ಇದು ನೆಹರೂ ಭಾರತವಲ್ಲ, ಬಿಜೆಪಿ ತಿರುಗೇಟು!

ವದೆಹಲಿ(ಡಿ.17): ಅರುಣಾಚಲ ಪ್ರದೇಶದ (Arunachal Pradesh) ತವಾಂಗ್‌ನಲ್ಲಿ (Tawang) ಭಾರತ ಮತ್ತು ಚೀನಾ ಸೈನಿಕರ (China Army)ನಡುವಿನ ಘರ್ಷಣೆ ಬಳಿಕ ದೇಶದಲ್ಲಿ ಕೋಲಾಹಲ ಎದ್ದಿದೆ. ಮೊನ್ನೆಯಷ್ಟೇ ಸಂಸತ್ತಿನಲ್ಲಿ ಈ ವಿಷಯವನ್ನು ಏರುದನಿಯಲ್ಲಿ ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುತ್ತಿಗೆ ಹಾಕಿದ್ದವು.

ಇದೀಗ ಶುಕ್ರವಾರ (ಡಿಸೆಂಬರ್ 16) ಈ ವಿಚಾರವಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿಕೆ ಬಳಿಕ ಗದ್ದಲ ಎದ್ದಿದೆ. ಚೀನಾದೊಂದಿಗಿನ ಯುದ್ಧದ ಬೆದರಿಕೆಯನ್ನು ಭಾರತ ನಿರ್ಲಕ್ಷಿಸುತ್ತಿದೆ ಎಂದು ರಾಹುಲ್ ಗಾಂಧಿ (Rahul gandhi) ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಅವರು ಸೇನೆಯ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದ್ದಾರೆ ಎಂದು ಆರೋಪಿಸಿದ್ದು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹೆಸರನ್ನೂ ಪ್ರಸ್ತಾಪಿಸಿದೆ. ವಿಷಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳು ಹೀಗಿವೆ.
1. ಭಾರತದ ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ ಮತ್ತು ಭಾರತ ಸರ್ಕಾರ ನಿದ್ರಿಸುತ್ತಿದೆ. ಅಪಾಯವನ್ನು ನಿರ್ಲಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ. ಚೀನಾ 2,000 ಚದರ ಕಿಲೋಮೀಟರ್ ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದೆ, 20 ಭಾರತೀಯ ಸೈನಿಕರನ್ನು ಕೊಂದಿದೆ ಮತ್ತು ಅರುಣಾಚಲ ಪ್ರದೇಶದಲ್ಲಿ ನಮ್ಮ ಯೋಧರನ್ನು ಥಳಿಸುತ್ತಿದೆ ಎಂದೂ ಕಾಂಗ್ರೆಸ್ ಸಂಸದ ಆರೋಪಿಸಿದ್ದಾರೆ.
2. ಭಾರತ್ ಜೋಡೋ ಯಾತ್ರೆ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಜೈಪುರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಚೀನಾದ ಬೆದರಿಕೆ ನನಗೆ ಸ್ಪಷ್ಟವಾಗಿದೆ. ಎರಡು-ಮೂರು ವರ್ಷಗಳಿಂದ ಇದನ್ನೇ ಹೇಳುತ್ತಿದ್ದೇನೆ, ಇದು ಸ್ಪಷ್ಟವಾಗಿದೆ ಮತ್ತು ಕೇಂದ್ರ ಸರ್ಕಾರ ಅದನ್ನು ಮರೆಮಾಡಲು ಪ್ರಯತ್ನಿಸುತ್ತಿದೆ. ಸರ್ಕಾರ ಅದನ್ನು ನಿರ್ಲಕ್ಷಿಸುತ್ತಿದೆ, ಆದರೆ ಆ ಅಪಾಯವನ್ನು ಮರೆಮಾಡಲು ಅಥವಾ ನಿರ್ಲಕ್ಷಿಸಲು ಸಾಧ್ಯವಿಲ್ಲ.Indian Army: ರಫೇಲ್, ಸುಖೋಯ್ ಚಿನೂಕ್: ಚೀನಾ ಗಡಿಯಲ್ಲಿ IAF ಯುದ್ಧ ವಿಮಾನಗಳ ಗುಡುಗು!
3. ಭಾರತದ ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಸಂಪೂರ್ಣ ಆಕ್ರಮಣಕಾರಿ ಸಿದ್ಧತೆ ಲಡಾಖ್ ಕಡೆಗೆ ಮತ್ತು ಅರುಣಾಚಲದ ಕಡೆಗೆ ನಡೆಯುತ್ತಿದೆ. ಭಾರತ ಸರ್ಕಾರ ನಿದ್ರಿಸುತ್ತಿದೆ. ಸರ್ಕಾರವು ಚೀನಾ ಸಂಬಂಧಿತ ವಿಷಯಗಳನ್ನು ಮರೆಮಾಡಲು ಪ್ರಯತ್ನಿಸುತ್ತಿದೆ, ಆದರೆ ಅದನ್ನು ಮರೆಮಾಡಲು ಸಾಧ್ಯವಿಲ್ಲ. ನಮ್ಮ ವಿದೇಶಾಂಗ ಸಚಿವರು ತಮ್ಮ ತಿಳುವಳಿಕೆಯನ್ನು ಆಳಗೊಳಿಸಬೇಕು.
4. ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ಅವರ ಅಜ್ಜ ಮಲಗಿದ್ದರು. ಅವರು ನಿದ್ದೆ ಮಾಡುವಾಗ ಭಾರತದ 37 ಸಾವಿರ ಚದರ ಕಿ.ಮೀ. ಹಳ್ಳಿಯನ್ನೇ ನೀಡಿದ್ದರು. ಆ ನಂತರ ರಾಹುಲ್ ಗಾಂಧಿ ಚೀನಾದೊಂದಿಗೆ ಸ್ನೇಹ ಬೆಳೆಸಬೇಕು ಎಂದು ಭಾವಿಸಿದ್ದರು, ಈಗ ಸ್ನೇಹವು ಅದೆಷ್ಟು ಆಳವಾಗಿದೆ ಎಂದರೆ, ಚೀನಾ ಏನು ಮಾಡಲಿದೆ ಎಂಬುದು ಅವರಿಗೆ ತಿಳಿದಿದೆ. ರಾಜೀವ್ ಗಾಂಧಿ ಫೌಂಡೇಶನ್ ಚೀನಾದ ಕಮ್ಯುನಿಸ್ಟ್ ಪಕ್ಷದಿಂದ 1.35 ಕೋಟಿ ರೂ. ದೇಣಿಗೆ ಸ್ವೀಕರಿಸಿತ್ತು. ಆದರೆ ಈಗ ಮೊದಲಿನಂತಿಲ್ಲ, ನೆಹರೂ ಭಾರತ ಅಲ್ಲ ಮೋದಿ ಭಾರತ ದೇಶವನ್ನು ರಕ್ಷಿಸಲು ಸೇನೆಗೆ ಮುಕ್ತ ಹಸ್ತವಿದೆ. ನಮ್ಮ ಸೈನ್ಯವು ಆಕ್ರಮಣ ನಡೆಸಿ ಕೊಲ್ಲುತ್ತದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ವರ್ಷದಲಿ ʻಸ್ವಿಗ್ಗಿʼಯಲ್ಲಿ ಅತಿ ಹೆಚ್ಚು ಆರ್ಡರ್ ಮಾಡಲಾದ ʻಭಕ್ಷ್ಯʼ ಯಾವ್ದುಗೋತನಿಂಗೆ!

