ಸಾಲದ ಹೊರೆಗೆ ಒಂದೇ ಕುಟುಂಬದ ಮೂವರು ಪ್ರಾಣ ತ್ಯಾಗ;

ಹಾವೇರಿ : ತರಕಾರಿ ಮಾರಾಟ ಮಾಡಿ ಮಗಳನ್ನು ಸಾಕಿ ವಿದ್ಯಾಭ್ಯಾಸ ನೀಡಿ ಮದುವೆ ಮಾಡಿಕೊಟ್ಟಿದ್ದ ಕುಟುಂಬ ಇದೀಗ ಮಗಳ ಜತೆಗೆ ಆತ್ಮಹತ್ಯೆ ಮಾಡಿಕೊಂಡಿದೆ. ಒಂದೇ ಕುಟುಂಬದ ಮೂವರು ಸದಸ್ಯರ ಆತ್ಮಹತ್ಯೆಗೆ ಕಾರಣ ಹೊಸ ಮನೆ, ಮಗಳ ಮದುವೆ ಎನ್ನಲಾಗಿದೆ.ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಮೃತರು. ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾವಿಗೆ ಮೂಲ ಕಾರಣ ಹೊಸ ಮನೆ ಹಾಗೂ ಮಗಳ ಮದುವೆ ಎನ್ನಲಾಗುತ್ತಿದೆ. ವಸತಿ ನಿರ್ಮಾಣಕ್ಕಾಗಿ ಹಾಗೂ ಮುದ್ದಾಗಿ ಬೆಳಿಸಿದ ಮಗಳ ಮದುವೆಗೆಂದು ಸುಮಾರು 25 ಲಕ್ಷ ರೂಪಾಯಿಗೂ ಹೆಚ್ಚು ಹಣ ಸಾಲಮಾಡಿ ತಂದೆ ಹನುಮಂತಗೌಡ ಪಾಟೀಲ್ ಅದ್ದೂರಿಯಾಗಿ ಮಗಳ ಮದುವೆ ಮಾಡಿದ್ದರಂತೆ. ಮನೆ ನಿರ್ಮಾಣಕ್ಕಾಗಿ ಸಾಲ, ಮಗಳ ವಿದ್ಯಾಭ್ಯಾಸಕ್ಕಾಗಿ ಹಾಗೂ ಅವಳ ಮದುವೆಗಾಗಿ ಸಾಲ ಮಾಡಿಕೊಂಡು ಹೈರಾಣಾಗಿದ್ದ ಕುಟುಂಬ ಕಳೆದ ಒಂದು ತಿಂಗಳಿನಿಂದ ಆತ್ಮಹತ್ಯೆ ಮಾಡಿಕೊಳ್ಳಲು ಹಲವು ಭಾರಿ ಯತ್ನಿಸಿದ್ದರು ಎನ್ನಲಾಗಿದೆ. ನಿನ್ನೆ ಮಧ್ಯೆ ರಾತ್ರಿ ಸೂಸೈಡ್ ಮಾಡಿಕೊಂಡಿದ್ದ ಅಪ್ಪ – ಅಮ್ಮನನ್ನು ನೋಡಿದ ಮಗಳು ಕೂಡಾ ನನ್ನಿಂದಲೇ ಇದೆಲ್ಲಾ ಆಗಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾಳೆಂದು ಹೇಳಲಾಗುತ್ತಿದೆಈ ಕುಟುಂಬದ ಸಾವಿಗೆ ಮೂಲ ಕಾರಣ ಸಾಲ. ಹನುಮಂತೆಗೌಡ ಪಿತ್ರಾರ್ಜಿತವಾಗಿ ಬಂದಿದ್ದ ಒಂದು ಏಕರೆ ಜಮಿನನ್ನು ಮಾರಾಟ ಮಾಡಿ ಕೃಷಿ ಜತೆಗೆ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ದೊಡ್ಡ ಪ್ರಮಾಣದಲ್ಲಿ ತರಕಾರಿ ವ್ಯಾಪಾರ ಮಾಡಲು ಹೊಸದಾಗಿ ಟಾಟಾ ಎಸಿ ತೊಗೊಂಡಿದ್ದರು. ಆದರೆ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದ ಹಿನ್ನಲೆ ಕುಟುಂಬಸ್ಥರು ನೇಣಿಗೆ ಶರಣಾಗಿದ್ದಾರೆಂದು ಮೃತರ ಸಂಬಂಧಿಕರು ಹೇಳುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾನ್ ಕೀಟ್ಸ್ ಎರಡನೆಯ ಪೀಳಿಗೆಯ ಇಂಗ್ಲಿಷ್ ರೊಮಾಂಟಿಕ್ ಕವಿ.

Thu Feb 23 , 2023
  ಜಾನ್ ಕೀಟ್ಸ್ ಎರಡನೆಯ ಪೀಳಿಗೆಯ ಇಂಗ್ಲಿಷ್ ರೊಮಾಂಟಿಕ್ ಕವಿಗಳಲ್ಲಿ ಪ್ರಮುಖನಾದವ. ಈತ ಈ ಲೋಕವನ್ನಗಲಿದ್ದು 1821ರ ಫೆಬ್ರವರಿ 23ರಂದು.ಜಾನ್ ಕೀಟ್ಸ್ 1795 ಅಕ್ಟೋಬರ್ 31ರಂದು ಲಂಡನ್ನಿನಲ್ಲಿ ಜನಿಸಿದ. ತಂದೆ ಥಾಮಸ್ ಕೀಟ್ಸ್ ಹೋಟೆಲೊಂದರ ಕುದುರೆ ಲಾಯದ ಮುಖ್ಯ ಕಾಸ್ತಾರನಾಗಿದ್ದು, ತನ್ನ ದಣಿಯ ಮಗಳನ್ನು ಮದುವೆಯಾಗಿ, ಪ್ರಯಾಣಿಕರ ಕುದುರೆಗಳನ್ನು ನೋಡಿಕೊಳ್ಳುವ ಮತ್ತು ಬೇಕೆಂದವರಿಗೆ ಕುದುರೆಗಳನ್ನು ಬಾಡಿಗೆಗೆ ಕೊಡುವ ವ್ಯವಹಾರ ಮಾಡುತ್ತಿದ್ದ. ಕಾಸ್ತಾರ ವೃತ್ತಿಯವನಾದರೂ ಥಾಮಸ್ ಕೀಟ್ಸ್, ವಿದ್ಯೆ ಸಭ್ಯತೆ ಸಂಸ್ಕೃತಿಗಳ […]

Advertisement

Wordpress Social Share Plugin powered by Ultimatelysocial