‘ಥಗ್ಸ್ ಆಫ್ ರಾಮಘಡ’ ಚಿತ್ರತಂಡವನ್ನು ಹೊಗಳಿದ ಪೃಥ್ವಿ ಅಂಬಾರ್

 

ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ’ ಹಾಡನ್ನು ‘ದಿಯಾ’ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬಾರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಚಿತ್ರತಂಡ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದೆ.ನಗು ನಗುತ ಆವರಿಸೋ ಈ ಹುಡುಗಿ’ ಹಾಡಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು ಪ್ರೀತಿಯ ಹಾಡಿಗೆ ಹೆಸರಾಂತ ಗಾಯಕರಾದ ರಾಜೇಶ್ ಕೃಷ್ಣನ್, ಅನುರಾಧ ಭಟ್ ದನಿಯಾಗಿದ್ದಾರೆ. ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜನೆ ಈ ಹಾಡಿಗಿದೆ. ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಮೂವರು ಕೂಡ ರಂಗಭೂಮಿ ಕಲಾವಿದರಾಗಿದ್ದು, ಈ ಚಿತ್ರದ ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದಾರೆ. ಸೂರ್ಯ ಕಿರಣ್, ಪ್ರಭು ಹೊಸದುರ್ಗ, ಅಶ್ವಿನ್ ಹಾಸನ್, ಚಂದನ್ ರಾಜ್, ಮಹಾಲಕ್ಷ್ಮಿ, ಟೈಗರ್ ಗಂಗ, ಜಗದೀಶ್, ಸೂರ್ಯಕಿರಣ್, ರಾಘವೇಂದ್ರ, ವಿಶಾಲ್ ಪಾಟೀಲ್, ರವಿ ಸಾಲಿಯನ್, ಲೋಕೇಶ್ ಗೌಡ, ಭೀಷ್ಮ, ಸುಧೀನ್ ನಾಯರ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.ಹಾಡು ಬಿಡುಗಡೆ ಮಾತನಾಡಿದ ನಟ ಪೃಥ್ವಿ ಅಂಬಾರ್ ” ‘ಥಗ್ಸ್ ಆಫ್ ರಾಮಘಡ’ ತುಂಬಾ ಕ್ರಿಯೇಟಿವ್ ತಂಡ ಅಂತ ಹೇಳಬಹುದು, ಪ್ರತಿ ಶಾಟ್, ಎಲಿಮೆಂಟ್ ನಲ್ಲೂ ಹೊಸತನವಿದೆ. ಹಾಡು ನೋಡಿ ತುಂಬಾ ಖುಷಿ ಆಯ್ತು. ನಿರ್ದೇಶಕರು ತುಂಬಾ ಎಫರ್ಟ್ ಹಾಕಿ, ತುಂಬಾ ಚೆನ್ನಾಗಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಡೀ ಚಿತ್ರತಂಡ ತುಂಬಾ ಚೆನ್ನಾಗಿ ಅಭಿನಯ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ” ಎಂದು ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ರು.
“ಐಟಿ ಕ್ಷೇತ್ರ ಹಾಗೂ ಪ್ರಾಧ್ಯಾಪಕನಾಗಿ ಕೆಲಸ ಮಾಡಿದ ಅನುಭವವಿದೆ. ಸಿನಿಮಾ ಮೇಲಿನ ಅಪಾರ ಆಸಕ್ತಿಯಿಂದ ಚಿತ್ರರಂಗದ ಕಡೆ ಮುಖ ಮಾಡಿದೆ. ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ಮೂಲತಃ ನಾನು ಯಾದಗಿರಿಯವನು. ಈ ಚಿತ್ರದ ಕಥೆ ಉತ್ತರ ಕರ್ನಾಟಕ ಭಾಗದಲ್ಲಿ 1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದ್ದು ಅದಕ್ಕೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಸಿನಿಮಾ ಮಾಡಿದ್ದೇವೆ. ಉತ್ತರ ಕರ್ನಾಟಕ ಭಾಗದ ಒಂದು ಚಿಕ್ಕ ಹಳ್ಳಿಯಲ್ಲಿ ನಡೆಯುವ ಕಥೆ ಇದು ಅದಕ್ಕೆಂದೇ ಪೂರ್ತಿ ಸಿನಿಮಾವನ್ನು ಉತ್ತರ ಕರ್ನಾಟಕ ಭಾಗದಲ್ಲೇ ಚಿತ್ರೀಕರಣ ನಡೆಸಲಾಗಿದೆ. ಆದಷ್ಟು ರಿಯಲಿಸ್ಟಿಕ್ ಆಗಿಯೇ ತೆರೆ ಮೇಲೆ ತರುವ ಪ್ರಯತ್ನ ಮಾಡಿದ್ದೇವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ಮೂಗಿನ ಮೂಲಕ ಪಡೆಯಬಹುದಾದ ಕೋವಿಡ್‌ ಲಸಿಕೆ!

Sat Dec 24 , 2022
ಮೂಗಿನ ಮೂಲಕ ಪಡೆಯಬಹುದಾದ ಕೋವಿಡ್‌ ಲಸಿಕೆಯನ್ನು ಬೂಸ್ಟರ್‌ ಡೋಸ್‌ ಆಗಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೀಗಾಗಿ ಮೊದಲ ಎರಡು ಡೋಸ್‌ ಆಗಿ ಕೋವಿಶೀಲ್ಡ್‌ ಅಥವಾ ಕೋವ್ಯಾಕ್ಸಿನ್‌ ಲಸಿಕೆ ಪಡೆದ 18 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಬೂಸ್ಟರ್‌ ಡೋಸ್‌ ಆಗಿ ಹೈದರಾಬಾದ್‌ ಮೂಲದ ಭಾರತ್‌ ಬಯೋಟೆಕ್‌ ಅಭಿವೃದ್ಧಿಪಡಿಸಿರುವ ಇನ್‌ಕೋವ್ಯಾಕ್‌ ಇಂಟ್ರಾನಾಸಲ್‌ ವ್ಯಾಕ್ಸಿನ್‌ ಪಡೆಯಬಹುದು.ಮೊದಲ ಹಂತದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರವೇ ಇನ್‌ಕೋವ್ಯಾಕ್‌ ಲಭ್ಯವಿರಲಿದ್ದು, ಶೀಘ್ರವೇ ರಾಷ್ಟ್ರೀಯ ಕೋವಿಡ್‌ ಲಸಿಕಾ ಯೋಜನೆಯ […]

Advertisement

Wordpress Social Share Plugin powered by Ultimatelysocial