಿದೆ, ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರುಪತಿ ತಿಮ್ಮಪ್ಪನ ದೇಗುಲದ ಆನಂದ ನಿಲಯಂನ ಚಿನ್ನದ ಲೇಪನವನ್ನು ಬದಲಾಯಿಸಲು ಯೋಜಿಸಿದೆ.ಆನಂದ ನಿಲಯಂ ಅಂದರೆ ಗರ್ಭಗುಡಿಯ ಮೇಲಿರುವ ಮೂರು ಅಂತಸ್ತಿನ “ವಿಮಾನ” (ಗುಮ್ಮಟದ ಆಕಾರದ ಗೋಪುರ).ಹಾಗಾದರೆ, ಈ ಸಮಯದಲ್ಲಿ ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುವುದು ಹೇಗೆ? ಎಂಬ ಪ್ರಶ್ನೆ ಸಹಜ. ಇದಕ್ಕಾಗಿ, ಮುಖ್ಯ ದೇವಾಲಯದ ಪಕ್ಕದಲ್ಲಿ ತಾತ್ಕಾಲಿಕವಾಗಿ ತಿರುಪತಿ ವೆಂಕಟೇಶ್ವರ ದೇವರ ತದ್ರೂಪಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲು ಯೋಜಿಸಲಾಗಿದೆ ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.” ಡಿಸೆಂಬರ್ ಮೊದಲ ವಾರದಲ್ಲಿ ಟ್ರಸ್ಟ್‌ನ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. “ಆಗಮ ಶಾಸ್ತ್ರ” ಸಲಹೆಗಾರರು (ಆಗಮ ಶಾಸ್ತ್ರವು ದೇವಾಲಯದ ನಿರ್ಮಾಣಗಳು ಮತ್ತು ಆಚರಣೆಗಳ ನಡವಳಿಕೆಯ ಬಗ್ಗೆ ವ್ಯವಹರಿಸುವ ಪುರಾತನ ಗ್ರಂಥವಾಗಿದೆ), ಪುರೋಹಿತರು, ಸಿವಿಲ್ ಎಂಜಿನಿಯರ್‌ಗಳು ಮತ್ತು ಇತರ ತಜ್ಞರೊಂದಿಗೆ ಸುದೀರ್ಘ ಚರ್ಚೆ ಮತ್ತು ಸಮಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆʼʼ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.ಇದಕ್ಕೂ ಮುನ್ನ 1958 ರಲ್ಲಿ ಆನಂದ ನಿಲಯಕ್ಕೆ ಚಿನ್ನದ ಲೇಪನ ಮಾಡಲಾಗಿದೆ. ಆ ಸಮಯದಲ್ಲಿ ಚಿನ್ನದ ಲೇಪನ ಮಾಡಲು ಸುಮಾರು ಎಂಟು ವರ್ಷ ಬೇಕಾಗಿತ್ತು. ಕ್ರಿ.ಶ 839 ರಲ್ಲಿ ಪಲ್ಲವ ರಾಜ ವಿಜಯ ದಂತಿವರ್ಮನ್ ಅವರು ಮೊದಲ ಬಾರಿಗೆ ಚಿನ್ನದ ಲೇಪನವನ್ನು ಮಾಡಿದ್ದರು. ಲಭ್ಯವಿರುವ ದಾಖಲೆಗಳ ಪ್ರಕಾರ, ಅಂದಿನಿಂದ, 1958 ರ ಪ್ರಯತ್ನವನ್ನು ಒಳಗೊಂಡಂತೆ, ಇಲ್ಲಿನ ಗೋಪುರದ ಚಿನ್ನದ ಲೇಪನವನ್ನು ಏಳು ಬಾರಿ ಬದಲಾಯಿಸಲಾಗಿದೆ ಅಥವಾ ಮಾರ್ಪಡಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಪಾಕ್‌, ಚೀನಾ ಯುದ್ಧಕ್ಕೆ ಸಂಬಂಧಿಸಿದ ದಾಖಲೆಗಳು ಪತ್ರಾಗಾರದಲ್ಲಿ ಇಲ್ಲ

Mon Dec 26 , 2022
    ಭಾರತ ರಾಷ್ಟ್ರೀಯ ಪತ್ರಾಗಾರ (ಎನ್‌ಎಐ) ಬಳಿ 1962, 1965 ಹಾಗೂ 1971ರ ಯುದ್ಧಗಳಿಗೆ ಹಾಗೂ ಹಸಿರುಕ್ರಾಂತಿಗೆ ಸಂಬಂಧಿಸಿದ ದಾಖಲೆಗಳೇ ಇಲ್ಲ ಎಂದು ಎನ್‌ಎಐ ಪ್ರಧಾನ ನಿರ್ದೇಶಕ ಚಂದನ್‌ ಸಿನ್ಹಾ ಶುಕ್ರವಾರ ಹೇಳಿದ್ದಾರೆ.ಈ ಮೂರು ಯುದ್ಧಗಳು ಹಾಗೂ ಹಸಿರು ಕ್ರಾಂತಿ ಕುರಿತ ದಾಖಲೆಗಳನ್ನು ಸಂಬಂಧಪಟ್ಟ ಸಚಿವಾಲಯಗಳು ಮತ್ತು ಇಲಾಖೆಗಳು ಎನ್‌ಎಐನೊಂದಿಗೆ ಹಂಚಿಕೊಳ್ಳದಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.’ಸುಶಾಸನ ದಿನ’ ಅಂಗವಾಗಿ ಆಡಳಿತಾತ್ಮಾಕ ಸುಧಾರಣೆಗಳು ಹಾಗೂ ಸಾರ್ವಜನಿಕ ಕುಂದುಕೊರತೆಗಳ ಇಲಾಖೆಯು […]

Advertisement

Wordpress Social Share Plugin powered by Ultimatelysocial