Sat Dec 17 , 2022
ಬೆಂಗಳೂರು: ಈ ವರ್ಷ ಸ್ವಿಗ್ಗಿಯಲ್ಲಿ ಅತಿದೊಡ್ಡ ಸಿಂಗಲ್ ಆರ್ಡರ್ ಬೆಂಗಳೂರಿನಿಂದ ಬಂದಿದೆ. ಅದರ ಇತ್ತೀಚಿನ ಟ್ರೆಂಡ್ ವರದಿಯಲ್ಲಿ, ಆನ್‌ಲೈನ್ ಫುಡ್ ಆರ್ಡರ್ ಮತ್ತು ಡೆಲಿವರಿ ಪ್ಲಾಟ್‌ಫಾರ್ಮ್ ತನ್ನ ಅಗ್ರ ಗ್ರಾಹಕರು ಐಟಿ ಸಿಟಿಯಿಂದ ಅಕ್ಟೋಬರ್‌ನಲ್ಲಿ ದೀಪಾವಳಿಯ ಸಮಯದಲ್ಲಿ ರೂ 75378 ಮೌಲ್ಯದ ಒಂದೇ ಆರ್ಡರ್ ಮಾಡಿದ್ದಾರೆ ಎಂದು ಹೇಳಿದೆ.ಪುಣೆಯ ಮತ್ತೊಬ್ಬ ಗ್ರಾಹಕರು ಹಲವಾರು ಯೂನಿಟ್ ಬರ್ಗರ್ ಮತ್ತು ಫ್ರೈಗಳನ್ನು ಖರೀದಿಸಲು 71229 ರೂ. ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ.’ನಮ್ಮ ಹಸಿದ ಗ್ರಾಹಕರು […]

Advertisement

Wordpress Social Share Plugin powered by Ultimatelysocial