ಎನ್ ಐ ಎಯಿಂದ ಮೂವರು ಶಂಕಿತ ಉಗ್ರರ ಬಂಧನ.

ಹೈದರಾಬಾದ್: ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಹೈದರಾಬಾದ್ ನಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ಅಬ್ದುಲ್ ಜಾಹೀದ್ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿರುವ ಎನ್ ಐ ಎ ಅಧಿಕಾರಿಗಳು, ಬಂಧಿತರಿಂದ ಹ್ಯಾಂಡ್ ಗ್ರೆನೇಡ್, ಮೊಬೈಲ್ ಹಾಗೂ 3ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಂಕಿತ ಉಗ್ರರು ಹೈದರಾಬಾದ್ ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಬಂಧಿತರ ವಿರುದ್ಧ ಯುಎಪಿಎ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಲಾಗಿದೆ.

ಬಂಧಿತ ಅಬ್ದುಲ್ ಜಾಹೇದ್ 2005ರಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ. ಆದರೆ ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ 2017ರಲ್ಲಿ ಬಿಡುಗಡೆಯಾಗಿದ್ದ. ಈಗ ಮತ್ತೆ ತನ್ನ ಗ್ಯಾಂಗ್ ನೊಂದಿಗೆ ಜಾಹೇದ್ ಮತ್ತೆ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎರಡು ಅವಧಿಯಿಂದ ಅಧಿಕಾರದಲ್ಲಿರುವ ಭಾರತೀಯ ಜನತಾ ಪಾರ್ಟಿಬಿಜೆಪಿ.

Sun Feb 5 , 2023
ನವದೆಹಲಿ:ಎರಡು ಅವಧಿಯಿಂದ ಅಧಿಕಾರದಲ್ಲಿರುವ ಭಾರತೀಯ ಜನತಾ ಪಾರ್ಟಿ(BJP), 2024ರ ಚುನಾವಣೆಯಲ್ಲಿ 400 ಲೋಕಸಭೆ ಕ್ಷೆತ್ರಗಳನ್ನು ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾಪನಗಳನ್ನು ಗೆದ್ದುಕೊಂಡಿತ್ತು. 2024ರ ಚುನಾವಣೆಯಲ್ಲಿ 400 ಸ್ಥಾನಗಳ್ನು ಗೆಲ್ಲುವುದಕ್ಕಾಗಿ ಬಿಜೆಪಿಯು (Lok Sabha Election 2024) ಈಗನಿಂದಲೇ ಎಲ್ಲ ತಯಾರಿಯನ್ನು ಮಾಡಿಕೊಂಡಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡಿವೆ. 400 ಸ್ಥಾನಗಳನ್ನು ಗೆಲ್ಲುವುದು ಅವಾಸ್ತವಿಕ ಅಲ್ಲ. ಇದು ಸಾಧಿಸಬಹುದಾದ ಟಾರ್ಗೆಟ್ […]

Advertisement

Wordpress Social Share Plugin powered by Ultimatelysocial